ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ಮಹಿಳಾ ಸಂಸದೆ ಆಯ್ಕೆಯಾಗ್ತಾರಾ? ಇತಿಹಾಸ ಏನ್ ಹೇಳುತ್ತೆ?
ಬೆಂಗಳೂರು, ಮಾರ್ಚ್ 28: ಕಳೆದ 73 ವರ್ಷಗಳಲ್ಲಿ 17 ಲೋಕಸಭಾ ಚುನಾವಣೆಗಳು ನಡೆದಿದ್ದರೂ ಬೆಂಗಳೂರಿನಲ್ಲಿ ಒಬ್ಬ ಮಹಿಳಾ ಸಂಸದರೂ ಆಯ್ಕೆಯಾಗಿಲ್ಲ. ಈ ಬಾರಿ ಬೆಂಗಳೂರು ವ್ಯಾಪ್ತಿಯ ಎರಡು ಕ್ಷೇತ್ರದಲ್ಲಿ ಪ್ರಬಲ ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.
ಹೌದು, 18ನೇ ಚುನಾವಣೆ ನಡೆಯುತ್ತಿದ್ದು, ಬೆಂಗಳೂರಿನಿಂದ ಈವರೆಗೆ ಒಬ್ಬ ಸಂಸದೆಯೂ ಆಯ್ಕೆಯಾಗಿಲ್ಲ. ಈ ಬಾರಿಯಾದರೂ ಬೆಂಗಳೂರಿನಿಂದ ಸಂಸತ್‌ಗೆ ಕಳಿಸುವ ಮೂಲಕ ಬೆಂಗಳೂರು ಹೊಸ ಇತಿಹಾಸ ಬರೆಯುವುದೇ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಮೂರು ಲೋಕಸಭಾ ಕ್ಷೇತ್ರಗಳಿದ್ದು, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಪ್ರಬಲ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಂಗಳೂರು ಉತ್ತರದಲ್ಲಿ ಕೇಂದ್ರ ಸಚಿವೆ ಹಾಗೂ ಒಕ್ಕಲಿಗರ ಪ್ರಬಲ ನಾಯಕಿಯಾಗಿರುವ ಶೋಭಾ ಕರಂದ್ಲಾಜೆ ಸ್ಪರ್ಧಿಸಿದ್ದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಕಾಂಗ್ರೆಸ್‌ನಿಂದ ಕಣದಲ್ಲಿದ್ದಾರೆ.
2009 ರವರೆಗೆ ಎರಡು ಲೋಕಸಭಾ ಕ್ಷೇತ್ರಗಳನ್ನು ಹೊಂದಿದ್ದ ಬೆಂಗಳೂರು, ನಂತರ ಮೂರು ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ. ಈ ಬಾರಿ ಬಿಜೆಪಿ ಬೆಂಗಳೂರು ಉತ್ತರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕಣಕ್ಕಿಳಿಸಿದ್ದು, ಬೆಂಗಳೂರು ದಕ್ಷಿಣಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾರೆಡ್ಡಿ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ. ಐಟಿ ನಗರದ ಮತದಾರರು ಮೊದಲ ಬಾರಿಗೆ ಸಂಸದೆಯನ್ನು ಆಯ್ಕೆ ಮಾಡುತ್ತದೆಯೇ ಕಾದು ನೋಡಬೇಕಿದೆ.
ಬೆಂಗಳೂರು ಉತ್ತರದ ಹಾಲಿ ಸಂಸದರಾದ ಡಿ ವಿ ಸದಾನಂದಗೌಡರಿಗೆ ಈ ಬಾರಿ ಟಿಕೆಟ್ ಕೈ ತಪ್ಪಿದ್ದು, ಈ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧಅಭ್ಯರ್ಥಿಯಾಗಿ ಪ್ರೊ.ರಾಜೀವ್ ಗೌಡ ಕಣಕ್ಕಿಳಿದಿದ್ದಾರೆ. ಎರಡು ಬಾರಿ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಬಿಜೆಪಿ ನಾಯಕರೇ ಆಕ್ಷೇಪ ವ್ಯಕ್ತಪಡಿಸಿದ್ದು, ಗೋ ಬ್ಯಾಕ್ ಶೋಭಾಕ್ಕ ಅಭಿಯಾನವನ್ನ ನಡೆಸಿದ್ರು, ಇದರಿಂದಾಗಿ ಬಿಜೆಪಿಯ ಭದ್ರ ಕೋಟೆಯಾಗಿರುವ ಬೆಂಗಳೂರು ಉತ್ತರದಿಂದ ಶೋಭಾ ಅವರಿಗೆ ಟಿಕೆಟ್ ನೀಡಲಾಗಿದೆ.
ಇನ್ನು, ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಕಣಕ್ಕಿಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಯಾಗಿದ್ದ ಸೌಮ್ಯಾ ರೆಡ್ಡಿ, ಬೆರಳೆಣಿಕೆಯಷ್ಟು ಮತಗಳ ಅಂತರದಿಂದ ಸೋತಿದ್ದರು. ಇದೀಗ, ಅವರು ಲೋಕಸಭೆಯ ಅಖಾಡದಲ್ಲಿದ್ದಾರೆ. ಪುತ್ರಿಯನ್ನ ಗೆಲ್ಲಿಸಿಕೊಂಡು ಬರುವ ಹೊಣೆ ರಾಮಲಿಂಗಾರೆಡ್ಡಿಯವರ ಮೇಲಿದೆ. ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದಲ್ಲಿ ಕಾಣಸಿಗದಿದ್ದ ತೇಜಸ್ವಿ ಸೂರ್ಯ ಅವರು, ಕೆಲವು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು, ಡಿ ಕೆ ಶಿವಕುಮಾರ್ ಚಾಣಕ್ಷತನ ಹಾಗೂ ರಾಮಲಿಂಗಾರೆಡ್ಡಿ ಅವರ ಜನಪ್ರಿಯತೆ ಸೌಮ್ಯಾ ರೆಡ್ಡಿ ಗೆಲುವಿಗೆ ನೆರವಾಗಬಹುದು ಎನ್ನಲಾಗುತ್ತಿದೆ.
ಮಾಜಿ ಮೇಯರ್ ಮತ್ತು ಕಾಂಗ್ರೆಸ್ ನಾಯಕಿ ಗಂಗಾಂಬಿಕೆ ಮಲ್ಲಿಕಾರ್ಜುನ ಮಾತನಾಡಿ , ಇಂದಿರಾ ಗಾಂಧಿ ಅವರು ದೇಶದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನಿಯಾಗಿದ್ದರು. ಬಸವಣ್ಣ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳಾ ನಾಯಿಕತ್ವದ ಬಗ್ಗೆ ಒತ್ತಿ ಹೇಳಿದ್ದರು. ಆದರೆ, ರಾಜಕೀಯದಲ್ಲಿ ಮಹಿಳೆಯರಿಗೆ ಸರಿಯಾದ ಪ್ರಾತಿನಿಧ್ಯವಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಮಹಿಳೆ ಎಂಬ ಕಾರಣಕ್ಕೆ ಚಿಕ್ಕಪೇಟೆ ಕ್ಷೇತ್ರದಲ್ಲಿ ನನಗೆ ಟಿಕೆಟ್ ದೊರೆಯಲಿಲ್ಲ. ಲೋಕಸಭೆಯಲ್ಲಿ ಮಹಿಳೆಯರು ಬೆಂಗಳೂರನ್ನು ಪ್ರತಿನಿಧಿಸಬೇಕು ಎಂದರು.
ತಮ್ಮ ಸ್ವಂತ ಅನುಭವವನ್ನು ನೆನಪಿಸಿಕೊಂಡ ಗಂಗಾಂಬಿಕೆ, ಕಳೆದ ವರ್ಷ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದೆ. ನಾನು ಬೆಂಗಳೂರು ಮೇಯರ್ ಆಗಿದ್ದೆ ಮತ್ತು ಪಕ್ಷದಲ್ಲಿ ಮಾತ್ರವಲ್ಲದೆ ವಿವಿಧ ಸಂಘಗಳು ಮತ್ತು ಸಂಸ್ಥೆಗಳಲ್ಲಿಯೂ ಹಲವು ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಮಹಿಳೆ ಎಂಬ ಕಾರಣಕ್ಕೆ ನನಗೆ ಚಿಕ್ಕಪೇಟೆ ಟಿಕೆಟ್ ನೀಡಿಲ್ಲ ಎಂದು ಗಂಗಾಂಬಿಕೆ ಮಲ್ಲಿಕಾರ್ಜುನಹೇಳಿದರು.
ದುರದೃಷ್ಟವಶಾತ್, ರಾಜಕೀಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲು ಯಾವುದೇ ರಾಜಕೀಯ ಪಕ್ಷಗಳು ಉತ್ಸುಕವಾಗಿಲ್ಲ. ವಿವಿಧ ಚುನಾಯಿತ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ಸರಿಯಾಗಿ ಜಾರಿಗೊಳಿಸಬೇಕು ಎಂದರು. ಲೋಕಸಭೆಯಲ್ಲಿ ಬೆಂಗಳೂರನ್ನು ಮಹಿಳೆಯರು ಪ್ರತಿನಿಧಿಸಬೇಕು. ಬೆಂಗಳೂರು ವಿಶಿಷ್ಟ ಸಮಸ್ಯೆಗಳನ್ನು ಹೊಂದಿದೆ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಪಟ್ಟಭದ್ರ ಹಿತಾಸಕ್ತಿಗಳಿಂದ ಪ್ರಭಾವಿತರಾಗದೆ ಅವುಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಬಹುದು ಎಂದು ಮಾಜಿ ಮೇಯರ್ ಹೇಳಿದರು.
ಇನ್ನೂ ರಾಜ್ಯದಿಂದ ಕಳೆದ 17 ಲೋಕಸಭಾ ಚುನಾವಣೆಗಳಲ್ಲಿ ಕರ್ನಾಟಕವು 15 ಮಹಿಳಾ ಸಂಸದರನ್ನು ಆಯ್ಕೆ ಮಾಡಿದೆ ಅದರಲ್ಲಿ, ಇಂದಿರಾ ಗಾಂಧಿ ಅವರು 1978ರಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ, ಗೆದ್ದಿದ್ದರು. ಆ ಮೂಲಕ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಅವರು ತಮ್ಮ ರಾಜಕೀಯ ಪುನರ್ಜನ್ಮ ಪಡೆದಿದ್ದರು.
ರಾಜ್ಯದಿಂದ ಆಯ್ಕೆಯಾಗಿದ್ದ ಪ್ರಮುಖ ಸಂಸದೆಯರ ಪಟ್ಟಿ
1. ಸರೋಜಿನಿ ಮಹಿಷಿ ಅವರು ಧಾರವಾಡ ಉತ್ತರ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ (1962-1980) ಆಯ್ಕೆಯಾಗಿದ್ದರು. ಅಲ್ಲದೆ, ರಾಜ್ಯದ ಮೊದಲ ಸಂಸದೆಯೂ ಆಗಿದ್ದರು.
2. ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿಯವರು 1978ರಲ್ಲಿ ಚಿಕ್ಕಮಗಳೂರು ಲೋಕಸಭಾ ಉಪಚುನಾವಣೆಯಲ್ಲಿ ವೀರೇಂದ್ರ ಪಾಟೀಲ್ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದರು.
3. ತೇಜಸ್ವಿನಿ ಗೌಡ ಅವರಯ 2004ರ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರನ್ನು ಸೋಲಿಸಿದ್ದರು.
4. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ1ಯವರು 999ರಲ್ಲಿ ಬಿಜೆಪಿಯ ಸುಷ್ಮಾ ಸ್ವರಾಜ್ ವಿರುದ್ಧ ಬಳ್ಳಾರಿಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು.
5. ಸುಮಲತಾ ಅಂಬರೀಶ್ ಅವರು 2019ರಲ್ಲಿ ಮಂಡ್ಯ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಗೆದ್ದಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications