ನಟ ದರ್ಶನ್ ಪ್ರಚಾರ ನಡೆಸಿದ್ದ ಕೈ ಅಭ್ಯರ್ಥಿ ಹೀನಾಯ ಸೋಲು; ಕುಮಾರಸ್ವಾಮಿ ಭರ್ಜರಿ ಗೆಲುವು
ಮಂಡ್ಯ, ಜೂನ್ 04: ಕಳೆದ ಬಾರಿ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸಿ ಸುಮಲತಾ ಅಂಬರೀಶ್ ಅವರು ಗೆಲುವು ಸಾಧಿಸಿದ್ದರು. ಈ ಬಾರಿ ಬಿಜೆಪಿ ಜೊತೆಗೆ ಮೈತ್ರಿಯಾದ ಹಿನ್ನೆಲೆ ಮಂಡ್ಯ ಕ್ಷೇತ್ರದಿಂದ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಅವರು ಪ್ರಚಾರ ನಡೆಸಿದ್ದರು. ಇದೀಗ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಹೀನಾಯವಾಗಿ ಸೋಲು ಅನುಭವಿಸಿದ್ದಾರೆ.
28 ಲೋಕಸಭಾ ಕ್ಷೇತ್ರಗಳಲ್ಲಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿತ್ತು. ಅದರಂತೆ ಅಬ್ಬರದ ಪ್ರಚಾರ ಹಾಗೂ ತಂತ್ರಗಾರಿಕೆಯನ್ನ ಕಮಲ-ದಳ ನಾಯಕರ ತಂತ್ರಗಾರಿಕೆ ಕೊನೆಗೂ ಯಶಸ್ವಿಯಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳ ಭದ್ರಕೋಟೆಯಾಗಿದ್ದು, 2019 ರ ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ದಳಪತಿಗಳು ಈ ಬಾರಿ ಕ್ಷೇತ್ರವನ್ನ ವಶಪಸಿಕೊಳ್ಳುವ ನಿಟ್ಟಿನಲ್ಲಿ ಹಲವು ತಂತ್ರಗಳನ್ನ ನಡೆಸಿದ್ದು, ಕೊನೆಗೂ ಮಂಡ್ಯ ಜನತೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಕೈ ಹಿಡಿದಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳಿಗೆ ಪ್ರತಿಷ್ಠೆಯಾಗಿದ್ದು, ಆರಂಭದಲ್ಲೇ ಮೈತ್ರಿ ಧರ್ಮಪಾಲನೆಯಲ್ಲಿ ಅಪಸ್ವರ ಕೇಳಿ ಬಂದಿತ್ತು. ಆದರೂ ಸಹ ಮಾಜಿ ಮುಖ್ಯಮಂತ್ರಿ ಏಕಾಂಕಿಯಾಗಿ ಪಕ್ಷ ಕಾರ್ಯಕರ್ತರ ಜೊಡೆಗೂಡಿ ಪ್ರಚಾರವನ್ನ ನಡೆಸಿ, ಕೊನೆಗೂ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ಕುಮಾರಸ್ವಾಮಿ ಅವರು ಕಣಕ್ಕಿಳಿಸಿದ್ರೆ, ಇತ್ತ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಕಣದಲ್ಲಿದ್ರು. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು 6,02, 658 ಮತಗಳನ್ನ ಗಳಿಸಿದ್ರೆ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು, 3,81,158 ಮತಗಳನ್ನ ಪಡೆದಿದ್ದಾರೆ.ಒಟ್ಟು ಮಂಡ್ಯದಲ್ಲಿ 2,21,527 ಮತಗಳ ಅಂತರದಿಂದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ.
ಮಂಡ್ಯ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಸಂಸದ ಸುಮಲತಾ ಅಂಬರೀಶ್ ಅವರು ಮೈತ್ರಿ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರ ಪರವಾಗಿ ಮಂಡ್ಯ ಕ್ಷೇತ್ರದಲ್ಲಿ ಪ್ರಚಾರದಿಂದ ದೂರು ಉಳಿದಿದ್ರು. ಅಲ್ಲದೇ ಸುಮಲತಾ ಅಂಬರೀಶ್ ಅವರನ್ನ ಭೇಟಿ ಮಾಡಿ ಕುಮಾರಸ್ವಾಮಿ ಮಾತುಕತೆ ನಡೆಸಿದರು. ಸುಮಲತಾ ಅಂಬರೀಶ್ ಅವರು ಮಾತ್ರ ಮಂಡ್ಯ ಕ್ಷೇತ್ರದಲ್ಲಿ ಪ್ರಚಾರ ಮಾಡದೇ ದೂರ ಉಳಿದಿದ್ದರು, ಕಳೆದ ಬಾರಿ ಕಳೆದು ಕೊಂಡ ಕ್ಷೇತ್ರವನ್ನ ಮರಳಿ ಪಡೆಯಬೇಕು ಎನ್ನುವ ನಿಟ್ಟಿನಲ್ಲಿ ಪಣತೊಟ್ಟ ಕುಮಾರಸ್ವಾಮಿ ಅಬ್ಬರದ ಪ್ರಚಾರವನ್ನ ನಡೆಸಿ, ಬರೋಬ್ಬರಿ ಅಂತರಗಳಿಂದ ಜಯಗಳಿಸಿದ್ದಾರೆ.












Click it and Unblock the Notifications