ಕಾಂಗ್ರೆಸ್ ಪರ ಅಂಡರ್ ಕರೆಂಟ್ ಇದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 19- 'ಲೋಕಸಭಾ ಚುನಾವಣೆ ಫಲಿತಾಂಶ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ನಂಬಿಕೆಗಳನ್ನು ನಂಬಿ ಅಧೀರರಾಗಬೇಡಿ' ಎಂದು ಪಕ್ಷದ ಕಾರ್ಯಕರ್ತರಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿವಿಮಾತು ಹೇಳಿದ್ದಾರೆ.
ಇದೇ ವೇಳೆ, ರಾಜ್ಯಾದ್ಯಂತ ಕಾಂಗ್ರೆಸ್ ಪರ 'ಅಂಡರ್ ಕರೆಂಟ್' ಹರಿದಾಡುತ್ತಿದ್ದು, 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದ್ದು, ಕಾರ್ಯಕರ್ತರಲ್ಲಿ ಧೈರ್ಯ ತುಂಬಿದ್ದಾರೆ.

ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ಮಾಧ್ಯಮಗಳು ಕಾಂಗ್ರೆಸ್ ಸೋಲಿನ ಬಗ್ಗೆಯೆ ವಿಶ್ಲೇಷಣೆ ಮಾಡಿದ್ದವು. ಆದರೆ ಮಾಜಿ ಪ್ರಧಾನಿ ದೇವೇಗೌಡರ ಭದ್ರಕೋಟೆ ಎನ್ನಲಾಗುತ್ತಿದ್ದ ಬೆಂ. ಗ್ರಾಮಾಂತರದಲ್ಲಿ 1.37 ಲಕ್ಷ ಮತಗಳ ಅಂತರದಿಂದ ನಮ್ಮ ಪಕ್ಷದ ಅಭ್ಯರ್ಥಿ ಗೆದ್ದರು. ಈ ಚುನಾವಣೆಯಲ್ಲೂ ರಾಜ್ಯಾದ್ಯಂತ ಕಾಂಗ್ರೆಸ್ ಪರವಾಗಿ ಇದೇ ಫಲಿತಾಂಶ ಬರಲಿದೆ ಎಂದು ಅವರು ಹೇಳಿದರು.
ಹಾಸನ ಗೆದ್ದರೂ ಅಚ್ಚರಿಯಿಲ್ಲ:
'ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಗೆಲುವನ್ನು ಯಾರಿಂದಲೂ ನಿಯಂತ್ರಿಸಲು ಸಾಧ್ಯವಿಲ್ಲ. ಬೆಂ. ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಗೆಲುವು ನಮ್ಮದೇ. ಹಾಸನದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ಅಚ್ಚರಿಯಿಲ್ಲ. ಯೋಗೀಶ್ವರ್ ಮತ್ತು ಡಿಕೆ ಶಿವಕುಮಾರ್ ಅವರುಗಳು ಒಟ್ಟಾಗಿ ಕೆಸಲ ಮಾಡುವುದರಿಂದ ಹಳೆಯ ಮೈಸೂರು ಭಾಗದಲ್ಲಿ ಪಕ್ಷದ ಶಕ್ತಿ ಹೆಚ್ಚಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


Click it and Unblock the Notifications
