ಚುನಾವಣೆ ಪ್ರಚಾರಕ್ಕೆ ಬೇರೆ ರಾಜ್ಯದಲ್ಲೂ ಸಿದ್ದರಾಮಯ್ಯಗೆ ಭರ್ಜರಿ ಡಿಮ್ಯಾಂಡ್: ಪ್ರಮುಖ ಕಾರಣಗಳೇನು ಗೊತ್ತಾ?

ಬೆಂಗಳೂರು, ಏಪ್ರಿಲ್‌ 10: 2023 ರಲ್ಲ ವಿಧಾನಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿಗಳನ್ನ ನೀಡುವ ಮೂಲಕ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್‌, ಇದೀಗ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದು, ಚುನಾವಣಾ ಭರಾಟೆ ಜೋರಾಗಿದೆ. ಈಗಾಗಲೇ ರಾಜ್ಯಾದ್ಯಂತ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ರಾಜ್ಯದಲ್ಲಿ ಮಾತ್ರವಲ್ಲದೇ ಹೊರ ರಾಜ್ಯದಲ್ಲೂ ಡಿಮ್ಯಾಂಡ್‌ ಹೆಚ್ಚಾಗಿದೆ.

ಹೌದು, ರಾಜ್ಯಕಂಡ ಧೀಮಂತ ನಾಯಕ. ಅನ್ನರಾಮಯ್ಯ ಅಂತಲೇ ಬಡವರ ಮನದಾಳದಲ್ಲಿ ಸ್ಥಾನ ಪಡೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ನಿರಂತರವಾಗಿ ಕರ್ನಾಟಕದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ವಿವಿಧ ರಾಜ್ಯದಲ್ಲೂ ಪ್ರಚಾರ ನಡೆಸಲು ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ಬರುತ್ತಿದೆ.

Lok Sabha Poll Election Campaign For Many States Invitation To Cm Siddaramaiah

ಈಗಾಗಲೇ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಲೋಕಸಭಾ ಚುನಾವಣಾ ಭರಾಟೆ ಜೋರಾಗಿ ಸದ್ದು, ಮಾಡಿದ್ದು, ಅಬ್ಬರದ ಪ್ರಚಾರದಲ್ಲಿ ರಾಜಕೀಯ ಪಕ್ಷಗಳು ಬ್ಯಿಸಿಯಾಗಿವೆ. ಇತ್ತ ಲೋಕಸಭಾ ಕ್ಷೇತ್ರವನ್ನ ಗೆಲ್ಲಬೇಕು ಎನ್ನುವ ನಿಟ್ಟಿನಲ್ಲಿ ಪ್ರತಿ ಕ್ಷೇತ್ರದ ಅಭ್ಯರ್ಥಿಗಳು ಪ್ರಭಾವಿ ನಾಯಕರನ್ನ ಪ್ರಚಾರಕ್ಕೆ ಆಹ್ವಾನಿಸುತ್ತಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಗೆ ಡಿಮ್ಯಾಂಡ್‌ ಹೆಚ್ಚಾಗುತ್ತಿದೆ.

ಕಾವೇರಿ ಇಂದ ಗೋದಾವರಿವರೆಗೂ ಸಿದ್ದರಾಮಯ್ಯ ಎಂಬ ಹೆಸರು ಕೇಳಿದ್ರೆ ಹೌದು ಹುಲಿಯಾ ಅಂತ ಹೆಚ್ಚು ಪ್ರಸಿದ್ದಿ ಪಡೆದಿದ್ದು, ಲೋಕ ಸಭೆ ಚುನಾವಣೆಯಲ್ಲಿ ಅನ್ನರಾಮಯ್ಯರಿಗೆ ಅನ್ಯ ರಾಜ್ಯದಲ್ಲೂ ಫುಲ್​ ಡಿಮ್ಯಾಂಡ್ ಹೆಚ್ಚಾಗಿದೆ. ಮಹಾರಾಷ್ಟ್ರ, ಕೇರಳ, ತಮಿಳುನಾಡು ಸೇರಿದಂತೆ ನಮ್ಮ ರಾಜ್ಯಕ್ಕೂ ಪ್ರಚಾರಕ್ಕೆ ಬನ್ನಿ ಅಂತ ಅಹ್ವಾನಗಳು ಬಂದಿವೆ ಎಂದು ತಿಳಿದು ಬಂದಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ತಂದ ಗ್ಯಾರಂಟಿಯಿಂದಾಗಿ ಅಧಿಕಾರ ಹಿಡಿದಿದೆ. ಈ ಗ್ಯಾರಂಟಿ ಅಸ್ತ್ರವನ್ನೇ ಬಳಿಸಿ ಬೇರೆ ರಾಜ್ಯಗಳಲ್ಲಿ ವಿಜಯ ಲಕ್ಷ್ಮಿಯನ್ನ ಒಲಿಸಿಕೊಳ್ಳಲು ಕಾಂಗ್ರೆಸ್​ ಕಾತುರವಾಗಿದೆ.

ಈಗಾಗಲೇ ಬೆಂಗಳೂರು ವ್ಯಾಪ್ತಿಯ ಬೆಂಗಳೂರು ದಕ್ಷಿಣ,ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಲೋಕಸಭಾ ಕ್ಷೇತ್ರಗಳು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರವನ್ನ ನಡೆಸಿದ್ದು, ಕರ್ನಾಟಕದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲೂ ಬೇಡಿಕೆ ಹೆಚ್ಚಾಗಿದ್ದು, ಹಲವು ಜನಪ್ರಿಯ ಯೋಜನೆಗಳನ್ನ ಜಾರಿಗೆ ತಂದು ರಾಜ್ಯದಲ್ಲಿ ಮನೆಮಾತಾಗಿರೋ ಸಿದ್ದರಾಮಯ್ಯ ನಮ್ಮ ರಾಜ್ಯಕ್ಕೂ ಪ್ರಚಾರಕ್ಕೆ ಬರಬೇಕು ಅಂತ ಹೊರ ರಾಜ್ಯದ ನಾಯಕರು ಡಿಮ್ಯಾಂಡ್ ಮಾಡಿದ್ದಾರೆ ಎಂದು ಹೇಳಲಾಗಿದೆ.

ಮಹಾರಾಷ್ಟ್ರ, ಕೇರಳ, ತಮಿಳುನಾಡಿಗೆ ಪ್ರಚಾರಕ್ಕೆ ಆಹ್ವಾನಿಸಿದ್ದು, ಮಹಾರಾಷ್ಟ್ರದ 7-8 ಕಡೆ ಪ್ರಚಾರ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿಗಳು ಬಂದಿವೆ. ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಹ್ವಾನ ಬಂದಿದ್ದು, ಒಂದು ದಿನದ ಮಟ್ಟಿಗೆ ಮಹಾರಾಷ್ಟ್ರದಲ್ಲಿ ಪ್ರಚಾರಕ್ಕೆ ಬನ್ನಿ ಎಂದು ಮನವಿ ಮಾಡಿದ್ದಾರೆ. ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಸ್ಪರ್ಧಿಸಿದ ಕೇರಳದ ವಯನಾಡು ಕ್ಷೇತ್ರದಲ್ಲೂ ಪ್ರಚಾರಕ್ಕೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+