ಕಾಂಗ್ರೆಸ್ ಗೆಲ್ಲುವ ಸ್ಥಾನಗಳೆಷ್ಟು? ಸಚಿವರ ಮುಂದೆ ಅಂಕಿ ಅಂಶಗಳನ್ನ ಬಿಚ್ಚಿಟ್ಟ‌ ಸಿಎಂ, ಡಿಸಿಎಂ

ಬೆಂಗಳೂರು, ಮೇ 24: ಲೋಕಸಭಾ ಚುನಾವಣೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ನಡೆದಿದ್ದು, ಆಡಳಿತರೂಢ ಕಾಂಗ್ರೆಸ್‌ ಗೆ ಪ್ರತಿಷ್ಠೆಯಾಗಿದೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಕೈ ಪಾಳಯದಲ್ಲಿ ಸಾಕಷ್ಟು ಬದಲಾವಣೆಗಳ ಕುರಿತು ಚರ್ಚೆ ನಡೆಯುತ್ತಿದ್ದು, ಸಂಪುಟ ಸಹೋದ್ಯೋಗಿಗಳ ಮುಂದೆ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಸ್ಥಾನಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅಂಕಿ ಅಂಶಗಳನ್ನ ಬಿಚ್ಚಿಟ್ಟಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಬುಧವಾರ ರಾತ್ರಿ ಇಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಎಷ್ಟು ಸ್ಥಾನಗಳನ್ನು ಗೆಲ್ಲಬಹುದು ಎಂಬ ಬಗ್ಗೆ ಮಾತುಕತೆ ನಡೆಸಿದರು. ಪ್ರಸಕ್ತ ಸಾಲಿನ ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲು (ಜೂನ್ 4) ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜ್ಯದಲ್ಲಿ ಕನಿಷ್ಠ 20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವನ್ನು ಕರ್ನಾಟಕ ಸಚಿವ ಸಂಪುಟದ ಸದಸ್ಯರು ವ್ಯಕ್ತಪಡಿಸಿದ್ದಾರೆ.

Lok Sabha Poll We will win 20 Lok Sabha constituencies in the state Said CM DCM

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಯೋಜಿಸಿದ್ದ ಔತಣಕೂಟದಲ್ಲಿ ಸಚಿವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಮುಂದೆ ತಮ್ಮ ಲೆಕ್ಕಾಚಾರವನ್ನ ಮಂಡಿಸಿದ್ದಾರೆ. ಅಲ್ಲದೇ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಹಾಯ ಮಾಡುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಉತ್ತರ ಕರ್ನಾಟಕದ ಹಲವಾರು ಸಚಿವರು, ತಮ್ಮ ಮಕ್ಕಳನ್ನು ಅಭ್ಯರ್ಥಿಗಳಾಗಿ ಕಣಕ್ಕಿಳಿಸಿದ್ದು, ತಮ್ಮ ಲೋಕಸಭಾ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತಮ್ಮ ಮಗ ಸಾಗರ್ ಅವರನ್ನ ಬೀದರ್‌ನಿಂದ ಚುನಾವಣೆಗೆ ಸ್ಪರ್ಧಿಸಿದ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅವರ ಮಗ ಮೃಣಾಲ್ ಬೆಳಗಾವಿಯಿಂದ ಸ್ಪರ್ಧಿಸಿದ್ದಾರೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಚಿಕ್ಕೋಡಿಯಿಂದ ಸ್ಪರ್ಧಿಸಿದ್ದಾರೆ.

ಬಹುತೇಕ ಎಲ್ಲಾ ಸಚಿವರು ತಮಗೆ ವಹಿಸಿದ ಆಯಾ ಲೋಕಸಭಾ ಸ್ಥಾನಗಳ ಗೆಲುವನ್ನು ಖಚಿತಪಡಿಸಿಕೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಾಗಾಗಿ, 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳನ್ನ ಗೆಲ್ಲುವುದು ನಿಶ್ಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಗುಪ್ತಚರ ವರದಿ ಏನೇ ಇರಲಿ. ಬಿಜೆಪಿ ಅಲೆ ಇರಲಿಲ್ಲ. ಐದು ಗ್ಯಾರಂಟಿ ನೀಡಿದ್ದರಿಂದ ಕಾಂಗ್ರೆಸ್ ಪರ ಅಲೆ ಇತ್ತು. ಮಹಿಳೆಯರು ಗಂಟೆಗಟ್ಟಲೆ ಉದ್ದನೆಯ ಸಾಲಿನಲ್ಲಿ ನಿಂತಿದ್ದರು, ಇದು ಗ್ಯಾರಂಟಿ ಯೋಜನೆಯಿಂದ ಪ್ರಭಾವಿತರಾಗಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಈಶ್ವರ್ ಖಂಡ್ರೆ ಸುದ್ದಿಗಾರರಿಗೆ ತಿಳಿಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಹಾವೇರಿಯಲ್ಲಿ ಪಕ್ಷದ ಅಭ್ಯರ್ಥಿ ಆನಂದ ಗಡ್ಡದೇವರಮಠ ಗೆಲುವಿನ ಬಗ್ಗೆ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ದಾವಣಗೆರೆಯಲ್ಲಿ ಪತ್ನಿ ಪ್ರಭಾ ಗೆಲುವಿನ ವಿಶ್ವಾಸವಿದೆ ಎಂದು ಮೂಲಗಳು ತಿಳಿಸಿವೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ತಮ್ಮ ಪುತ್ರಿ ಸೌಮ್ಯ ಬೆಂಗಳೂರು ದಕ್ಷಿಣದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಇತ್ತೀಚೆಗೆ ಹೇಳಿಕೆ ನೀಡಿದ್ದರು. ದಕ್ಷಿಣ ಕರ್ನಾಟಕದ ರಾಜಕೀಯ ವಿಶ್ಲೇಷಕರ ಪ್ರಕಾರ, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಮೈತ್ರಿ ಎರಡೂ ಪಕ್ಷಗಳಿಗೆ ಚೆನ್ನಾಗಿ ಕೆಲಸ ಮಾಡಿದೆ, ಆದರೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಒಳಗೊಂಡಿರುವ ಲೈಂಗಿಕ ಹಗರಣದ ಪರಿಣಾಮವು ಚುನಾವಣೆಯ ಮೇಲೆ ಬೀರುವ ಸಾಧ್ಯತೆಗಳಿವೆ ಎನ್ನುವ ಮಾತು ಕೇಳಿ ಬಂದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+