‘ಸೋಲಿನ ಭೀತಿಯಿಂದ ಕಮಲ-ದಳ ಮೈತ್ರಿ; ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು’
ಕೋಲಾರ: ಏಪ್ರಿಲ್ 18: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಸೋಲಿನ ಭೀತಿಯಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು,ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಸೃಷ್ಟಿಯಾಗಿದೆ. ಕರ್ನಾಟಕದಲ್ಲಿ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, ಈ ಚುನಾವಣೆಯಲ್ಲಿ ದೇಶ, ಸಂವಿಧಾನ, ಪ್ರಜಾಪ್ರಭುತ್ವ ಉಳಿಯಬೇಕು. ಅದು ಉಳಿಯಲು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು. ಈ ಲೋಕಸಭಾ ಚುನಾವಣೆ ಬಹಳ ಮಹತ್ತರವಾದ ಚುನಾವಣೆ ಎಂದು ಭಾವಿಸಬೇಕು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ.

ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲು ವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ. ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಸೋಲುತ್ತದೆ ಎನ್ನುವ ಭಯದಿಂದ ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ. ಜೆಡಿಎಸ್ ಕೂಡ ಕೋಲಾರ, ಮಂಡ್ಯ ಹಾಗೂ ಹಾಸನ ಸೇರಿ ಮೂರು ಸ್ಥಾನಗಳನ್ನು ಮಾತ್ರ ಸ್ಪರ್ಧಿಸುತ್ತಿದೆ. ಉಳಿದ ಕಡೆ 25 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಕೋಲಾರದ ಜನ ಕಾಂಗ್ರೆಸ್ ಗೆ ಬೆಂಬಲಿಸುತ್ತದೆ ಎಂದು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿರುವುದನ್ನು ನೋಡಿ ತಿಳಿಯುತ್ತದೆ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ 25 ಸ್ಥಾನಗಳನ್ನು ಈ ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಮಾಡಿಕೊಂಡಿದ್ದಾರೆ. ಹೆಚ್ .ಡಿ. ದೇವೇಗೌಡ ಹಾಗೂ ಹೆಚ್ .ಡಿ.ಕುಮಾರಸ್ವಾಮಿಯವರು ಮೊನ್ನೆಯವರೆಗೂ ದ್ವೇಷದ ಪಕ್ಷ, ಕ್ರಿಮಿನಲ್ ಪಕ್ಷ, ನರೇಂದ್ರ ಮೋದಿ ಯವರು ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ, ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದಿದ್ದರು. ಈಗ ನರೇಂದ್ರ ಮೋದಿ ಯವರನ್ನು ಸೇರಿಕೊಂಡಿದ್ದಾರೆ. ದೇವೇಗೌಡರು ನರೇಂದ್ರ ಮೋದಿ ಯವರನ್ನು ಬಹಳ ಹೊಗಳುತ್ತಿದ್ದಾರೆ. ಅಲ್ಲದೆ ಚುನಾವಣೆಯಾದ ಮೇಲೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದೂ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ 5 ವರ್ಷ ಪೂರ್ಣಾವಧಿ ಮುಗಿಸಿ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ ಎಂದರು. ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ . ಇದು ಅವರ ಭ್ರಮೆ ಎಂದರು. ಕ್ರಿಮಿನಲ್ ಪಕ್ಷ ದ ಜೊತೆ ಸೇರಿರುವ ಜೆಡಿಎಸ್ ಸೆಕ್ಯುಲರ್ ಎಂಬ ಪದಕ್ಕೆ ಅವಮಾನ ಮಾಡುತ್ತಿದ್ದಾರೆ. ಅದಕ್ಕೆ ಅವರು ಸಿದ್ದರಾಮಯ್ಯ ಅವರ ಗರ್ವ ಭಂಗ ಮಾಡುವುದಾಗಿ ಹೇಳಿದ್ದಾರೆ. ದೇವೇಗೌಡರು, ಬಿಜೆಪಿ ಏನೇ ಹೇಳಿದರೂ ಈ ಸಾರಿ ಕರ್ನಾಟಕದ ಜನ ಕಾಂಗ್ರೆಸ್ ಪಕ್ಷದ ಕೈಹಿಡಿಯಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.
ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಕೊಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದೇವೆ . ಬಿಜೆಪಿ 2018 ರಲ್ಲಿ 600 ಭರವಸೆ ನೀಡಿ 60 ಭರವಸೆ ಕೂಡ ಈಡೇರಿಸಿಲ್ಲ. ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಕರ್ನಾಟಕದ ಜನತೆಗೆ ಬಿಜೆಪಿ ದ್ರೋಹ ಬಗೆದಿದೆ.
ಮೇ 20 ರಂದು ಅಧಿಕಾರಕ್ಕೆ ಬನಾ ಕೂಡಲೇ ಗ್ಯಾರಂಟಿಗಳ ಅನುಷ್ಠಾನಕ್ಕೆ ತೀರ್ಮಾನ ಮಾಡಲಾಯಿತು. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮಿ ಯೌಜೆನ್ಯದಿ 1.17 ಕೋಟಿ ಗೃಹಿಣಿಯರಿಗೆ ತಿಂಗಳಿಗೆ 2000 ರೂ.ಗಳನ್ನು ನೀಡಲಾಗುತ್ತಿದೆ. ಹಾಗೂ ಯುವನಿಧಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಕರ್ನಾಟಕ ಹಸಿವು ಮುಕ್ತವಾಗಲು ಅನ್ನ ಭಾಗ್ಯ ಯೋಜನೆ ಜಾರಿಗೆ ತಂದೆವು. ಕೇಂದ್ರ ಸರ್ಕಾರ ಕುಯುಕ್ತಿಯಿಂದಾಗಿ ಅಕ್ಕಿ ತಪ್ಪಿದರೂ, ಅಕ್ಕಿ ದೊರೆಯುವವರೆಗೆ 170 ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದರು.
5 ಗ್ಯಾರಂಟಿ ಜೊತೆಗೆ 82 ಭರವಸೆ ಈಡೇರಿಸುವ ಪ್ರಯತ್ನವನ್ನು ಮಾಡಿದ್ದೇವೆ. ನರೇಂದ್ರ ಮೋದಿ ಯಾವರು ಪ್ರಧಾನಿಯಾಗಿ 10 ವರ್ಷಗಳಾದರೂ ಯಾವ ಭರವಸೆಯನ್ನು ಈಡೇರಿಸಿಲ್ಲ. ವಿದೇಶದಿಂದ ಕಪ್ಪು ಹಣ ತಂದು ಪ್ರತಿ ಕುಟುಂಬಕ್ಕೆ 15 ಲಕ್ಷ ರೂಪಾಯಿಗಳನ್ನು ಹಾಕುವುದಾಗಿ ಹೇಳಿದ್ದರು. ಇದನ್ನು ಹೇಳಿ 10 ವರ್ಷಗಳಾಯ್ತು. ಒಂದು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷಿಸುವುದಾಗಿ ಹೇಳಿದ್ದರು. ನಿರುದ್ಯೋಗ ಸಮಸ್ಯೆ ಬೃಹದಾಕಾರವಾಗಿ ಬೆಳೆದಿದೆ ಜೊತೆಗೆ ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ದರು. ಆದರೆ ಹಾಗೆ ಆಗಿಲ್ಲ. ಅಚ್ಚೇ ದಿನ್ ಬರಲಿಲ್ಲ. ಜನ ಬೆಲೆಯೇರಿಕೆಯಿಂದ ತತ್ತರಿಸಿದ್ದ ಸಂದರ್ಭದಲ್ಲಿ 5 ಗ್ಯಾರಂಟಿ ಗಳನ್ನು ಕೊಟ್ಟಿದ್ದೇವೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 25 ಗ್ಯಾರಂಟಿ ಗಳನ್ನು ಜಾರಿ ಮಾಡಲಿದೆ.












Click it and Unblock the Notifications