ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ? ಅವರು ಸತ್ಯಹರಿಶ್ಚಂದ್ರರೇ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ
ಬೆಂಗಳೂರು, ಏಪ್ರಿಲ್ 26: . 10 ಸಾವಿರ ರೂ. ಮೌಲ್ಯದ ಗಿಫ್ಟ್ ಕಾರ್ಡ್ ಅನ್ನು ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಕಡೆಯವರು ಮತದಾರರಿಗೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಗಂಭೀರ ಆರೋಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ ಕೆ ಶಿವಕುಮಾರ್, ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ ಹೇಳಿ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚುತ್ತಿದ್ದಾರೆ ಎಂದು ತೋರಿಸಲೆ. ಅವರು ಸತ್ಯ ಹರಿಶ್ಚಂದ್ರನ ಮೊಮ್ಮಗ. ನಾನೇನು ಎನ್ನುವುದು ಜನಕ್ಕೆ ಗೊತ್ತಿದೆ. ನಾನು ಕಂಡಿತವಾಗಿಯೂ ಸತ್ಯ ಹರಿಶ್ಚಂದ್ರ ಎಂದು ಕಿಡಿಕಾರಿದರು.

ಮುನಿರತ್ನ, ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಹಂಚುತ್ತಿದ್ದಾರೆ. ನಾವು ಹಂಚುತ್ತಿರುವುದು ನಮ್ಮ ಪ್ರಣಾಳಿಕೆ ಕಾರ್ಡ್ ಎಂದರು. ಇಷ್ಟಾದರೂ ಭಯ ಬಂದಿದೆಯಲ್ಲ. ಹೆದರಿಕೊಂಡು ರಣ ಹೇಡಿತರ ಬೇರೆ ಕಡೆ ಹೋಗಿದ್ದಾರೆ. ಅವರೇ ಚುನಾವಣೆಗೆ ನಿಂತುಕೊಳ್ಳಬೇಕಿತ್ತು. ಅಮಾಯಕರನ್ನು ನಿಲ್ಲಿಸಿ ಮಂಡ್ಯಕ್ಕೆ ಓಡಿ ಹೋಗಿದ್ದಾರೆ. ಕುಮಾರಸ್ವಾಮಿ ಏನೇನು ಮಾಡುತ್ತಿದ್ದಾರೆ, ಏನೇನು ಹಂಚುತ್ತಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲವೇ? ಮುನಿರತ್ನನ ಮೂಲಕ ಗೋಲ್ಡ್ ಕಾರ್ಡ್ ಮಾಡಿ ಹಂಚುತ್ತಿದ್ದಾರೆ. ಸಿನಿಮಾ ಸ್ಟೈಲ್ ಅಲ್ಲಿ ಮಾಡಿದ್ದಾರೆ. ಅವರೇಕೆ ಇಷ್ಟೊಂದು ಹತಾಶರಾಗಿದ್ದಾರೆ. ಹರಿಶ್ಚಂದ್ರನ ಮೊಮ್ಮಗ ಏನು ಹಂಚಿದ್ದಾನೆ.
ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿ, ಹೆಣ್ಣು ಮಕ್ಕಳನ್ನು ಅಗೌರವದಿಂದ ಕಂಡಿದ್ದಾರೆ. ಮಾಧ್ಯಮಗಳಲ್ಲಿ ಅವರ ಕರ್ಮಕಾಂಡ ತೋರಿಸುತ್ತಿದ್ದರು. ಇದರ ವಿರುದ್ದ ಹೊಸ ಕಾನೂನು ಮಾಡಬೇಕು ಎಂದು ಯಾರೋ ಹೇಳುತ್ತಿರುವುದನ್ನು ನಾನು ಕೇಳಿದೆ ಎಂದರು.
ಸಂಸದನೊಬ್ಬ ಹೆಣ್ಣುಮಕ್ಕಳ ಜೊತೆ ಅಗೌರವದಿಂದ ನಡೆದುಕೊಂಡಿದ್ದಾರೆ ಎಂದಾಗ "ಇದರ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ, ಡಾ.ಮಂಜುನಾಥ್, ರೇವಣ್ಣ ಅವರನ್ನು ಕೇಳಿ. ನಾನು ಉತ್ತರ ಕೊಡಲು ಆಗುವುದಿಲ್ಲ. ಅವರ ಆಚಾರ ವಿಚಾರ ಎಲ್ಲವೂ ಅವರೇ. ನನಗೆ ಇದನ್ನು ನೋಡಿ ಅವಮಾನವಾಗುತ್ತಿದೆ" ಎಂದರು
ಕೆಪಿಸಿಸಿ ಅಧ್ಯಕ್ಷರು ಬುದ್ದಿವಂತರೇ, ಅವರು ಏನು ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ "ನಾವು ಮಾಡಿರುವುದಕ್ಕೆ, ಮಾಡುತ್ತೇವೆ ಎಂದು ಹೇಳಿದ್ದಕ್ಕೆ ಜನ ಈಚೆ ಬಂದು ನಮಗೆ 136 ಸ್ಥಾನ ಕೊಟ್ಟಿದ್ದಾರೆ. ನೀನೇನು ಮಾಡಲಿಲ್ಲ ಅದಕ್ಕೆ ಜನ 18 ಸ್ಥಾನಗಳನ್ನು ಕೊಟ್ಟಿರುವುದು" ಎಂದು ವಾಗ್ದಾಳಿ ನಡೆಸಿದರು.
ಐಟಿ ದಾಳಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೇವಲ ಕಾಂಗ್ರೆಸ್ ಪಕ್ಷದ ನಾಯಕರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಐಟಿ ಅಧಿಕಾರಿಗಳು ಒಂದು ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಒಬ್ಬ ಬಿಜೆಪಿಯವರನ್ನು ಹಿಡಿದಿಲ್ಲ. ಐಟಿ ಅಧಿಕಾರಿಗಳಿಂದ ನಾನು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಮ್ಮ ಬ್ಲಾಕ್ ಅಧ್ಯಕ್ಷನಿಗೆ ಐಟಿ ಅಧಿಕಾರಿಯೊಬ್ಬ ಕಾಂಗ್ರೆಸ್ ಅಲ್ಲಿ ಯಾಕೆ ಇದ್ದಿಯಾ, ಬಿಜೆಪಿಗೆ ಹೋಗು ಎಂದು ಹೇಳುತ್ತಾರೆ. ಸುರೇಶ್ ಕಾರು ಚಾಲಕ ರಘು ಎಂಬಾತನ ಮಗ, ಹೆಂಡತಿಗೆ ಚಿತ್ರಹಿಂಸೆ ನೀಡಿದ್ದಾರೆ. ಎಲ್ಲರಿಗೂ ಕಿರುಕುಳ ನೀಡುತ್ತಿದ್ದು, ಏನೇನು ಕಿರುಕುಳ ನೀಡಿದರು ಎಂದು ಚುನಾವಣೆ ಮುಗಿದ ನಂತರ ಎಲ್ಲರಿಂದಲೂ ಅಫಿಡವಿಟ್ ಸಲ್ಲಿಸಲಿದ್ದೇನೆ. ಕಿರುಕುಳದ ವಿರುದ್ದ ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಲಿದ್ದೇನೆ ಎಂದರು.












Click it and Unblock the Notifications