Lok Sabha elections 2024: 'ಕೈ 'ಹಿಡಿಯಲಿಲ್ವಾ ಗ್ಯಾರಂಟಿ; ಕರ್ನಾಟಕದ 28 ಸ್ಥಾನಗಳಲ್ಲಿ 24 ಸ್ಥಾನ ಬಿಜೆಪಿಗೆ ಎಂದ ಸಮೀಕ್ಷೆ
ಬೆಂಗಳೂರು, ಫೆಬ್ರವರಿ 08: ಲೋಕಸಭಾ ಚುನಾವಣೆಗೆ ಇಡೀ ದೇಶವೆ ಸಿದ್ಧವಾಗುತ್ತಿದ್ದು, ಹಲವು ಮಾಧ್ಯಮ ಮತ್ತು ಸ್ವತಂತ್ರ ಸಂಸ್ಥೆಗಳು ಈಗಾಗಲೇ ಯಾರವ ಪಕ್ಷಕ್ಕೆ ಜನ ಮತ ಹಾಕಲಿದ್ದಾರೆ ಎಂಬ ಬಗ್ಗೆ ಸಮೀಕ್ಷೆಗೆ ಇಳಿದಿವೆ. ಲೋಕ ಸಭಾ ಚುನಾವಣೆಗೆ ರಾಜ್ಯದಲ್ಲಿಯೂ ಕಾಂಗ್ರೆಸ್ ಮತ್ತು ಬಿಜೆಪಿ- ಜೆಡಿಎಸ್ ಮೈತ್ರಿ ಪ್ರಚಾರ ಆರಂಭಿಸಿವೆ.
ವಿಧಾನಸಭಾ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿರುವ ಬಿಜೆಪಿ ಲೋಕ ಸಭಾ ಚುನಾವಣೆಯಲ್ಲಿ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಜೆಡಿಎಸ್ ಕೂಡ ಅದಕ್ಕೆ ಕೈ ಜೋಡಿಸಿದೆ. ಕಾಂಗ್ರೆಸ್ ಮಾತ್ರ ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿವೆ ಎಂದು ಹಗಲುಗನಸು ಕಾಣುತ್ತಾ ಇದ್ದಾರೆ. ಇದೇ ವೇಳೆ ಕಾಂಗ್ರೆಸ್‌ಗೆ ಶಾಕ್ ಎನ್ನವಂತೆ ಹಲವು ಸಮೀಕ್ಷೆಗಳು ಹೊರ ಬೀಳುತ್ತಿವೆ.

28 ಸ್ಥಾನಗಳಲ್ಲಿ 24 ಸ್ಥಾನ ಬಿಜೆಪಿಗೆ!?
2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕರ್ನಾಟಕದ 28 ಲೋಕಸಭಾ ಸ್ಥಾನಗಳ ಪೈಕಿ 24 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಆಪ್ ನೇತೃತ್ವದ ಇಂಡಿಯಾ ಬ್ಲಾಕ್ ನಾಲ್ಕು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ಸಮೀಕ್ಷೆ ಭವಿಷ್ಯ ನುಡಿದಿದೆ.
ಮೂಡ್ ಆಫ್ ದಿ ನೇಷನ್‌ನ ಫೆಬ್ರವರಿ 2024 ರ ಆವೃತ್ತಿಯು ಎಲ್ಲಾ ಲೋಕಸಭಾ ಸ್ಥಾನಗಳಲ್ಲಿ 35,801 ಪ್ರತಿಕ್ರಿಯಿಸಿದವರ ಸಮೀಕ್ಷೆಯನ್ನು ಆಧರಿಸಿದೆ. ಸಮೀಕ್ಷೆಯನ್ನು ಡಿಸೆಂಬರ್ 15, 2023 ಮತ್ತು ಜನವರಿ 28, 2024 ರ ನಡುವೆ ನಡೆಸಲಾಗಿದೆ. ಸಮೀಕ್ಷೆಯ ಫಲಿತಾಂಶಗಳು ಬಿಡುಗಡೆಯಾಗಿದ್ದು, ಕಾಂಗ್ರೆಸ್‌ಗೆ ಭಾರಿ ಆಘಾತ ತಂದಿವೆ.
2019ರ ಲೋಕಸಭೆ ಚುನಾವಣೆಯಲ್ಲಿ 28 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ 25 ಸ್ಥಾನಗಳಲ್ಲಿ 51 ಪ್ರತಿಶತ ಮತಗಳನ್ನು ಗಳಿಸಿದರೆ, 1 ಸ್ಥಾನ ಕಾಂಗ್ರೆಸ್‌ಗೆ, 1 ಜೆಡಿಎಸ್‌ಗೆ ಮತ್ತು 1 ಸ್ವತಂತ್ರ ಅಭ್ಯರ್ಥಿಗೆ ಲಭಿಸಿದೆ. ಆದರೆ, ಈ ಬಾರಿ ಬಿಜೆಪಿಯ ಸಂಖ್ಯೆ 24ಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ.

2019 ರಂತೆಯೇ ಬಿಜೆಪಿಯು ಶೇಕಡಾ 53 ರಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ವಿರೋಧ ಪಕ್ಷದ ನೇತೃತ್ವದ ಇಂಡಿಯಾ ಬ್ಲಾಕ್ 2019 ರಂತೆಯೇ ಶೇಕಡಾ 42 ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ಸಮೀಕ್ಷೆ ತಿಳಿಸಿದೆ.
ಮತ್ತೆ ಸೋಲಿನ ಸುಳಿಯಲ್ಲಿ ಕಾಂಗ್ರೆಸ್??
ಈ ಬಾರಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದಲ್ಲಿ ಸ್ಪರ್ಧಿಸಲಿವೆ. ಹಳೆ ಮೈಸೂರು ಭಾಗದಲ್ಲಿ ಪ್ರಬಲ ಅಸ್ತಿತ್ವ ಹೊಂದಿರುವ ಜೆಡಿಎಸ್ ನಾಲ್ಕರಿಂದ ಐದು ಸ್ಥಾನಗಳಲ್ಲಿ ಸ್ಪರ್ಧಿಸುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ 15 ರಿಂದ 20 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿರುವ ಕಾಂಗ್ರೆಸ್‌ಗೆ ಎನ್‌ಡಿಎ ತನ್ನ ನೆಲೆಯನ್ನು ಉಳಿಸಿಕೊಂಡಿರುವುದು ಹಿನ್ನಡೆಯಾಗಲಿದೆ. ಕಾಂಗ್ರೆಸ್‌ಗೆ ಕಳೆದ ವರ್ಷದ ವಿಧಾನಸಭಾ ಚುನಾವಣೆಯ ಅಭೂತಪೂರ್ವ ಗೆಲುವು ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲನ್ನು ಮರೆಸಿದೆ.
ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷವು ಸುಮಾರು 20 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಹೇಳಿದ್ದರು. "ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿಕೊಂಡು ನಾವು ಬಿಜೆಪಿಯವರಂತೆ ಸುಳ್ಳು ಹೇಳುವುದಿಲ್ಲ, ನಾವು 15 ರಿಂದ 20 ಸ್ಥಾನಗಳನ್ನು ಗೆಲ್ಲಬಹುದು ಎಂಬುದು ನಮ್ಮ ನಿರೀಕ್ಷೆಯಾಗಿದೆ" ಎಂದು ಸುದ್ದಿಗಾರರಿಗೆ ತಿಳಿಸಿದ್ದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ












Click it and Unblock the Notifications