ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
ಬೆಂಗಳೂರು, ಏಪ್ರಿಲ್ 25: ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ಡಿ.ಕೆ.ಸುರೇಶ್ ಅವರ ಆಪ್ತರ ನಿವಾಸಗಳ ಮೇಲೆ ಬುಧವಾರ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗಂಗಾಧರ್ ಅವರ ಜತೆಗೆ ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಧರ್, ಸುರೇಶ್ ಅವರ ಆಪ್ತ ಸಹಾಯಕ ಸುಜಯ್, ಚಂದ್ರು, ಲಕ್ಷ್ಮಣ್, ಬಾಬು ಸೇರಿದಂತೆ ಹಲವರ ಮನೆ ಮೇಲೆ ದಾಳಿ ಮಾಡಲಾಗಿದೆ.
ಕನಕಪುರದಲ್ಲಿ ಪ್ರಚಾರ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚುನಾವಣಾ ಪ್ರಚಾರಕ್ಕೆ ಬರದಂತೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಐಟಿ ಇಲಾಖೆ ಉದ್ದೇಶಪೂರ್ವಕವಾಗಿ ದಾಳಿ ನಡೆಸುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಹಣ ಹಂಚುತ್ತಿಲ್ಲವೇ? ಅವರ ಮೇಲೆ ಏಕೆ ದಾಳಿ ನಡೆಯುತ್ತಿಲ್ಲ? ಐಟಿ ಇಲಾಖೆ ಗುರಿಪಡಿಸಲು ಜನರ ಪಟ್ಟಿಯೊಂದಿಗೆ ಸಿದ್ಧವಾಗಿದೆ ಮತ್ತು ಅವರು ಅದನ್ನು ಅನುಸರಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಡಿ.ಕೆ.ಸುರೇಶ್ ಅವರ ಚಾಲಕನ ಮನೆ ಮೇಲೆ ದಾಳಿ ನಡೆಸಿ ಅವರ ಪತ್ನಿ ಮತ್ತು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ನಡೆದ ಯಾವುದೇ ದಾಳಿಯಲ್ಲಿ ಐಟಿ ಇಲಾಖೆಗೆ ಯಾವುದೇ ನಗದು ಪತ್ತೆಯಾಗಿಲ್ಲ. ಇದು ನಮ್ಮ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸುವ ಉದ್ದೇಶಪೂರ್ವಕ ತಂತ್ರವಾಗಿದೆ. ಅವರು ಚುನಾವಣಾ ಸೋಲಿನ ಭಯದಿಂದ ನಿರ್ದಿಷ್ಟವಾಗಿ ಬೆಂಗಳೂರು ಗ್ರಾಮಾಂತರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.
ಉದ್ದೇಶಪೂರ್ವಕವಾಗಿ ನಮ್ಮ ಬ್ಲಾಕ್ ಅಧ್ಯಕ್ಷರ ಮನೆಗಳ ಮೇಲೆ ಐಟಿ ದಾಳಿ ನಡೆಯುತ್ತಿವೆ. ನಮಗೆ ಕೆಟ್ಟ ಹೆಸರು ತರಬೇಕು, ನಮ್ಮ ಕಾರ್ಯಕರ್ತರು ಚುನಾವಣೆಯಲ್ಲಿ ಭಾಗವಹಿಸದಂತೆ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಬಿಜೆಪಿ ಹಾಗೂ ದಳದವರು ಯಾರೂ ಹಣ ಹಂಚುತ್ತಿಲ್ಲವೇ? ಅವರ ಮನೆಗಳ ಮೇಲೆ ಯಾಕೆ ದಾಳಿಯಾಗುತ್ತಿಲ್ಲ? ಅವರ ವಿಚಾರದಲ್ಲಿ ಐಟಿ ಅಧಿಕಾರಿಗಳು ಕಣ್ಣುಮುಚ್ಚಿ ಕೂತಿದ್ದಾರಾ? ಅವರು ಯಾರ ಮನೆ ಮೇಲೆ ದಾಳಿ ನಡೆಯಬೇಕು ಎಂದು ಪಟ್ಟಿ ಮಾಡಿದ್ದಾರೆ.
ಬೇರೆ ಕಡೆಗಳಲ್ಲಿ ಗುತ್ತಿಗೆದಾರರ ಮನೆಯಲ್ಲಿ ಹಣ ಸಿಕ್ಕರೂ ಇದು ಡಿ.ಕೆ. ಶಿವಕುಮಾರ್ ಅವರ ಹಣ ಎಂದು ಹೇಳಲು ಒತ್ತಾಯಿಸುತ್ತಿದ್ದಾರೆ. ಇನ್ನು ನಮ್ಮ ಸುರೇಶ್ ಅವರ ಚಾಲಕನ ಮನೆ ಮೇಲೆ ದಾಳಿ ಮಾಡಿ ಆತನ ಹೆಂಡತಿ ಜುಟ್ಟನ್ನು ಎಳೆದಾಡಿದ್ದಾರೆ, ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾರೆ. ಐಟಿ ಅಧಿಕಾರಿಗಳಿಗೆ ಎಲ್ಲೂ ಹಣ ಸಿಕ್ಕಿಲ್ಲ. ಕೇವಲ ಚುನಾವಣೆಯಲ್ಲಿ ಭಾಗವಹಿಸದಂತೆ ಮಾಡಲು ಈ ರೀತಿ ಮಾಡುತ್ತಿದ್ದಾರೆ" ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ದಾಳಿ ಮಾಡಲಾಗುತ್ತಿದ್ದು, ಬೆದರಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರ ಅಭ್ಯರ್ಥಿ ಸೋಲುತ್ತಾರೆ ಎಂಬ ಕಾರಣಕ್ಕೆ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications