ಲೋಕಸಭಾ ಚುನಾವಣೆ: ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಗೆಲುವು?- ಇಲ್ಲಿವೆ ಸಂಪೂರ್ಣ ವಿವರ
ಬೆಂಗಳೂರು, ಮೇ 15: ದೇಶಾದ್ಯಂತ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಎರಡು ಹಂತದಲ್ಲಿ ಚುನಾವಣೆ ನಡೆದಿದ್ದು, ಚುನಾವಣಾ ಬಳಿಕ ಸೋಲು ಗೆಲುವಿನ ಲೆಕ್ಕಾಚಾರ ರಾಜಕೀಯ ಪಾಳಯದಲ್ಲಿ ಕೇಳಿ ಬರುತ್ತಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿಗಳನ್ನ ನೀಡುವ ಮೂಲಕ 135 ಸ್ಥಾನಗಳನ್ನ ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಗೆ ಲೋಕಸಭಾ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಇತ್ತ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್ ಲೋಕಸಮರಕ್ಕೆ ಮೈತ್ರಿಯಾಗಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ವಿಶ್ವಾಸದಲ್ಲಿ ಕಮಲ-ದಳ ನಾಯಕರಿದ್ದಾರೆ. ಇತ್ತ ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದ ಜನತೆ ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ ಎಂದು ಹೇಳಲಾಗಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಆದರೆ, ಈ ಬಾರಿ ಕಾಂಗ್ರೆಸ್ ಹೈಕಮಾಂಡ್ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ನೀಡಿದೆ. ಅದರಂತೆ ಸಚಿವರುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಜವಾಬ್ದಾರಿ ನೀಡಿದೆ.
ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸುಲಭವಾಗಿ ಏಳರಿಂದ ಎಂಟು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು ಎಂದು ತಿಳಿದು ಬಂದಿದೆ.

ಯಾವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸುಲಭ?
* ಚಾಮರಾಜನಗರ - ಕಾಂಗ್ರೆಸ್
* ಚಿತ್ರದುರ್ಗದ - ಕಾಂಗ್ರೆಸ್
* ಕಲಬುರಗಿ - ಕಾಂಗ್ರೆಸ್
* ಕೊಪ್ಪಳ - ಕಾಂಗ್ರೆಸ್
* ಬೆಳಗಾವಿ - ಕಾಂಗ್ರೆಸ್
* ಚಿಕ್ಕೋಡಿ - ಕಾಂಗ್ರೆಸ್ ( 50 - 50 )
* ದಾವಣಗೆರೆ - ಕಾಂಗ್ರೆಸ್ ( 50 -50 )
* ಬೆಂ,ಗ್ರಾಮಾಂತರ - ಕಾಂಗ್ರೆಸ್ ( 50 - 50)












Click it and Unblock the Notifications