Lok Sabha Election 2024: ಮೂವರು ಮಾಜಿ ಸಿಎಂಗಳು ಸ್ಪರ್ಧೆ: ಹಿಂದಿನ ಇತಿಹಾಸ ಏನ್ ಹೇಳುತ್ತೆ? - ಹೀಗೊಂದು ವಿಶ್ಲೇಷಣೆ
ಬೆಂಗಳೂರು, ಏಪ್ರಿಲ್ 13: ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಆಡಳಿರೂಢ ಕಾಂಗ್ರೆಸ್ ಗೆ ಲೋಕಸಮರದಲ್ಲಿ 28 ಕ್ಷೇತ್ರಗಳನ್ನ ಗೆಲ್ಲುವ ಮೂಲಕ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ. ಇತ್ತ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಹಲವು ತಂತ್ರಗಳನ್ನ ನಡೆಸಿದ್ರೆ, ಇತ್ತ ಪ್ರತಿತಂತ್ರವಾಗಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಮೂವರು ಮಾಜಿ ಸಿಎಂಗಳನ್ನ ಬಿಜೆಪಿ ಕಣಕ್ಕಿಳಿಸಿದೆ.
ಹೌದು, ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಚಿಕ್ಕಿಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಟಿಕೆಟ್ ಗೆ ಬೇಡಿಕೆ ಇಟ್ಟಿದ್ರು, ಆದ್ರೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿದೆ. ಇತ್ತ ಬಿಜೆಪಿಯಿಂದ ಮೂವರು ಮಾಜಿ ಮುಖ್ಯಮಂತ್ರಿಗಳ ಕಣದಲ್ಲಿದ್ದು, ಈ ಮೂವರು ಸಿಎಂಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ.

ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಗೆ ಅಸ್ತಿತ್ವದ ಪ್ರಶ್ನೆಯಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕಣಕ್ಕಿಳಿಸಿದ್ದರೆ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ ನಡೆಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಳಗಾವಿಯಿಂದ ಹಾಗೂ ಹಾವೇರಿಯಿಂದ ಬಸವರಾಜ ಬೊಮ್ಮಾಯಿ ಅವರು ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ಇನ್ನೂ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳನ್ನ ಕಣಕ್ಕಿಳಿಸಿದ್ದು, ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿರುವ ಮಾಜಿ ಮುಖ್ಯಮಂತ್ರಿಗಳಿಗೆ ಚುನಾವಣಾ ಇತಿಹಾಸ ಒಂದಿಷ್ಟು ಸಿಹಿ ಸುದ್ದಿಯನ್ನು ನೀಡುತ್ತಿದೆ. ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸಿದ್ದ ಬಹುತೇಕ ಮಾಜಿ ಮುಖ್ಯಮಂತ್ರಿಗಳು ಗೆಲುವು ಸಾಧಿಸಿರುವುದನ್ನ ಇತಿಹಾಸ ಹೇಳುತ್ತಿದೆ.
ಕಳೆದ 72 ವರ್ಷಗಳಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ 23 ವ್ಯಕ್ತಿಗಳಲ್ಲಿ ಶೇ.72ರಷ್ಟು ಮಂದಿ ಲೋಕಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಲ್ಲದೇ ಹಿಂದಿನ ಇತಿಹಾಸವು ರಾಜ್ಯ ನಾಯಕರು ಹಾಗೂ ರಾಷ್ಟ್ರೀಯ ಪ್ರಾತಿನಿಧ್ಯದ ನಡುವಿನ ಸಂಬಂಧವನ್ನು ಬಹಿರಂಗಪಡಿಸುತ್ತದೆ. ಈ ಹಿಂದಿನ ಚುನಾವಣಾ ಫಲಿತಾಂಶಗಳನ್ನು ಗಮನಿಸಿದಾಗ ಕರ್ನಾಟಕವನ್ನ ಆಳಿದ 23 ಮುಖ್ಯಮಂತ್ರಿಗಳಲ್ಲಿ 16 ಮಂದಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಅಲ್ಲದೇ, ಅದರಲ್ಲಿ ಇಬ್ಬರು ರಾಜ್ಯಸಭೆಗೆ ಆಯ್ಕೆಯಾಗಿದ್ದರೆ, ಉಳಿದ 14 ಮಂದಿ ಲೋಕಸಭೆಗೆ ಜನರಿಂದ ಆಯ್ಕೆಯಾಗಿ ಹೋಗಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಾದ ಎಸ್ ನಿಜಲಿಂಗಪ್ಪ, ಎಚ್ ಡಿ ದೇವೇಗೌಡ, ಜೆಎಚ್ ಪಟೇಲ್, ಎಸ್ ಎಂ ಕೃಷ್ಣ, ಎನ್ ಧರಂ ಸಿಂಗ್, ಎಚ್ ಡಿ ಕುಮಾರಸ್ವಾಮಿ, ಡಿವಿ ಸದಾನಂದಗೌಡ ಅವರು ಸಿಎಂ ಆಗುವ ಮುನ್ನ ಸಂಸದರಾಗಿ ಕೆಲಸ ಮಾಡಿದ್ದಾರೆ, ಕೆಸಿ ರೆಡ್ಡಿ, ಕೆ ಹನುಮಂತಯ್ಯ, ವೀರೇಂದ್ರ ಪಾಟೀಲ್, ಆರ್ ಗುಂಡೂರಾವ್, ಎಸ್. ಬಂಗಾರಪ್ಪ, ವೀರಪ್ಪ ಮೊಯ್ಲಿ, ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ಬಳಿಕ ವಿವಿಧ ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟಿದ್ದರು.
ಮುಖ್ಯಮಂತ್ರಿ ಸ್ಥಾನದ ಬಳಿಕ ಸಂಸದರಾದವರ ಪಟ್ಟಿ ಇಲ್ಲಿದೆ
* ಕೆಸಿ ರೆಡ್ಡಿ (1957 - ಕೋಲಾರ)
* ಕೆ ಹನುಮಂತಯ್ಯ (1962 - ಬೆಂಗಳೂರು ನಗರ)
* ವೀರೇಂದ್ರ ಪಾಟೀಲ್ (1980 - ಬಾಗಲಕೋಟೆ)
* ಆರ್ ಗುಂಡೂರಾವ್ (1989 - ಬೆಂಗಳೂರು ದಕ್ಷಿಣ)
* ಎಸ್ ಬಂಗಾರಪ್ಪ (2005 - ಶಿವಮೊಗ್ಗ)
* ವೀರಪ್ಪ ಮೊಯ್ಲಿ (2009 - ಚಿಕ್ಕಬಳ್ಳಾಪುರ)
* ಬಿಎಸ್ ಯಡಿಯೂರಪ್ಪ (2014 - ಶಿವಮೊಗ್ಗ)
ಸಂಸದರಾದ ಬಳಿಕ ಮುಖ್ಯಮಂತ್ರಿಯಾದವರು!
* ಎಸ್ ನಿಜಲಿಂಗಪ್ಪ (1952 - ಚಿತ್ರದುರ್ಗ)
* ಎಚ್ ಡಿ ದೇವೇಗೌಡ (1991 - ಹಾಸನ)
* ಜೆಎಚ್ ಪಟೇಲ್ (1967 - ಶಿವಮೊಗ್ಗ)
* ಎಸ್‌ಎಂ ಕೃಷ್ಣ (1968 - ಮಂಡ್ಯ)
* ಎನ್ ಧರಂ ಸಿಂಗ್ (1980 - ಗುಲ್ಬರ್ಗಾ)
* ಎಚ್‌ಡಿ ಕುಮಾರಸ್ವಾಮಿ (1996 - ಕನಕಪುರ)
* ಡಿವಿ ಸದಾನಂದಗೌಡ (2004 - ದಕ್ಷಿಣ ಕನ್ನಡ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications