ಅಮಿತ್ ಶಾ ಭೇಟಿಯಾದ ಹೆಚ್ ಡಿ ಕುಮಾರಸ್ವಾಮಿ: ಇವರೇ ನೋಡಿ ಮಂಡ್ಯ ಅಭ್ಯರ್ಥಿ?
ಹೊಸದಿಲ್ಲಿ,ಮಾರ್ಚ್ 16: ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಮೈತ್ರಿಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಸದ್ಯ ಟಿಕೆಟ್ ಹಂಚಿಕೆಯ ಕಸರತ್ತು ನಡೆಸಿದ್ದಾರೆ. 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನ ಘೋಷಿಸಿರುವ ಬಿಜೆಪಿ ಹೈಕಮಾಂಡ್, ಇದೀಗ ಉಳಿದ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಯ ಕಸರತ್ತು ನಡೆಸಿದೆ.
ಈಗಾಗಲೇ 28 ಲೋಕಸಭಾ ಕ್ಷೇತ್ರಗಳ ಫೈಕಿ ಬಿಜೆಪಿಗೆ 25 ಜೆಡಿಎಸ್ ಗೆ ಮೂರು ಕ್ಷೇತ್ರಗಳನ್ನ ನೀಡುವ ಕುರಿತು ಈಗಾಗಲೇ ಮಾತುಕತೆಯಾಗಿದ್ದು, ಅಂತಿಮ ಚರ್ಚೆ ನಡೆಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ದಿಲ್ಲಿಯಲ್ಲಿ ಶನಿವಾರ ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ರಾಜ್ಯ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಹಾಗೂ ಅನಸೂಯ ಮಂಜುನಾಥ್ ಅವರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.

ಸದ್ಯ ಮಂಡ್ಯ ಲೋಕಸಭಾ ಕ್ಷೇತ್ರವೇ ದಳಪತಿಗಳಿಗೆ ದೊಡ್ಡ ತನೆ ನೋವಾಗಿದ್ದು, ಹಾಲಿ ಸಂಸದೆಯಾದ ಸುಮಲತಾ ಅಂಬರೀಶ್ ಅವರು ಟಿಕೆಟ್ ಸಿಗುವ ಭರವಸೆಯಲ್ಲಿದ್ರು. ಆದರೆ, ಮೈತ್ರಿಯಲ್ಲಿ ಮಂಡ್ಯ ದಳಪತಿಗಳ ಕೈ ಸೇರಿದ್ದು, ಮಂಡ್ಯದಿಂದ ಈ ಬಾರಿ ನಿಖಿಲ್ ಕುಮಾರಸ್ವಾಮಿ ಅವರೇ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ನಾನು ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಇತ್ತ ಮಂಡ್ಯದಿಂದ ಸಿ ಎಸ್ ಪುಟ್ಟರಾಜು ಅವರ ಹೆಸರು ಕೇಳಿ ಬಂದಿದ್ದು, ಅಂತಿಮವಾಗಿ ನಿಖಿಲ್ ಕುಮಾರಸ್ವಾಮಿ ಅವರೇ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಪಕ್ಕಾ ಎನ್ನಲಾಗಿದೆ.
ಈಗಾಗಲೇ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಅಥವಾ ಕುಮಾರಸ್ವಾಮಿ ಸ್ಪರ್ಧೆ ಮಾಡಲಿ ಎಂದು ಸಿ ಎಸ್ ಪುಟ್ಟರಾಜು ಅವರು ಹೇಳಿದ್ದಾರೆ. ಅಲ್ಲದೇ ಶನಿವಾರ ಅಮಿತ್ ಶಾ ಭೇಟಿಯ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನ ಸಹ ಜೊತೆಗಿದ್ದಾರೆ. ಅಲ್ಲದೇ ಮೂಲಗಳ ಪ್ರಚಾರ ಪುತ್ರನ ರಾಜಕೀಯ ಭವಿಷ್ಯವನ್ನ ರೂಪಿಸುವ ನಿಟ್ಟಿನಲ್ಲಿ 2019 ಲೋಕಸಭಾ ಚುನಾವಣೆಯಲ್ಲಿ ಕಳೆದುಕೊಂಡ ಕ್ಷೇತ್ರವನ್ನ ಮರಳಿ ಪಡೆಯುವ ನಿಟ್ಟಿನಲ್ಲಿ ದಳಪತಿಗಳು ಮುಂದಾಗಿದ್ದು, ಅಮಿತ್ ಶಾ ಭೇಟಿಯ ಸಂದರ್ಭದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭಾಗಿಯಾಗಿರುವುದು ಇವರೇ ಮಂಡ್ಯ ಅಭ್ಯರ್ಥಿ ಎಂಬುದಕ್ಕೆ ಇನ್ನಷ್ಟು ಪುಷ್ಟಿ ನೀಡಿದಂತಾಗಿದೆ.
ನಾನೇ ಬಂದು ಅಭ್ಯರ್ಥಿ ಹೆಸರು ಘೋಷಣೆ ಮಾಡುತ್ತೇನೆ : ಹೆಚ್ಡಿಕೆ
ಪಕ್ಷಕ್ಕಾಗಿ ನಿಸ್ವಾರ್ಥವಾಗಿ ದುಡಿಯುತ್ತಿರುವ ನಿಮ್ಮ ಆಸೆಗೆ ನಾವು ಭಂಗ ತರುವುದಿಲ್ಲ ಎಂದು ಮುಖಂಡರು, ಕಾರ್ಯಕರ್ತರಿಗೆ ಭರವಸೆ ನೀಡಿದ ಕುಮಾರಸ್ವಾಮಿ, ನಿಮ್ಮ ಆಸೆಗೆ ನಾವು ಭಂಗ ತರುವ ಕೆಲಸ ನಾನು ಮಾಡುವುದಿಲ್ಲ. ನಿಖಿಲ್ ಕುಮಾರಸ್ವಾಮಿ ಅವರಿಗೂ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೇರವೇರಿಸಿಕೊಡುತ್ತೇನೆ. ಈ ತಿಂಗಳ 21ರಂದು ನನಗೆ ಹೃದಯದ ಶಸ್ತ್ರ ಚಿಕಿತ್ಸೆ ಇದೆ. 25ರಂದು ನಾನೇ ಬಂದು ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ರಾಜಕಾರಣದಲ್ಲಿ ಟೀಕೆ ಪ್ರತಿ ಟೀಕೆಗಳು ಇರುತ್ತವೆ. ಸುಮಲತಾ ಅವರು ನಾವು ಪರಸ್ವರ ಟೀಕೆ ಟಿಪ್ಪಣಿ ಮಾಡಿಕೊಂಡಿದ್ದೇವೆ. ಅದು ಮುಗಿದ ಅಧ್ಯಾಯ. ಅದು ಸಂಬಂಧಗಳಿಗೆ ಧಕೆ ತರುವಂಥದ್ದು ಬೇಡ. ಸುಮಲತಾ ಅವರು ನನ್ನ ಸ್ವಂತ ಅಕ್ಕ ಇದ್ದಂತೆ. ಸಂಘರ್ಷವನ್ನು ಮುಂದುವರಿಸಿಕೊಂಡು ಹೋಗಲ್ಲ. ಅದರ ಅಗತ್ಯವೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.












Click it and Unblock the Notifications