ಆರಂಭದಲ್ಲೇ ವಿಜಯೇಂದ್ರಗೆ ಬಿಗ್‌ ಸಕಸ್ಸ್‌ ; ಬಿಜೆಪಿಯ ಮುಂದಿನ ಸಿಎಂ ಇವರೇ?

ಬೆಂಗಳೂರು, ಜೂನ್‌ 04: 2023 ರ ವಿಧಾನಸಭಾ ಚುಣಾವಣೆಯಲ್ಲಿ ಬಿಜೆಪಿ ಹೈಕಮಾಂಡ್‌ ನಾಯಕರ ನಿರೀಕ್ಷೆಯಂತೆ ರಾಜ್ಯ ಬಿಜೆಪಿ ನಾಯಕರು ಕಳೆದುಕೊಂಡಿದ್ರು. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪೃಧಾನಿ ನರೇಂದ್ರ ಮೋದಿ, ಅಮಿತ್‌ ಶಾ , ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವು ಹೈಕಮಾಂಡ್‌ ರಾಜ್ಯದಲ್ಲಿ ಅಬ್ಬರದ ಪ್ರಚಾರವನ್ನ ನಡೆಸಿದ್ರು, ಸಹ ಬಿಜೆಪಿ ಹೀನಾಯವಾಗಿ ಸೋಲಿ ಕಂಡ ಬಳಿಕ ಬಿಜೆಪಿ ಹೈಕಮಾಂಡ್‌ ರಾಜ್ಯ ನಾಯಕರನ್ನ ಕಡೆಗಣಿಸುತ್ತಿದ್ದಾರೆ ಎಂದು ಚರ್ಚೆಯಾಗಿತ್ತು.

ಹೌದು, ಕಳೆದ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ವಿರೋಧ ಪಕ್ಷದಲ್ಲಿದ್ದ ಬಿಜೆಪಿ ರಾಜ್ಯದಲ್ಲಿ ತೀವ್ರ ಮುಜುಗರವನ್ನ ಅನುಭವಿಸಿತ್ತು. ಹೀಗಾಗಿ ಬರೋಬ್ಬರಿ ಆರು ತಿಂಗಳ ಬಳಿಕ ಕರ್ನಾಟಕ ವಿರೋಧ ಪಕ್ಷದ ನಾಯಕನನ್ನಾಗಿ ಆರ್‌ ಅಶೋಕ್‌ ಅವರನ್ನ ಬಿಜೆಪಿ ಹೈಕಮಾಂಡ್‌ ಆಯ್ಕೆ ಮಾಡಿತ್ತು. ಬಿಜೆಪಿ ಹೈಕಮಾಂಡ್‌ ಈ ಹಿಂದೆ ರಾಜ್ಯ ಬಿಜೆಪಿ ನಾಯಕರ ಭೇಟಿಗೆ ಅವಕಾಶವನ್ನ ನೀಡುತ್ತಿಲ್ಲ ಎಂದು ಕಾಂಗ್ರೆಸ್‌ ನಾಯಕರು ತೀವ್ರ ಟೀಕೆಯನ್ನ ನಡೆಸಿದ್ದರು.

Lok Sabha Poll Result Is Vijayendra who has seen big success the next CM candidate in BJP

ಈ ಹಿಂದೆ ಇದ್ದ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್‌ ಕುಮಾರ್‌ ಕಟೀಲ್‌ ಅವರ ಕಾರ್ಯವೈಖರಿ ಕುರಿತು ಬಿಜೆಪಿ ಪಾಳಯದಲ್ಲೇ ತೀವ್ರ ಅಪಸ್ವರಗಳು ಕೇಳಿ ಬಂದಿತ್ತು. ಹೀಗಾಗಿ ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು ಎಂದು ಬಿಜೆಪಿ ಹೈಕಮಾಂಡ್‌ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ಸಾರಥಿ ಪಟ್ಟವನ್ನ ನೀಡಿತ್ತು. ಆರಂಭದಲ್ಲಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಸೇರಿದಂತೆ ಹಲವು ಹಿರಿಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಇನ್ನೂ ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟಗಳು ಹೆಚ್ಚಾಗಿತ್ತು. ಲಿಂಗಾಯತರ ಕಡೆಗಣನೆಯಿಂದ ಬಿಜೆಪಿಗೆ ಸೋಲಾಗಿದೆ ಎಂದು ಬಹಿರಂಗವಾಗಿಯೇ ಹಲವು ನಾಯಕರು ಅಸಮಾಧಾನ ಹೊರಹಾಕಿದ್ರು. ಲೋಕಸಭಾ ಚುನಾವಣೆಯ ಬಳಿಕ ಸಿದ್ದತೆ, ಮೈತ್ರಿ ಸಮನ್ವಯತೆ ಹಾಗೂ ಪಕ್ಷದಲ್ಲಿನ ಹಿರಿಯ ನಾಯಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಯಶಸ್ವಿಯಾಗಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕೊಟ್ಟಿದ ಆರಂಭದಲ್ಲೇ ಬಿಜೆಪಿ ಹೈಕಮಾಂಡ್‌ ಕೊಟ್ಟ ಜವಾಬ್ದಾರಿಯನ್ನ ಬಿ ವೈ ವಿಜಯೇಂದ್ರ ಯಶಸ್ವಿಯಾಗಿ ನಿರ್ವಹಿಸಿದ್ದಾರ. ಈ ಹಿಂದೆ ಹಲವು ವಿಧಾನಸಭೆಯ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬರುವಲ್ಲಿ ವಿಜಯೇಂದ್ರ ಅವರು ಯಶಸ್ವಿಯಾಗಿದ್ರು. ಅದರಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಭರ್ಜರಿ ಗೆಲುವನ್ನ ಎನ್‌ ಡಿಎ ಗೆಲ್ಲಲಿದೆ ಎಂದು ಹೇಳಲಾಗಿದೆ. ಹಲವು ವಾಹಿನಿಗಳ ನೀಡಿದ ಸಮೀಕ್ಷೆಯ ಆಧಾರದ ಮೇಲೆ ರಾಜ್ಯದಲ್ಲಿ ಬಿಜೆಪಿ 20 ಲೋಕಸಭಾ ಕ್ಷೇತ್ರಗಳಿಗಿಂತ ಹೆಚ್ಚು ಸ್ಥಾನಗಳನ್ನ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+