ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಯಾರಿಗೆ ಎಷ್ಟು ಸ್ಥಾನ? ಆಂತರಿಕ ವರದಿಯ ಮಾಹಿತಿ ಇಲ್ಲಿದೆ

ಬೆಂಗಳೂರು, ಮೇ 27: ಕರ್ನಾಟಕದಲ್ಲಿ ಎರಡು ಹಂತದ ಲೋಕಸಭಾ ಚುನಾವಣೆ ನಡೆದಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‌ ನಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿ 28 ಕ್ಷೇತ್ರಗಳನ್ನ ಗುರಿಯನ್ನ ಹಾಕಿಕೊಂಡಿದ್ದು, ಕೈ ತನ್ನದೇ ಗ್ಯಾರಂಟಿ ಅಸ್ತ್ರಗಳ ಮೂಲಕ ಚುನಾವಣೆಯನ್ನ ಎದುರಿಸಿದೆ. ಇತ್ತ ಲೋಕಸಭಾ ಚುನಾವಣೆ ಕುರಿತು ಆಂತರಿಕ ವರದಿ ರಾಜಕೀಯ ನಾಯಕರಲ್ಲಿ ತಳಮಳ ಉಂಟಾಗುವಂತೆ ಮಾಡಿದೆ.

ಹೌದು, ಆಡಳಿತರೂಢ ಕಾಂಗ್ರೆಸ್‌ ಪಂಚ ಗ್ಯಾರಂಟಿಗಳ ಮೂಲಕ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ, ಇತ್ತ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗಳಿಸಿದ ಕಾಂಗ್ರೆಸ್ ಗೆ, ಕಾಂಗ್ರೆಸ್‌ ಹೈಕಮಾಂಡ್‌ ಲೋಕಸಭಾ ಚುನಾವಣೆಯಲ್ಲಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್‌ ನೀಡಿದೆ. ಅದರಂತೆ ಕಾಂಗ್ರೆಸ್‌ ನಾಯಕರು ಈ ಬಾರಿ ಚುನಾವಣೆಯಲ್ಲಿ ರಾಜ್ಯದ ಜನತೆ ನಮ್ಮ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸದಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರಿದ್ದಾರೆ.

Lok Sabha Poll How many seats can Congress BJP party win

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಲೋಕಸಭಾ ಚುನಾವಣೆಯಲ್ಲಿ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ. ಇತ್ತ ಕಮಲ-ದಳ ನಾಯಕರು 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದು, ಆಂತರಿಕ ವರದಿವೊಂದು ಕಾಂಗ್ರೆಸ್‌ -ಬಿಜೆಪಿ ನಾಯಕರ ಕೈ ಸೇರಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದ್ದ ಕೈ-ಕಮಲ ನಾಯಕರಿಗೆ ಬಿಗ್‌ ಶಾಕ್‌ ಎದುರಾಗಿದೆ.

ಇತ್ತ ಆಂತರಿಕ ವರದಿಯೊಂದು ಕಾಂಗ್ರೆಸ್‌ ನಾಯಕರ ಕೈ ಸೇರಿದ್ದು, ವರದಿಯಲ್ಲಿನ ಅಂಕಿ ಅಂಶಗಳ ಲೆಕ್ಕವನ್ನ ಕಂಡು ರಾಜ್ಯ ಕಾಂಗ್ರೆಸ್‌ ನಾಯಕರ ಸಂತಸದಲ್ಲಿದ್ದಾರೆ ಎನ್ನಲಾಗಿದೆ. ಈ ವರದಿಯಲ್ಲಿ ಬಿಜೆಪಿ 28 ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ನಿರೀಕ್ಷೆ ಇತ್ತು. ಆದರೆ, ಕಳೆದ ಬಾರಿ ಗೆದ್ದ ಸ್ಥಾನಗಳಿಗಿಂತ ಬಿಜೆಪಿ ಈ ಬಾರಿ ಕಡಿಮೆ ಸ್ಥಾನಗಳನ್ನ ಗೆಲ್ಲಲಿದೆ ಎಂದು ಆಂತರಿಕ ವರದಿ ಹೇಳಿದೆ. ಆಂತರಿಕ ವರದಿ ಪ್ರಕಾರ ಬಿಜೆಪಿ 15-16 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಹೇಳಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ ಪಕ್ಷವೂ ಈ ಬಾರಿ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುವ ವಿಶ್ವಾಸದಲ್ಲಿತ್ತು. ಅಲ್ಲದೇ ಮೊನ್ನೆಯಷ್ಟೇ ನಡೆದ ಸಚಿವರ ಔತಣ ಕೂಟದಲ್ಲಿ ನಾವು 20 ಕ್ಷೇತ್ರಗಳನ್ನ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸಚಿವರುಗಳ ಮುಂದೆ ಅಂಕಿ ಅಂಶಗಳ ಲೆಕ್ಕಾಚಾರಗಳ ಕುರಿತು ಚರ್ಚೆ ನಡೆಸಿದ್ದರು. ಆದರೆ, ಆಂತರಿಕ ವರದಿ ಪ್ರಕಾರ ಆಡಳಿತರೂಢ ಕಾಂಗ್ರೆಸ್‌ 12-13 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಪಕ್ಷದ ಆಂತರಿಕ ಪ್ರತಿಕ್ರಿಯೆಗಳು ಸೂಚಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+