ಬಿಜೆಪಿ ತೊರೆದ ಕಾಂಗ್ರೆಸ್‌ ಸೇರ್ಪಡೆಯಾದ ಬಿಎಸ್ ಯಡಿಯೂರಪ್ಪ ಆಪ್ತ

ಬೆಂಗಳೂರು, ಏಪ್ರಿಲ್‌ 24: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದವಿಧಾನ ಪರಿಷತ್ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವ ಸ್ಥಾನಕ್ಕೆ ಕೆ ಪಿ ನಂಜುಂಡಿ ಅವರು ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್​​ ಸುರ್ಜೇವಾಲ ನೇತೃತ್ವದಲ್ಲಿ ಕೈ ಹಿಡಿದರು. ನಂಜುಂಡಿ ಅವರು ರು. ಸುಮಾರು ಒಂದು ವಾರದಿಂದ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಭೇಟಿಯ ನಂತರ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿತ್ತು. ಇದೀಗ ಅಧಿಕೃತವಾಗಿ ಕಾಂಗ್ರೆಸ್​ ಪಕ್ಷ ಸೇರಿದ್ದಾರೆ.

Lok Sabha Poll Operation Hasta BJP Mlc KP Nanjundi joins Congress

ಇನ್ನೂ ಈ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಮಾತನಾಡಿ, ಇಂದು ಶ್ರಮಿಕ ವರ್ಗದ ಜನರು ಸಂಭ್ರಮಿಸುವ ದಿನ. ನಮ್ಮ ಹಿಂದುಳಿದ ವರ್ಗದ ನಾಯಕರಾದ ಕೆ.ಜಿ ನಂಜುಂಡಿ ಅವರು ಮನೆಗೆ ಮರಳಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಸ್ವಾಗತ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರ ಪರವಾಗಿ ಸ್ವಾಗತ ಕೋರುತ್ತೇನೆ.

ಇಂದು ಭಾರತದ ಸಂವಿಧಾನ ದಾಳಿಗೊಳಗಾಗುತ್ತಿರುವ ಸಂದರ್ಭದಲ್ಲಿ ನಾವೆಲ್ಲರೂ ಒಂದಾಗಿ ಹೋರಾಟ ಮಾಡಬೇಕಾಗಿದೆ. ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ವ್ಯವಸ್ಥಿತವಾಗಿ ನಾಶ ಮಾಡಲಾಗುತ್ತಿದೆ. ಒಂದು ಕಡೆ ಬಿಜೆಪಿಯ ನಾಯಕರಾದ ಅನಂತ ಕುಮಾರ್ ಹೆಗಡೆ, ಅರುಣ್ ಗೋಯಲ್, ಲಲ್ಲು ಸಿಂಗ್, ಜ್ಯೋತಿ ಮಿರ್ಬೆನ್ ಅವರು ಬಹಿರಂಗವಾಗಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡಲಿದೆ ಎಂದು ಹೇಳುತ್ತಿದ್ದಾರೆ.

ಈಗಾಗಲೇ ಭಆರತ ಸರ್ಕಾರದಲ್ಲಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದ ಅಧಿಕಾರಿಗಳು ಸರ್ಕಾರದ ಕಾರ್ಯದರ್ಶಿಯಾಗುತ್ತಿಲ್ಲ. ಜಂಟಿ ಕಾರ್ಯದರ್ಶಿಯಿಂದ ಉನ್ನತ ಸ್ಥಾನಗಳನ್ನು ಈ ಸಮುದಾಯದವರಿಗೆ ನೀಡುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ವಿಶ್ವಕರ್ಮ, ಈಡಿಗ ಸೇರಿದಂತೆ ನೂರಾರು ಹಿಂದುಳಿದ ವರ್ಗ ಎಲ್ಲಿ ಹೋಗಬೇಕು? ಇನ್ನು ಸಾರ್ವಜನಿಕ ಉದ್ದಿಮೆಗಳಲ್ಲಿ ಒಬಿಸಿ ಗಳಿಗೆ 27% ಮೀಸಲಾತಿ ನೀಡಲಾಗಿದ್ದು, ಈ ಉದ್ದಿಮೆಗಳನ್ನು ಖಾಸಗಿಕರಣ ಮಾಡುವ ಮೂಲಕ ಮೀಸಲಾತಿ ನಿರ್ಮೂಲನೆ ಮಾಡುತ್ತಿದ್ದಾರೆ.

ಭಾರತ ಸರ್ಕಾರದಲ್ಲಿ ಕೇವಲ ಓರ್ವ ಒಬಿಸಿ ಸಮುದಾಯದ ಅಧಿಕಾರಿ ಕಾರ್ಯದರ್ಶಿ ಹುದ್ದೆಯಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಿಂದುಳಿದ ಸಮಾಜದವರ ರಕ್ಷಣೆ ಮಾಡಲು ಹೇಗೆ ಸಾಧ್ಯ? ಹಿಂದುಳಿದ ವರ್ಗಗಗಳ ಆದಾಯ ಮಿತಿಯನ್ನು ಪರಿಶೀಲನೆ ಮಾಡಿ ಹೆಚ್ಚಳ ಮಾಡಿಲ್ಲ. ಭಾರತ ಸರ್ಕಾರದ ವ್ಯಾಪ್ತಿಯಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 8 ಲಕ್ಷಕ್ಕಿಂತ ಹೆಚ್ಚು ಹುದ್ದೆಗಳು ಹಿಂದುಳಿದ ವರ್ಗದವರಿಗೆ ಸೇರಬೇಕು.

ಈ ಹಿನ್ನೆಲೆಯಲ್ಲಿ ನಾವೆಲ್ಲರೂ ಶೋಷಿತ, ಹಿಂದುಳಿದ ಸಮುದಾಯಗಳ ರಕ್ಷಣೆಗೆ ಮುಂದಾಗಬೇಕು. ನಂಜುಂಡಿ ಅವರು ಕೇವಲ ವಿಶ್ವಕರ್ಮ ಸಮಾಜ ಮಾತ್ರವಲ್ಲ ಹಿಂದುಳಿದ ವರ್ಗಗಳ ಧ್ವನಿಯಾಗಿದ್ದಾರೆ? ಪರಿಶ್ರಮದ ದೇವರು ವಿಶ್ವಕರ್ಮ ಆಗಿದ್ದಾರೆ. ಜಗತ್ತಿನಲ್ಲಿ ಪರಿಶ್ರಮ ಇಲ್ಲದೆ ಏನಾದರೂ ಸಾಧನೆ ಮಾಡಲು ಸಾಧ್ಯವೇ? ಎಂದು ಪ್ರಶ್ನಿಸಿದರು.

ಜೂನ್ 4ರ ನಂತರ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ದೇಶದಲ್ಲಿ ಜಾತಿ ಗಣತಿ ಮಾಡಿ, ಸರ್ಕಾರಿ ಹುದ್ದೆಗಳನ್ನು ನೇಮಕ ಮಾಡಿ ಹಿಂದುಳಿದ ವರ್ಗಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರ ಜತೆಗೆ ಕಾಂಗ್ರೆಸ್ ಸರ್ಕಾರ ಮೀಸಲಾತಿ ಮಿತಿಯನ್ನು 50%ಗಿಂತ ಹೆಚ್ಚಳ ಮಾಡಲಾಗುವುದು. ಆಮೂಲಕ ಎಲ್ಲಾ ಸಮುದಾಯಗಳಿಗೂ ಅಗತ್ಯ ನೆರವು ನೀಡಲಾಗುವುದು. ಈ ನಿಟ್ಟಿನಲ್ಲಿ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+