ಸಿದ್ದರಾಮಯ್ಯ ಬದಲಾವಣೆ, ಡಿಕೆಶಿಗೆ ಲಕ್, ವಿಜಯೇಂದ್ರಗೆ ಮೊದಲ ಪ್ರಯತ್ನದಲ್ಲೇ ಯಶಸ್ಸು
ಬೆಂಗಳೂರು, ಜೂನ್ 04: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಗೆದ್ದು ಬೀಗಿತ್ತು.ಈ ಹಿಂದೆ ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನವನ್ನ ಗೆಲ್ಲುವ ಗುರಿಯನ್ನ ಕೈ ನಾಯಕರು ಹಾಕಿಕೊಂಡಿದ್ದರು.
ಲೋಕಸಭಾ ಚುನಾವಣೆಯ ಮತದಾನ ಜೂನ್ 01 ರಂದು ಮುಕ್ತಾಯವಾಗಿದ್ದು, ಚುನಾವಣಾ ಫಲಿತಾಂಶಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈಗಾಗಲೇ ಕರ್ನಾಟಕ ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿದೆ. ಈಗಾಗಲೇ ಹಲವು ಸಂಸ್ಥೆ ಹಾಗೂ ವಾಹಿನಿಗಳು ನಡೆಸಿರುವ ಎಕ್ಸಿಟ್ ಪೋಲ್‌ಗಳಲ್ಲಿ , ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತವನ್ನ ಪಡೆಯಲಿದೆ. ಅಲ್ಲದೇ ಕರ್ನಾಟಕದಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಮೈತ್ರಿಯಾಗಿರುವ ಬಿಜೆಪಿ ಮೈತ್ರಿ ಹೆಚ್ಚಿನ ಸ್ಥಾನವನ್ನ ಗೆಲ್ಲಲಿದೆ ಎಂದು ಎಕ್ಸಿಟ್ ಪೋಲ್‌ಗಳು ಹೇಳಿವೆ.

ಇನ್ನೂ ಕಾಂಗ್ರೆಸ್ ಹೈಕಮಾಂಡ್ ಕನಿಷ್ಠ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ನೀಡಿತ್ತು. ಆದರೆ, ಹಲವು ಎಕ್ಸಿಟ್ ಪೋಲ್ ಗಳು ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಮಾಹಿತಿ ತೋರಿಸಿದ್ದಾರೆ. ಆದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ಎಂಬ ವಿಶ್ವಾಸವನ್ನ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸಿದ್ದಾರೆ.
ಇತ್ತ ಕೈ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಪದೇ ಪದೇ ಮುನ್ನಲ್ಲೆಗೆ ಬರುತ್ತಿದ್ದು, ಕಾಂಗ್ರೆಸ್ ಹೈಕಮಾಂಡ್ ಲೋಕಸಭಾ ಚುನಾವಣೆಯಲ್ಲಿ ಕೊಟ್ಟ ಗುರಿಯನ್ನ ತಲುಪದಿದ್ದರೇ ಸಿದ್ದರಾಮಯ್ಯ ತಲೆದಂಡವಾಗಲಿದೆ ಎನ್ನುವ ಚರ್ಚೆ ಕೈ ಪಾಳಯದಲ್ಲೇ ಕೇಳಿ ಬಂದಿತ್ತು. ಈ ಹಿಂದೆ ಕಾಂಗ್ರೆಸ್ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಾಬೇಕಾದರೇ ಹೆಚ್ಚು ಸ್ಥಾನಗಳನ್ನ ಗೆಲ್ಲಿಸಿಕೊಡಿ ಎಂದು ಹಲವು ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದರು.
ಅಂದುಕೊಂಡಂತೆ ಕಾಂಗ್ರೆಸ್ 20 ಕ್ಷೇತ್ರಗಳನ್ನ ಗೆಲ್ಲುವುದು ಕಷ್ಟಸಾಧ್ಯ ಎಂದು ಈಗಾಗಲೇ ಹಲವು ಸಮೀಕ್ಷೆಗಳು ತಿಳಿಸಿದ್ದು, ಬಹುತೇಕ ಸಮೀಕ್ಷೆಗಳು 4-6 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿವೆ. ಹೀಗಾಗಿ ಸಮೀಕ್ಷೆಯಂತೆ ಕರ್ನಾಟಕದಲ್ಲಿ ಬಿಜೆಪಿ ಮೈತ್ರಿ ಕೂಟ ಹೆಚ್ಚು ಸ್ಥಾನವನ್ನ ಗೆಲ್ಲಲಿದ್ದು,ಮುಖ್ಯಮಂತ್ರಿ ಬದಲಾವಣೆ ಬಹುತೇಕ ಫಿಕ್ಸ್ ಎನ್ನಲಾಗಿದ್ದು, ಲೋಕಸಭಾ ಚುನಾವಣೆಯ ಫಲಿತಾಂಶವನ್ನ ಆಧಾರಿಸಿ ಮುಂದಿನ ಸ್ಥಳೀಯ ಹಾಗೂ ಬಿಬಿಎಂಪಿ ಚುನಾವಣೆ ಹೊತ್ತಲಿ ಕೈ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾಗುವ ಸಾಧ್ಯತೆ ಹೆಚ್ಚಾಗಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನದ ಅವಕಾಶ ಸಿಗುವ ಸಾಧ್ಯತೆ ಇದೆ.
ವಿಜಯೇಂದ್ರಗೆ ಮೊದಲ ಪ್ರಯತ್ನದಲ್ಲೇ ಯಶಸ್ಸು
ಪಕ್ಷದ ಕಾರ್ಯಕರ್ತರಾಗಿ, ಬಿಜೆಪಿ ರಾಜ್ಯ ಉಪಧ್ಯಾಕ್ಷರಾಗಿ ಸಾಕಷ್ಟು ಉಪಚುನಾವಣೆಯ ಜವಾಬ್ದಾರಿಯನ್ನ ನಿರ್ವಹಿಸಿದ್ದು, ಹೈಕಮಾಂಡ್ ಕೊಟ್ಟ ಗುರಿಯನ್ನ ತಲುಪಿರುವ ವಿಜಯೇಂದ್ರ ಅವರ ಮೇಲೆ ಭರವಸೆ ಇಟ್ಟು ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷಕ್ಕೆ ಅನಿವಾರ್ಯ ಎಂದು ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯನ್ನ ನೀಡಿತ್ತು. ಆರಂಭದಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಸಾರಥಿ ಹುದ್ದೆ ನೀಡಿದ ಹಿನ್ನೆಲೆ ಕಮಲ ಪಾಳಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಇದೀಗ ಚುನಾವಣೋತ್ತರ ಸಮೀಕ್ಷೆ ಪ್ರಕಟದ ಬಳಿಕ ಬಿಜೆಪಿಯಲ್ಲಿ ಉತ್ಸಹ ಹೆಚ್ಚಾಗಿದೆ.
ವಿಧಾನಸಭಾ ಚುಣಾವಣೆಯಲ್ಲಿ ಹಲವು ಹಿರಿಯರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅಲ್ಲದೇ ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಕಡಗಣನೆ ಎಂಬ ವಿಚಾರ ಸಾಕಷ್ಟು ಚರ್ಚೆಯಾಗಿದ್ದು, ಕಮಲ ಪಾಳಯದಲ್ಲಿಯೇ ಆಂತರಿಕ ಕಲಹ ಹೆಚ್ಚಾಗಿತ್ತು. ಈ ಎಲ್ಲಾ ಅಂಶಗಳನ್ನ ತಿಳಿಗೊಳಿಸಿ ಲೋಕಸಭಾ ಚುನಾವಣೆಯನ್ನ ಎದುರಿಸಿರುವ ವಿಜಯೇಂದ್ರ ಅವರು ಮೊದಲ ಪ್ರಯತ್ನದಲ್ಲೇ ಯಶಸ್ಸು ಕಂಡಿದ್ದು, ಹೈಕಮಾಂಡ್ ನಾಯಕರು ಇಟ್ಟ ನಂಬಿಕೆಯನ್ನ ಉಳಿಸಿಕೊಳ್ಳುವ ಮೂಲಕ ಯಡಿಯೂರಪ್ಪ ಅವರ ಗೌರವವನ್ನ ಮತ್ತಷ್ಟು ವಿಜಯೇಂದ್ರ ಹೆಚ್ಚಿಸಿದ್ದಾರೆ ಎನ್ನಲಾಗಿದೆ.
{document1}












Click it and Unblock the Notifications