ಆ ವ್ಯಕ್ತಿ ರಾತ್ರೋರಾತ್ರಿ ಕದ್ದುಮುಚ್ಚಿ 10 ಸಾವಿರ ಗಿಫ್ಟ್ ಕೂಪನ್ ಹಂಚುತ್ತಿದ್ದಾರೆ: ಕುಮಾರಸ್ವಾಮಿ ಹೀಗೆ ಹೇಳಿದ್ದು ಯಾರಿಗೆ?
ರಾಮನಗರ: ತಮ್ಮನ್ನು ರಣಹೇಡಿ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆಯ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್ ಗಿಫ್ಟ್ ಕೂಪನ್, ಹಣ ಹಂಚಿಕೆ ಮಾಡುವವರು ರಣಹೇಡಿಗಳು ಎಂದು ಪರೋಕ್ಷವಾಗಿ ಡಿ ಕೆ ಬ್ರದರ್ಸ್ ಗೆ ತಿರುಗೇಟು ನೀಡಿದ್ದಾರೆ.
ರಣಹೇಡಿ ನಾನಲ್ಲ, ರಣಹೇಡಿಗಳು ಅವರು, ಕುತಂತ್ರದ ರಾಜಕಾರಣಿಗಳು ಅವರು. ಯಾರು ರಣಹೇಡಿ ಎಂದು ಮುಂದೆ ಚರ್ಚೆ ಮಾಡೋಣ. ರಣಹೇಡಿ ಸಂಸ್ಕೃತಿ ಡಿ.ಕೆ.ಶಿವಕುಮಾರ್ ಅವರದ್ದು. ನಾವು ನೇರವಾಗಿಯೇ ಚುನಾವಣೆ ಮಾಡುತ್ತಿದ್ದೇವೆ ಎಂದು ಗುಡುಗಿದರು.ಗಿಫ್ಟ್ ಕೂಪನ್ ಬಗ್ಗೆ ಚುನಾವಣಾ ಆಯೋಗಕ್ಕೆ ಈಗ ದೂರು ಕೊಟ್ಟರೂ ಏನು ಪ್ರಯೋಜನ ಇಲ್ಲ. ಹಿಂದೆ ಹಲವು ಬಾರಿ ದೂರು ಕೊಟ್ಟರೂ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ದೂರು ಕೊಟ್ಟರೆ ಏನು ಉಪಯೋಗ? ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಚುನಾವಣಾ ಆಯೋಗಕ್ಕೆ ಕೇಳುತ್ತೇನೆ. ಈ ರೀತಿ ಚುನಾವಣೆ ಮಾಡುವ ಬದಲು ನೇರವಾಗಿ, ಮುಕ್ತವಾಗಿ ಗಿಫ್ಟ್, ಹಣ ಹಂಚುವ ವ್ಯವಸ್ಥೆಯನ್ನೇ ತನ್ನಿ. ಅವರವರ ಶಕ್ತಿ ಅನುಸಾರ ಹಣ ಹಂಚಿ ವೋಟು ಪಡೆಯುವ ವ್ಯವಸ್ಥೆ ಜಾರಿಗೆ ತನ್ನಿ. ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಈ ರೀತಿಯ ವ್ಯವಸ್ಥೆ ಬಂದರೆ ಕಾಂಗ್ರೆಸ್ ನವರಿಗೆ ಒಳ್ಳೆಯದು ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಇದನ್ನು ಚುನಾವಣೆ ಎಂದು ಕರೆಯಬೇಕಾ? ಇದನ್ನು ಚುನಾವಣಾ ಅಂತ ಪರಿಗಣಿಸಲು ಸಾಧ್ಯವಾ? ಪ್ರಜಾಪ್ರಭುತ್ವದ ಹಬ್ಬ ಎಂದು ಇದನ್ನು ಕರೆಯಲು ಆಗುತ್ತದೆಯೇ? ದುಡ್ಡು ಇರುವವರಿಗೆ ಲೂಟಿ ಮಾಡುವವರಿಗೆ ಇದು ಹಬ್ಬವೇ ಹೊರತು ಜನಸಾಮಾನ್ಯರಿಗೆ ಅಲ್ಲ. ಚುನಾವಣಾ ಆಯೋಗ ಬಾಗಿಲು ಹಾಕಿಕೊಳ್ಳುವುದು ಒಳ್ಳೆಯದು. ಚುನಾವಣಾ ಆಯೋಗ ವ್ಯವಸ್ಥೆಯನ್ನು ಬದಲಾವಣೆ ಮಾಡಿಕೊಳ್ಳೋದು ಉತ್ತಮ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಈ ರೀತಿ ಅಡ್ಡದಾರಿಯಲ್ಲಿ, ವಾಮಮಾರ್ಗದಲ್ಲಿ ಮತ ಪಡೆಯುವ ಮಹಾನುಭಾವರು ಜನರಿಗೆ ಬುದ್ದಿ ಹೇಳಿದ್ದೇ ಹೇಳಿದ್ದು. ಈ ಮಹಾನುಭಾವ ಇಲ್ಲಿ ಇದ್ದಾರಲ್ಲ, ದೇಶದ ಬಗ್ಗೆ ಚರ್ಚೆ ಮಾಡ್ತಾರಲ್ಲ ಈ ಇಬ್ಬರು ಮಹಾನುಭಾವರು.. ಇವರ ಬಗ್ಗೆ ಚುನಾವಣಾ ಆಯೋಗ ಏನು ಮಾಡುತ್ತಿದೆ? ಎಂದು ಡಿಕೆಶಿ ಸಹೋದರರ ವಿರುದ್ಧ ಹರಿಹಾಯ್ದರು.
ಜೋತಿಷಿಯೊಬ್ಬರು ಹೇಳಿದಂತೆ ಇವರು ಕನಕಪುರದಲ್ಲಿ ಹಣ, ಗಿಫ್ಟ್ ಕೂಪನ್ ಹಂಚಿದ್ದಾರೆ ಎಂದು ಆರೋಪಿಸಿದ ಕುಮಾರಸ್ವಾಮಿ ಅವರು, ಅವರು ಹೇಳಿದರು ಎಂದು ₹505 ಹಣ, ಮಲೆಮಹದೇಶ್ವರ ದೇವಾಲಯದ ಲಾಡು ಮತ್ತು ಈ ಗ್ಯಾರಂಟಿ ಕಾರ್ಡ್ ಗಳನ್ನ ರಾತ್ರಿಯೆಲ್ಲಾ ಹಂಚಿದ್ದಾರೆ. ಕಾರ್ಡು ಹಂಚಿಕೆ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ನಮ್ಮ ಎರಡೂ ಪಕ್ಷಗಳ ಕಾರ್ಯಕರ್ತರು ತಡೆದಿದ್ದಾರೆ. ಜಿಲ್ಲಾಧಿಕಾರಿ ಮತ್ತು ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಯುತ್ತಿಲ್ಲ. ಸೋಲಿನ ಭೀತಿಯಿಂದ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications