ನನ್ನ ವಿಡಿಯೋ ಬಿಟ್ಟವ್ರೆ, ಮಾಜಿ ಸಿಎಂ ಪುತ್ರನನ್ನು ಅರೆಸ್ಟ್ ಮಾಡಿ : ಕೆ ಎಸ್ ಈಶ್ವರಪ್ಪ ಹೇಳಿದ್ದೇನು?
ಶಿವಮೊಗ್ಗ, ಮೇ 08: ಕೆ ಎಸ್ ಈಶ್ವರಪ್ಪ ಅವರ ಪುತ್ರನಿಗೆ ಹಾವೇರಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ, ಶಿವಮೊಗ್ಗ ಕ್ಷೇತ್ರದಿಂದ ಈಶ್ವರಪ್ಪ ಪಕ್ಷೇತರವಾಗಿ ಸರ್ಧೆ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹೌದು, ಈ ಹಿಂದೆ ಬಿಜೆಪಿಯಲ್ಲಿದ್ದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅಟವರು 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಶಿವಮೊಗ್ಗ ಅಭ್ಯರ್ಥಿಯಾಗಿದ್ದ ಬಿ ವೈ ರಾಘವೇಂದ್ರ ಅವರ ಪರ ಪ್ರಚಾರ ಮಾಡಿದ್ದ ವಿಡಿಯೋವೊಂದು ಸದ್ಯ ಸಾಕಷ್ಟು ವೈರಲ್ ಆಗುತ್ತಿದ್ದು, ಈ ವಿಡಿಯೋವನ್ನ ಬಿ ವೈ ರಾಘವೇಂದ್ರ ಅವರೇ ಹಂಚಿದ್ದಾರೆ ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಕೆ ಎಸ್ ಈಶ್ವರಪ್ಪ ಅವರು ಮಾತನಾಡಿ, ಸೋಲುವ ಭೀತಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಾಮಮಾರ್ಗಕ್ಕೆ ಇಳಿದಿದ್ದಾರೆ. ನಲವತ್ತು ವರ್ಷಗಳ ರಾಜಕೀಯದಲ್ಲಿ ಇಂತಹ ನೀಚ ರಾಜಕಾರಣವನ್ನು ನೋಡಲಿಲ್ಲ. ಮಾನ್ಯ ರಾಘವೇಂದ್ರ ಅವರು ಚುನಾವಣೆಯಲ್ಲಿ ಪರಾಭವಗೊಳ್ಳುವ ಹೆದರಿಕೆಯಿಂದ ಅನೇಕ ಕ್ರೈಂಗಳನ್ನು ಮಾಡುತ್ತಿದ್ದಾರೆ ಎಂದು ಕೆ ಎಸ್ ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.
ಚುನಾವಣಾ ಸೋಲಿನ ಭೀತಿಯಲ್ಲಿ ರಾಜಕೀಯ ಷಡ್ಯಂತ್ರ ಮಾಡಲು ಹೊರಟಿದ್ದಾರೆ. ಈಶ್ವರಪ್ಪ ಗೆಲ್ಲುತ್ತಾರೆ ಎನ್ನುವ ಲೆಕ್ಕಾಚಾರ ಅವರಿಗೆ ಬಂದಿದೆ, ಹಾಗಾಗಿ ನನ್ನ ಹಳೆಯ ವಿಡಿಯೋವನ್ನು ಮತ್ತು ಈಶ್ವರಪ್ಪ ಬೆಂಬಲವಿದೆ ಎನ್ನುವ ಸುದ್ದಿಯನ್ನು ಹರಡಿಸುತ್ತಿದ್ದಾರೆ. ನನ್ನ ಪರವಾಗಿ ಈಶ್ವರಪ್ಪ ಪ್ರಚಾರ ಮಾಡುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.
ನನ್ನ ಪರವಾಗಿ ಬಿಜೆಪಿಗೆ ವೋಟ್ ಕೊಡಿ, ಈಶ್ವರಪ್ಪ', 'ನನಗೆ ನನ್ನ ತಪ್ಪಿನ ಅರಿವಾಗಿದೆ, ಕಾಂಗ್ರೆಸ್ಸಿಗೆ ಲಾಭವಾಗುವುದು ಬೇಡ ಈ ರೀತಿಯ ಶೀರ್ಷಿಕೆಯಲ್ಲಿ ಸ್ಥಳೀಯ ಪತ್ರಿಕೆಗಳಲ್ಲಿ ಹಳೆಯ ಫೋಟೋಗಳನ್ನು ಬಳಸಿ ಸುದ್ದಿಯನ್ನು ಹಬ್ಬಿಸಲಾಗಿದೆ ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ. ಚುನಾವಣೆ ಸೋಲಿನ ಭೀತಿಯಿಂದ ಬಂಢತನದ, ನಿರ್ಲಜ್ಜ ರಾಜಕೀಯ ಯಡಿಯೂರಪ್ಪನವರಿಂದ ನಿರೀಕ್ಷಿಸಿರಲಿಲ್ಲ. ಇಷ್ಟೇ ಅಲ್ಲ, ನನ್ನ ಹಳೆಯ ವಿಡಿಯೋವೊಂದು ಎರಡು ದಿನಗಳಿಂದ ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ. ನಾನು ಹಿಂದೆ ರಾಘವೇಂದ್ರ ಪರವಾಗಿ ಮತಯಾಚಿಸುವ ವಿಡಿಯೋವನ್ನು ಈಗಿನ ವಿಡಿಯೋ ಎನ್ನುವ ರೀತಿಯಲ್ಲಿ ಬಿಜೆಪಿಯವರು ಬಿಂಬಿಸುತ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.
ಇನ್ನೂ ಈ ಕುರಿತು ಜಿಲ್ಲಾಧಿಕಾರಿಗಳು, ಕೇಂದ್ರ ಚುನಾವಣಾ ಆಯೋಗ ಕ್ಕೆ, ಪೊಲೀಸ್ ಅಧಿಕಾರಿಗಳಿಗೆ ದೂರನ್ನು ನೀಡುತ್ತೇನೆ. ಸೂಕ್ತವಾದ ತನಿಖೆಗಳನ್ನು ನಡೆಸಿ, ರಾಘವೇಂದ್ರ ಅವರನ್ನು ಬಂಧಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಕೆ ಎಸ್ ಈಶ್ವರಪ್ಪ ಅವರು ಹೇಳಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications