Lok Sabha Election 2024: ಬಿಜೆಪಿ ಬಿಗ್ ಶಾಕ್: ಕಮಲ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದ ಕರಡಿ ಸಂಗಣ್ಣ
ಬೆಂಗಳೂರು, ಏಪ್ರಿಲ್ 17: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 278 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪೆ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಬಿಜೆಪಿಗೆ ಕಾಂಗ್ರೆಸ್ ಬಿಗ್ ಶಾಕ್ ನೀಡಿದೆ.
ಬಿಜೆಪಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿರುವ ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಪಕ್ಷದ ಬಾವುಟವನ್ನ ನೀಡುವ ಮೂಲಕ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಪಕ್ಷಕ್ಕೆ ಬರಮಾಡಿಕೊಂಡರು.

ಇನ್ನೂ ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳನ್ನು ತೆಗೆದುಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಆದರೆ ಯಡಿಯೂರಪ್ಪ, ಕುಮಾರಸ್ವಾಮಿ, ಅಶೋಕ ಅವರಿಗೆ ಗ್ಯಾರಂಟಿಗಳನ್ನು ಮುಟ್ಟಲು ರಾಜ್ಯದ ಜನ ಅವಕಾಶ ನೀಡುವುದಿಲ್ಲ.
ಕಾಂಗ್ರೆಸ್ ಪಕ್ಷದ ಮೇಲಿನ ಜನರ ಪ್ರೀತಿ ಕಂಡು ಅವರಿಗೆ ಅಸೂಯೆ ಆಗಿದೆ. ಆದ ಕಾರಣ ನಮ್ಮ ತಾಯಂದಿರ ಬಗ್ಗೆ ಮಾತನಾಡುತ್ತಿದ್ದಾರೆ. ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಅವರಿಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ" ಎಂದು ಹೇಳಿದರು.
ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಗ್ಯಾರಂಟಿಗಳ ಅಲೆಯಿದೆ. ಇಡೀ ದೇಶವೇ ಕರ್ನಾಟಕದ ಕಡೆಗೆ ತಿರುಗಿ ನೋಡುತ್ತಿದೆ. ಮಂಗಳವಾರ ಕೇರಳ ರಾಜ್ಯ ಪ್ರವಾಸಕ್ಕೆ ಹೋಗಿದ್ದೆ, ಅಲ್ಲಿಯೂ ಸಹ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ. ಇಡೀ ದೇಶದಲ್ಲಿ 100 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಎನ್ಡಿಎ ಬದಲಾಯಿಸಿದೆ. ರಾಜ್ಯದಲ್ಲಿ 14 ಸ್ಥಾನಗಳನ್ನು ಬದಲಾಯಿಸಿದೆ. ಯಾವುದೇ ಕಾರಣಕ್ಕೂ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. "ಇಂಡಿಯಾ ಒಕ್ಕೂಟ ಗೆದ್ದೇ, ಗೆಲ್ಲಲಿದೆ ಎಂದರು.
ನಿರುದ್ಯೋಗ, ಬೆಲೆಏರಿಕೆ ಸಮಸ್ಯೆಯ ಬಗ್ಗೆ ಜನರು ಚಿಂತನೆ ಮಾಡುತ್ತಿದ್ದಾರೆ. ಧರ್ಮ, ಜಾತಿ ಆದಾರದ ಮೇಲೆ ನಡೆಯುತ್ತಿರುವ ರಾಜಕಾರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದೆ. ಪ್ರಧಾನಿ ಮೋದಿ ಅವರು ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿಯ ಹಾಲಿ ಸಂಸದರೊಬ್ಬರು 400 ಸ್ಥಾನಗಳನ್ನು ಕೊಡಿ, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎರಡು ಮೂರು ಬಾರಿ ಹೇಳಿದರು. ಅವರನ್ನು ಪಕ್ಷದಿಂದ ಉಚ್ಚಾಟಿಸುವುದಕ್ಕೆ ಬಿಜೆಪಿ ಏಕೆ ಮುಂದಾಗಿಲ್ಲ? ಸಂವಿಧಾನ ಬದಲಾವಣೆ ಹೇಳಿಕೆಯ ನಂತರ ಉತ್ತರ ಭಾರತದಲ್ಲಿ ಜನ ದಂಗೆ ಎದ್ದಿದ್ದಾರೆ. ಆದ ಕಾರಣ ಈಗ ಬದಲಾವಣೆ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ.
ತೆಲಂಗಾಣ ಮತ್ತು ಕರ್ನಾಟಕದಲ್ಲಿ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದ ಮೇಲೆ ಗ್ಯಾರಂಟಿ ವಿರುದ್ಧ ಮಾತನಾಡುತ್ತಿದ್ದವರು, ಈಗ ಅದರ ಪರವಾಗಿ ಮಾತನಾಡುತ್ತಿದ್ದಾರೆ. ಮೋದಿ ಗ್ಯಾರಂಟಿ ಎಂದು ಕರೆಯುತ್ತಿದ್ದಾರೆ. ಬಿಜೆಪಿಗೆ ಸೋಲು ಗ್ಯಾರಂಟಿ ಎಂದು ಗೊತ್ತಾದ ಮೇಲೆ ಮೈತ್ರಿ ಮಾಡಿಕೊಂಡಿದ್ದಾರೆ. ಆಂಧ್ರ ಪ್ರದೇಶದಲ್ಲಿ ಸಂಬಂಧವೇ ಇಲ್ಲದ ಚಂದ್ರಬಾಬು ನಾಯ್ಡು ಜೊತೆ ಸೇರಿಕೊಂಡಿದ್ದಾರೆ. ಕರ್ನಾಟಕದಲ್ಲಿ ದಳದೊಟ್ಟಿಗೆ ಸೇರಿಕೊಂಡಿದ್ದಾರೆ.
ಸವದಿಯವರು ಹೇಳುತ್ತಿದ್ದರು, ಕರಡಿ ಸಂಗಣ್ಣ ಅವರನ್ನು ನಾನೇ ದಳದಿಂದ ಬಿಜೆಪಿಗೆ ಸೇರಿಸಿದ್ದೆ ಎಂದು. ಸರಳ, ಸಜ್ಜನಿಕೆಯ ನಾಯಕ. ಬಿಜೆಪಿ ಸುಮ್ಮನೆ ಅಬ್ಬರ ಮಾಡುತ್ತಿರುವ ಹೊತ್ತಿನಲ್ಲಿ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ. ಏಕೆಂದರೆ ಕಾಂಗ್ರೆಸ್ ಪಕ್ಷದ ನೀತಿ, ಸಿದ್ಧಾಂತ, ಕಾರ್ಯಕ್ರಮಗಳನ್ನು ಅವರು ಮೆಚ್ಚಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳು ಬಿಜೆಪಿಯನ್ನು ರಾಜ್ಯದಲ್ಲಿ ತೊಳೆದು ಹಾಕುತ್ತಿವೆ. ಬೆಳಗಾವಿಯ ಗಾಂಧಿ ಬಾವಿಯಿಂದ ನೀರನ್ನು ತೆಗೆದು ಕೊಳೆ ತೊಳೆದಂತೆ, ರಾಜ್ಯದ ಜನತೆ ಬಿಜೆಪಿಯನ್ನು ಗುಡಿಸಿ ಹಾಕುತ್ತಾರೆ.
ಕರಡಿ ಸಂಗಣ್ಣ ಅವರು ತಳಮಟ್ಟದ ರಾಜಕಾರಣದಿಂದ ಬೆಳೆದವರು. ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ನಂತರ 1999 ರಲ್ಲಿ ಜೆಡಿಯು ಪಕ್ಷದಿಂದ ಶಾಸಕರಾಗಿದ್ದರು. ನಂತರ ಎರಡು ಬಾರಿ ಸಂಸದರಾಗಿದ್ದರು. ಕೊಪ್ಪಳ ಭಾಗದಲ್ಲಿ ಭಾರಿ ಜನಸಂಪರ್ಕ ಹೊಂದಿರುವ ವ್ಯಕ್ತಿ ಎಂದು ಡಿ ಕೆ ಶಿವಕುಮಾರ್ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್












Click it and Unblock the Notifications