ದಳಪತಿಗಳಿಗೆ ಶಾಕ್‌ ಕೊಟ್ಟ ಕನಕಪುರದ ಬಂಡೆ: ಮೂವರು ಮಾಜಿ ಶಾಸಕರು ಇಂದು ಕಾಂಗ್ರೆಸ್‌ ಸೇರ್ಪಡೆ !

ಬೆಂಗಳೂರು, ಮಾರ್ಚ್‌ 22: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸುವ ಕಾಂಗ್ರೆಸ್‌ಗೆ ಈ ಬಾರಿಯ ಲೋಕಸಭಾ ಚುನಾವಣೆ ಪ್ರತಿಷ್ಠೆಯಾಗಿದ್ದು, ಹೈಕಮಾಂಡ್‌ ಕೊಟ್ಟ ಟಾರ್ಗೆಟ್‌ ತಲುಪಲು ಹಲವು ತಂತ್ರಗಾರಿಕೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ನಡೆಸಿದ್ದಾರೆ.

ಹೌದು, ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ನಾಯಕರು ಭರ್ಜರಿ ತಯಾರಿ ನಡೆಸಿದ್ದಾರೆ. ಇತ್ತ ಕಾಂಗ್ರೆಸ್‌ ಗುರುವಾರ 17 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನ ಬಿಡುಗಡೆಯಾದ ಬೆನ್ನಲ್ಲೇ ಕನಕಪುರದ ಬಂಡೆ ಡಿ ಕೆ ಶಿವಕುಮಾರ್‌ ಚುನಾವಣಾ ಹೊತ್ತಿಲಿ ದಳಪತಿಗಳಿಗೆ ಬಿಗ್‌ ಶಾಕ್‌ ನೀಡಿದ್ದಾರೆ.

Lok Sabha Poll JDS Three Leaders Join Congress On Today

ಜೆಡಿಎಸ್‌ ನಾಯಕ ಮರಿತಿಬ್ಬೇಗೌಡ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್ ಸದಸ್ಯತ್ವಕ್ಕೆ ಮರಿತಿಬ್ಬೇಗೌಡ ರಾಜೀನಾಮೆ ನೀಡಿವ ಮೂಲಕ ದಳಪತಿಗಳಿಗೆ ಶಾಕ್‌ ನೀಡಿದ್ದೂ, ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ.

ಶುಕ್ರವಾರ 12 ಗಂಟೆಗೆ ಜೆಡಿಎಸ್​ ನಿಂದ ಹೊರ ಬಂದಿರುವ ಪ್ರಮುಖ ನಾಯಕರಾದ ಮರಿತಿಬ್ಬೇಗೌಡ , ಎಂ ಶ್ರೀನಿವಾಸ್ ಮತ್ತು ಅಪ್ಪಾಜಿ ಗೌಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+