Lok Sabha Election 2024: ಇಂದು ಕರ್ನಾಟಕಕ್ಕೆ ಅಮಿತ್ ಶಾ: ಎಲ್ಲೆಲ್ಲಿ ಪ್ರಚಾರ? ಇಲ್ಲಿದೆ ಸಂಪೂರ್ಣ ವಿವರ
ಬೆಂಗಳೂರು, ಮೇ 01: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಾವು ಜೋರಾಗಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಏಪ್ರಿಲ್ 26 ರಂದು ನಡೆದಿದ್ದು, ಮೇ 07 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈಗಾಗಲೇ ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಮೋದಿ, ಅಮಿತ್ ಶಾ ಸೇರಿದಂತೆ ಹಲವು ಘಟಾನುಘಟಿ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ಇಂದು(ಬುಧವಾರ) ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಮೇ.7 ರಂದು ರಾಜ್ಯದಲ್ಲಿ ನಡೆಯಲಿರುವ ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನಲೆ ಕೆಲ ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಆಗಮಿಸಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ರು, ಇದೀಗ ಮೋದಿ ಪ್ರಚಾರದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಧ್ಯಾಹ್ನ 3.20ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ಕರ್ನಾಟಕದಲ್ಲಿ ಎಲ್ಲೆಲ್ಲಿ ಪ್ರಚಾರ?
ಈಗಾಗಲೇ ಹಲವು ಬಾರೀ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಅವರು ಇಂದು(ಬುಧವಾರ) ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಮತಯಾಚನೆ ಮಾಡಲಿದ್ದಾರೆ. ಅಮಿತ್ ಶಾ ಅವರು ರಾಣೆಬೆನ್ನೂರಿನ ಕುರಬಗಿರಿ ಕ್ರಾಸ್ನಿಂದ ಅಶೋಕ ಸರ್ಕಲ್ವರೆಗೆ ಬೃಹತ್ ರೋಡ್ಶೋ ನಡೆಸಲಿದ್ದಾರೆ. ರೋಡ್ ಶೋ ಬಳಿಕ ಹುಬ್ಬಳ್ಳಿಗೆ ತೆರಳಲಿರುವ ಅಮಿತ್ ಶಾ ಅವರು ಸಂಜೆ 5.45ಕ್ಕೆ ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಸಿ ಪ್ರಹ್ಲಾದ್ ಜೋಶಿ ಪರ ಮತಬೇಟೆ ನಡೆಸಲಿದ್ದಾರೆ.
ಇನ್ನೂ ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡನ ಪುತ್ರಿ ನೇಹಾ ಹಿರೇಮಠ ನಿವಾಸಕ್ಕೆ ಅಮಿತ್ ಶಾ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುವ ಸಾಧ್ಯತೆಯಿದೆ. ನಳಿಕ ಅಮಿತ್ ಶಾ ಅವರು ರಾತ್ರಿ 7.10ಕ್ಕೆ ಹುಬ್ಬಳ್ಳಿ ಏರ್ಪೋರ್ಟ್ನಿಂದ ಹೈದರಾಬಾದ್ಗೆ ತೆರಳಲಿದ್ದಾರೆ.












Click it and Unblock the Notifications