ಸಟ್ಟಾ ಬಜಾರ್ ಲೆಕ್ಕಾಚಾರ; ಕರ್ನಾಟಕದಲ್ಲಿ ಬಿಜೆಪಿ ಗೆಲ್ಲುವ ಸ್ಥಾನಗಳೆಷ್ಟು?

ಬೆಂಗಳೂರು, ಮೇ 30: ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಮತದಾನ ಎರಡು ಹಂತದಲ್ಲಿ ನಡೆದಿದ್ದು, ಫಲಿತಾಂಶಕ್ಕಾಗಿ ಮೂರು ರಾಜಕೀಯ ಪಕ್ಷಗಳು ಕಾದು ಕುಳಿತಿದ್ದಾರೆ. ಇತ್ತ ರಾಜಕೀಯ ನಾಯಕರು ತಮ್ಮದೇ ಆದ ವಿಶ್ಲೇಷಣೆಯನ್ನ ನಡೆಸುತ್ತಿದ್ದು, 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ವಿಶ್ವಾಸದಲ್ಲಿದ್ದ ಬಿಜೆಪಿಗೆ ಸಟ್ಟಾ ಬಜಾರ್ ಲೆಕ್ಕಾಚಾರದಿಂದ ಶಾಕ್‌ ಎದುರಾಗಿದೆ.

ಲೋಕಸಭಾ ಚುನಾವಣೆ ಎಕ್ಸಿಟ್‌ ಪೋಲ್‌ಗೂ ಮುನ್ನ ಸಟ್ಟಾ ಬಜಾರ್ ಲೆಕ್ಕಾಚಾರ ದೇಶದ ಗಮನ ಸೆಳೆದಿದೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ಸಹ ಸಟ್ಟಾ ಜಜಾರ್‌ ಕಾಂಗ್ರೆಸ್‌ 137 ಸ್ಥಾನಗಳನ್ನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿತ್ತು. ಇದೀಗ ಲೋಕಸಭಾ ಚುನಾವಣೆ ಹಿನ್ನೆಲೆ ಮೈತ್ರಿಯಾಗಿ ಚುನಾವಣೆ ಎದುರಿಸಿದ್ದು, ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮೈತ್ರಿಗೆ 18 ರಿಂದ 20 ಸ್ಥಾನ ಸಿಗಲಿದೆ ಎಂದು ಹೇಳಿದೆ.

Lok Sabha Poll Satta Bazaar Predicts Karnataka BJP To Win 18-20 Seats

ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಪ್ರಬಲವಾಗಿದೆ. ಅಂತೆಯೇ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬಲಿಷ್ಠವಾಗಿದೆ. ಹೀಗಾಗಿ, ಕರ್ನಾಟಕದಲ್ಲಿ ಬಿಜೆಪಿ ಮೈತ್ರಿಕೂಟ 18 ರಿಂದ 20 ಸ್ಥಾನಗಳಲ್ಲಿ ಗೆದ್ದೇ ಗೆಲ್ಲಲಿದೆ ಎಂಬುದು ಸಟ್ಟಾ ಬಜಾರ್‌ನ ಭವಿಷ್ಯ ನುಡಿದಿದೆ.

ಇತ್ತ ವಿಧಾನಸಭಾ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳಲ್ಲಿ ಗೆಲುವು ಕಂಡ ಕಾಂಗ್ರೆಸ್‌, ರಾಜ್ಯದ ಇಪ್ಪತ್ತೆಂಟು ಲೋಕಸಭಾ ಕ್ಷೇತ್ರಗಳ ಪೈಕಿ ಹದಿನೈದಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾಗಿ ಕಾಂಗ್ರೆಸ್ ಪಕ್ಷ ಪ್ರತಿಪಾದಿಸುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದ ನಾಯಕರು ಇಪ್ಪತ್ತಕ್ಕಿಂತ ಹೆಚ್ಚು ಸ್ಥಾನಗಳ ಗೆಲುವು ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು 28 ಲೋಕಸಭಾ ಕ್ಷೇತ್ರಗಳ ಫೈಕಿ 20 ರಿಂದ 22 ಕ್ಷೇತ್ರಗಳನ್ನ ಗೆಲ್ಲುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಇಸ್ ಬಾರ್ ಚಾರ್ ಸೌ ಪಾರ್ ಎಂಬ ಘೋಷಣೆ ಸಂಚಲನ ಮೂಡಿಸಿದ್ದು, ಬೆಟ್ಟಿಂಗ್ ಬಜಾರ್‌ನಲ್ಲಿ ಕೂಡ ಇದುವೇ ಕೇಂದ್ರ ಬಿಂದುವಾಗಿರುವುದು ವಿಶೇಷ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನೂರಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದು, ಎನ್ ಡಿಎ ಮೈತ್ರಿಕೂಟ ನಾನೂರು ಸ್ಥಾನಗಳನ್ನು ಪಡೆಯಲಿದೆ ಎಂದು ಸಟ್ಟಾ ಬಜಾರ್‌ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+