ಮಂಡ್ಯಗೆ ಕಡೆಗೂ ಬರಲೇ ಇಲ್ಲ ಸೊಸೆ: ಸುಮಲತಾ ಪ್ರಚಾರಕ್ಕೆ ಬಂದಿಲ್ಲ ಯಾಕೆ? ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?
ಬೆಂಗಳೂರು, ಏಪ್ರಿಲ್ 27: ಲೋಕಸಭಾ ಚುನಾವಣೆ ಹಿನ್ನಲೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಏಪ್ರಿಲ್ 26 ರಂದು ಕರ್ನಾಟಕದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಮತದಾನ ನಡೆದಿದೆ. ಆದರೆ, ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳಿಗೆ ಪ್ರತಿಷ್ಠೆಯಾಗಿದ್ದು, ಮೈತ್ರಿ ಧರ್ಮಪಾಲನೆಯಲ್ಲಿ ಅಪಸ್ವರ ಕೇಳಿ ಬಂದಿದೆ.
ಹೌದು, ಲೋಕಸಭಾ ಚುನಾವಣೆಯಲ್ಲಿ ಈ ಬಾರೀ ಸುಮಲತಾ ಅಂಬರೀಶ್ ಅವರು ಕ್ಷೇತ್ರ ಬಿಟ್ಟುಕೊಟ್ಟಿದ್ದು, ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಪರ ಪ್ರಚಾರ ಮಾಡದೇ ದೂರ ಉಳಿದಿದ್ದು, ಕೊನೆಗೂ ಮಂಡ್ಯ ಕ್ಷೇತ್ರದಲ್ಲಿ ಪ್ರಚಾರ ಮಾಡದೇ ದೂರ ಉಳಿದಿದ್ದಾರೆ.

ಮಂಡ್ಯ ಕ್ಷೇತ್ರವನ್ನ ಪಡೆಯುವ ನಿಟ್ಟಿನಲ್ಲಿ ಈ ಹಿಂದೆ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಹಾಲಿ ಸಂಸದೆ ಸುಮಲತಾ ಅಂಬರೀಶ್ ಅವರ ಭೇಟಿ ಮಾಡಿದ್ರು. ಅಲ್ಲದೇ ನಾನು ಸುಮಲತಾ ಅಂಬರೀಶ್ ಅವರನ್ನ ಪ್ರಚಾರಕ್ಕೆ ಆಹ್ವಾನ ನೀಡಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಹಾಸನದಲ್ಲಿ ಕೆಲವು ಬಿಜೆಪಿ ನಾಯಕರ ಸಹಕಾರವಿಲ್ಲ, ಮಂಡ್ಯದಲ್ಲಿ ಸುಮಲತಾ ಸಹಾಯವಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ರು, ಇದೀಗ ಸುಮಲತಾ ಅವರು ನನಗೆ ಪ್ರಚಾರಕ್ಕೆ ಆಹ್ವಾನ ನೀಡಿಲ್ಲ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಪರ ಪ್ರಚಾರಕ್ಕೆ ಯಾರು ನನ್ನ ಕರೆಯಲಿಲ್ಲ ಎಂಬ ಸುಮಲತಾ ಹೇಳಿಕೆ ಕುರಿತು ಕುಮಾರಸ್ವಾಮಿ ಮಾತನಾಡಿ, ನಾನು ಅವರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೇನೆ. ಇದಕ್ಕಿಂತ ಇನ್ನೇನು ಮಾಡಬೇಕು ನಾನು. ಅಂಬರೀಶ್ ಅಭಿಮಾನಿಗಳು ಸಹ ನನಗೆ ಸಹಾಯ ಮಾಡಿದ್ದಾರೆ. ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾ ಅವರನ್ನಎರಡು ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ ಎಂದು ಹೇಳಿದ್ದಾರೆ.
ನಾನು ಗೆದ್ದಂತಹ ಸೀಟು ತ್ಯಾಗ ಮಾಡಿದ್ದೇನೆ: ಸುಮಲತಾ
ಮೋದಿಯವರು ಪ್ರಧಾನಿಯಾಗಬೇಕೆಂಬ ಉದ್ದೇಶದಿಂದ ನಾನು ಗೆದ್ದಂತಹ ಸೀಟ್ ತ್ಯಾಗ ಮಾಡಿದ್ದೀನಿ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಕೂಡ ಎನ್‌ಡಿಎಗೆ ಕೊಟ್ಟಿದ್ದೇವೆ. ಮೈತ್ರಿ ಪರ ನಮ್ಮ ಬೆಂಬಲಿಗರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ ಎಂದು ಮಂಡ್ಯ ಹಾಲಿ ಸಂಸದ ಸುಮಲತಾ ಅಂಬರೀಶ್ ಹೇಳಿದ್ದಾರೆ.
ನನಗೆ ಜನತಾ ದಳದ ನಾಯಕರು ಯಾವುದೇ ಸಭೆ, ಪ್ರಚಾರಕ್ಕೆ ಆಹ್ವಾನಿಸಿಲ್ಲ. ಅವರು ಕರೆದು ನಾನು ಬರದೇ ಇದ್ದರೆ ತಪ್ಪಾಗುತ್ತಿತ್ತು. ಆದರೆ, ಅವರು ನನ್ನ ಕರೆದೇ ಇಲ್ಲ. ಇನ್ನು ಪ್ರಚಾರಕ್ಕೆ ಬರಲಿಲ್ಲ ಎಂಬುದಕ್ಕೆ ಅರ್ಥವಿದೆಯೇ ಎಂದು ಸುಮಲತಾ ಮರು ಪ್ರಶ್ನಿಸಿದರು. ನಾನಿಲ್ಲದೆ ಅವರು ಚುನಾವಣೆ ಮಾಡಿಕೊಳ್ಳುತ್ತೇವೆಂಬ ಭಾವನೆ ಇರಬಹುದು. ದೇವೇಗೌಡ ಅವರು ಹೇಳಿಕೆ ನೀಡಿದ ನಂತರ ನನಗೆ ಒಂದಷ್ಟು ಕರೆ ಬಂದವು. ನನ್ನ ಯಾವುದೇ ಪ್ರಚಾರಕ್ಕೆ ಕರೆದಿಲ್ಲ. ಕುಮಾರಸ್ವಾಮಿ ನಮ್ಮ ಮನೆಗೆ ಬಂದು ಹೋದ ನಂತರ ನನಗೆ ಒಂದು ಫೋನ್ ಮಾಡಿ ಪ್ರಚಾರಕ್ಕೆ ಬನ್ನಿ ಎಂದು ಕೇಳಿಲ್ಲ. ಇಷ್ಟು ತ್ಯಾಗ ಮಾಡಿಯೂ ನನ್ನ ಕರೆಯಲಿಲ್ಲ ಎನ್ನುವುದು ನನಗೆ ಬೇಸರವಾಯಿತು. ಹಾಗಿದ್ದರೆ ನಾನು ಮಾಡಿದ್ದು ತಪ್ಪಾ? ಎಂದು ಪ್ರಶ್ನಿಸಿದರು.
ನನ್ನ ಅಭಿಮಾನಿಗಳು ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರು. ಸೋತ ಸೀಟನ್ನೇ ಬಿಡಲ್ಲ, ಅಂತಹದರಲ್ಲಿ ನಾನು ಗೆದ್ದ ಸೀಟು ಬಿಟ್ಟು ಕೊಟ್ಟಿದ್ದಿನಿ. ಅವರ ಮನಸ್ಸಿನಲ್ಲಿ ಏನಿದೆ ಎಂಬುದು ನನಗೆ ಗೊತ್ತಿಲ್ಲ. ಆದರೆ, ಅವರು ನನ್ನ ಪ್ರಚಾರಕ್ಕೆ ಕರೆದಿಲ್ಲ. ಪಕ್ಷ ಸೂಚನೆ ನೀಡಿದ ಕಡೆ ಹೋಗಿ ನಾನು ಪ್ರಚಾರಕ್ಕೆ ಹೋಗಿದ್ದೇನೆ. ಮಂಗಳೂರುವರೆಗೂ ಹೋಗಿದ್ದೀನಿ, ಮಂಡ್ಯಕ್ಕೆ ಬರುತ್ತಿರಲಿಲ್ಲವೇ? ಆ ದಿನ ನನ್ನ ಸೀಟನ್ನ ಬಿಟ್ಟಾಗಲೂ ಬೇಸರವಾಗಿರಲಿಲ್ಲ. ಆದರೆ, ದೇವೇಗೌಡರ ಹೇಳಿಕೆ ನನಗೆ ಬೇಸರ ತರಿಸಿದೆ. ಎನ್‌ಡಿಎ, ಬಿಜೆಪಿ ಗೆಲ್ಲಬೇಕು ಎಂಬುದು ಇದೆ. ಮಂಡ್ಯದಲ್ಲೂ ಒಳ್ಳೆಯ ಟ್ರೆಂಡ್ ಇದೆ ಎಂದು ಮಾತನಾಡುತ್ತಾರೆ. ರಾಜ್ಯದ 28 ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಬೇಕು ಎಂಬುದು ನನ್ನ ಆಶಯ ಎಂದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications