ರಾಜ್ಯದಲ್ಲಿ ಸಿದ್ದರಾಮಯ್ಯ ಗ್ಯಾರಂಟಿಗಳದ್ದೇ ಹವಾ: ಮೋದಿಗೆ ಮಣೆ ಹಾಕಲ್ಲ ಎನ್ನುತ್ತಿವೆ ಗುಪ್ತಚರ ಅಂಕಿಅಂಶ
ಬೆಂಗಳೂರು, ಮೇ 17: 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಭರ್ಜರಿಯಾಗಿ ಕಾಂಗ್ರೆಸ್ ಗೆಲುವು ಸಾಧಿಸಿಲು ಪ್ರಮುಖ ಕಾರಣ ಅಂದ್ರೆ ಗ್ಯಾರಂಟಿ ಯೋಜನೆಗಳು. ಈ ಗ್ಯಾರಂಟಿ ಯೋಜನೆಗಳನ್ನ ಮಾತು ಕೊಟ್ಟಂತೆ ಕಾಂಗ್ರೆಸ್ ಸರ್ಕಾರ ಹಂತ ಹಂತವಾಗಿ ಜಾರಿಗೊಳಿಸಿವೆ
ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿಗಳ ಪೈಕಿ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯನ್ನ ಜಾರಿಗೊಳಿಸಿದೆ. ಅಲ್ಲದೇ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು, ಕರ್ನಾಟಕದ ಜನತೆ ಸೂಕ್ತ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳು ತಲುಪಬೇಕು ಎಂಬ ನೀಡಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕಮಾರ್ ಪ್ರಚಾರ ನಡೆಸಿದ್ದಾರೆ.

ಇತ್ತ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳನ್ನ ಗೆಲ್ಲಬೇಕು ಎಂದು ಸೂಚನೆ ನೀಡಿತ್ತು. ಅದರಂತೆ ರಾಜ್ಯದಂತ ಗ್ಯಾರಂಟಿ ಯೋಜನೆಗಳನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಕಾಂಗ್ರೆಸ್ ಪ್ರಚಾರ ನಡೆಸಿದೆ. ಇತ್ತ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಬಿಜೆಪಿ 25 ಹಾಗೂ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಿದ್ದು, 28 ಕ್ಷೇತ್ರಗಳನ್ನ ಗೆಲ್ಲುವ ನಿರೀಕ್ಷೆಯಲ್ಲಿ ಕಮಲ-ದಳ ನಾಯಕರಿದ್ದಾರೆ.
ರಾಜ್ಯದಲ್ಲಿ ಎರಡು ಹಂತದ ಚುನಾವಣೆ ನಡೆದಿದ್ದು,ಜೂನ್ 4 ರಂದು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇತ್ತ ಸ್ಥಳೀಯ ನಾಯಕರ ಅಭಿಪ್ರಾಯ ಹಾಗೂ ಗ್ಯಾರಂಟಿಗಳಿಂದ ಕಾಂಗ್ರೆಸ್ ಪಕ್ಷದ ಮೇಲೆ ಆಗಿರುವ ಸಾಕಾರಾತ್ಮಕ ಪರಿಣಾಮದಿಂದಾಗಿ ಕಾಂಗ್ರೆಸ್ ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಬಾರಿ ಮಹಿಳಾ ಸಮುದಾಯದ ಮತಗಳು ಸಿಗಲಿವೆ ಎಂಬ ಮಾತುಗಳು ಕೇಳಿಬಂದಿದೆ. ಈಗಾಗಲೇ ಕಾಂಗ್ರೆಸ್ ನಾಯಕರು ಬರೋಬ್ಬರಿ 20 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸದಲ್ಲಿದ್ದಾರೆ.
ಇನ್ನೂ ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮೋದಿ ಹವಾ ಭರ್ಜರಿಯಾಗಿ ವರ್ಕೌಟ್ ಆಗಿತ್ತು. ಆದರೆ, ಈ ಬಾರೀ ರಾಜ್ಯದಲ್ಲಿ ಮೋದಿ ಹವಾ ಕಡಿಮೆಯಾದಂತೆ ಕಾಣುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಸಿದ್ದರಾಮಯ್ಯ ಹವಾ ಹೆಚ್ಚಾದಂತೆ ಕಾಣುತ್ತಿದೆ. ಇತ್ತ ಆಂತರಿಕ ವರದಿಯೊಂದು ಕಾಂಗ್ರೆಸ್ ನಾಯಕರ ಕೈ ಸೇರಿದ್ದು, ರಾಜ್ಯದಲ್ಲಿ 13 ರಿಂದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಲೀಂ ಅಹಮದ್ ಹೇಳಿದ್ದಾರೆ.
ಮಹಿಳೆ ಹಾಗೂ ಯುವಕರನ್ನ ಗುರಿಯಾಗಿಟ್ಟುಕೊಂಡು ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನ ನೀಡಿದೆ. ಮನೆಯ ಗೃಹಿಣಿಯರಿಗೆ ತಿಂಗಳಿಗೆ 2 ಸಾವಿರ ರೂ. ಸಹಾಯ ಧನ. ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್‌ವರೆಗೆ ಉಚಿತ ವಿದ್ಯುತ್, ಪದವೀಧರರಿಗೆ ತಿಂಗಳಿಗೆ 3 ಸಾವಿರ ರೂ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಬಿಪಿಎಲ್ ಕಾರ್ಡ್‌ದಾರರಿಗೆ ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿಯನ್ನ ಸಿದ್ದರಾಮಯ್ಯ ಸರ್ಕಾರ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಹವಾ ಹೆಚ್ಚಾಗಿದ್ದು, ರಾಜ್ಯದ ಜನತೆ ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯಲಿದೆ ಎನ್ನಲಾಗಿದೆ.












Click it and Unblock the Notifications