28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಸ್ಥಾನಗಳೆಷ್ಟು? ಅಂಕಿ ಅಂಶಗಳನ್ನ ಬಿಚ್ಚಿಟ್ಟ‌ ಸಿದ್ದರಾಮಯ್ಯ

ಬೆಂಗಳೂರು, ಮೇ 14: ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರಗಳನ್ನ ಗೆಲ್ಲುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚಿಸಿದೆ. ಇತ್ತ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್‌ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದೆ. ಇತ್ತ ಕಾಂಗ್ರೆಸ್‌ ಹೈಕಮಾಂಡ್‌ ಕೊಟ್ಟ ಟಾರ್ಗೆಟ್‌ ನಂತೆ ನಾವು ಚುನಾವಣೆಯಲ್ಲಿ ಅತೀ ಹೆಚ್ಚು ಕ್ಷೇತ್ರವನ್ನ ಗೆಲ್ಲುವ ವಿಶ್ವಾಸವನ್ನ ವ್ಯಕ್ತಪಡಿಸಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಟಾರ್ಗೆಟ್‌ ನೀಡಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭಾ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

Lok Sabha Poll We will win 20 Lok Sabha constituencies in the state Siddaramaiah

ಇನ್ನೂ ವಿಧಾನ ಪರಿಷತ್‌ ಚುನಾವಣೆಗೆ ಕುರಿತು ಈಗಾಗಲೇ ಸಿದ್ದತೆ ನಡೆಯುತ್ತಿದ್ದು, ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಾನು, ಕೆ. ಹೆಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಮಧು ಬಂಗಾರಪ್ಪ, ನಜೀರ್ ಅಹ್ಮದ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಜೊತೆಯಲ್ಲಿದ್ದೇವೆ.

ನಮ್ಮ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಈ ಬಾರಿ ಕಾಂಗ್ರೆಸ್ ಪಕ್ಷ ಆರು ತಿಂಗಳು ಮುಂಚಿತವಾಗಿಯೇ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೆವು. ಈಗಾಗಲೇ ಎಲ್ಲಾ ಮತದಾರರನ್ನು ಭೇಟಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಇಬ್ಬರೂ ಸಮರ್ಥ ಅಭ್ಯರ್ಥಿಗಳು. ಶ್ರೀನಿವಾಸ್ ಅವರು ಶಿಕ್ಷಕರ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವರ ಧ್ವನಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಉಳ್ಳವರು. ರಾಮೋಜಿ ಗೌಡ ಅವರೂ ಶಿಕ್ಷಕರಾಗಿ ಕೆಲಸ ಮಾಡಿದ್ದವರು. ಅವರಿಗೂ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಅವುಗಳನ್ನು ಬಗೆಹರಿಸುವ ಶಕ್ತಿ ಅವರಿಗಿದೆ. ಹಾಗಾಗಿ ಇಬ್ಬರೂ ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+