ಲೋಕಸಭಾ ಚುನಾವಣೆ; ತವರು ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಸಿಎಂ ಪ್ಲಾನ್: 3 ದಿನ ಮೈಸೂರಲ್ಲೇ ಠಿಕಾಣಿ
ಮೈಸೂರು, ಆಗಸ್ಟ್ 28: ಲೋಕಸಭಾ ಚುನಾವಣೆಗೆ ಕೇವಲ 9 ತಿಂಗಳು ಮಾತ್ರ ಬಾಕಿ ಉಳಿದಿದ್ದು, ಆಡಳಿತರೂಢ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದೆ. ವಿಧಾನಸಭಾ ಚುನಾವಣೆಯ ಬಳಿಕ 2024 ರ ಲೋಕಸಭಾ ಚುನಾವಣೆಯ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನವನ್ನ ಗೆಲ್ಲಲು ಚಿಂತನೆಯನ್ನ ನಡೆಸಿದ್ದು, ಇತ್ತ ಸಿದ್ದರಾಮಯ್ಯ ಅವರುತವರು ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಮಾಸ್ಟರ್ ಪ್ಲಾನ್ ನಡೆಸಿದ್ದಾರೆ.
ಹೌದು, ವಿಧಾನಸಭಾ ಚುನಾವಣೆಯಲ್ಲಿ ತಂದೆಗಾಗಿ ವರುಣಾ ವಿಧಾನಸಭಾ ಕ್ಷೇತ್ರವನ್ನ ತ್ಯಾಗ ಮಾಡಿರುವ ಯತೀಂದ್ರ ಅವರ ಭವಿಷ್ಯವನ್ನ ರೂಪಿಸಲು ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಹೀಗಾಗಿ ಇಂದಿನಿಂದ (ಆಗಸ್ಟ್ 28) ರಿಂದ ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸವನ್ನ ಸಿದ್ದರಾಮಯ್ಯ ಕೈಗೊಂಡಿದ್ದಾರೆ.

ಈಗಾಗಲೇ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮೀ ಯೋಜನೆಯೂ ಈ ಹಿಂದೆ ಬೆಳಗಾವಿಯಲ್ಲಿ ಜಾರಿಗೊಳಿಸಲು ಹಲವು ತಯಾರಿಗಳು ನಡೆದಿತ್ತು, ಆದರೆ, ಇದೀಗ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ತರುವ ಕ್ಷೇತ್ರದಲ್ಲಿ ಇನ್ನಷ್ಟು ಹಿಡಿತ ಸಾಧಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಮಾಡಿದ್ದಾರೆ.
ಇನ್ನೂ ಆಗಸ್ಟ್ 30 ರಂದು ಗೃಹ ಲಕ್ಷ್ಮೀ ಯೋಜನೆಯೂ ಜಾರಿಯಾಗಲಿದ್ದು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮೀಗೆ ಚಾಲನೆ ನೀಡಲಿದ್ದಾರೆ. ಈ ಹಿನ್ನಲೆ ಮೈಸೂರು ಕ್ಷೇತ್ರದಲ್ಲೀ ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮವನ್ನ ಇನ್ನಷ್ಟು ಯಶಸ್ವಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪಣತೊಟ್ಟಿದ್ದು, ಇಂದಿನಿಂದ ಮೂರು ದಿನಗಳ ಕಾಲ ಮೈಸೂರಿನಲ್ಲಿ ಠಿಕಾಣಿ ಹೂಡಲಿದ್ದಾರೆ.
ಮೈಸೂರಿನಲ್ಲಿ 'ಗೃಹಲಕ್ಷ್ಮೀ' ಯೋಜನೆ ಜಾರಿಗೆ ಭರ್ಜರಿ ತಯಾರಿ ನಡೆಸಿದ್ದು, ಮಹಾರಾಜ ಕಾಲೇಜು ಅವರಣದಲ್ಲಿ ಬಹೃತ್ ವೇದಿಕೆ ನಿರ್ಮಾಣವಾಗುತ್ತಿದೆ. ಸಮಾರಂಭದಲ್ಲಿ ಬೃಹತ್ ವೇದಿಕೆ ಜೊತೆ LED ಟಿವಿಗಳನ್ನ ಅಳವಡಿಕೆ ಮಾಡಲಾಗುತ್ತಿದೆ. ಸಮಾರಂಭದಲ್ಲೇ ರಾಜ್ಯ ಸರ್ಕಾರ ಆಡಳಿತದ ಸಾಧನೆ ಅನಾವರಣ ಮಾಡಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ಈಗಾಗಲೇ ಸರ್ಕಾರ ರಚನೆಯಾಗಿ 100 ದಿನ ಪೂರೈಸಿದ ಹಿನ್ನಲೆ ಸರ್ಕಾರದ ಸಾಧನೆಯ ಕುರಿತು ಅನಾವರಣ ಕಾರ್ಯಕ್ರಮವನ್ನ ನಡೆಸಲಿದೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇನ್ನೂ ಈ ಕಾರ್ಯಕ್ರಮದಲ್ಲಿ ಹೆಚ್ಚು ಸಂಖ್ಯೆಯನ್ನ ಜನರನ್ನ ಸೇರಿಸಲು ನಿಟ್ಟಿನಲ್ಲಿ ಕೈ ಪಡೆ ಪ್ಲಾನ್ ಹಾಕಿಕೊಂಡಿದ್ದು, ಬೃಹತ್ ಕಾರ್ಯಕ್ರಮಕ್ಕಾಗಿ ಒಂದು ಲಕ್ಷಕ್ಕೂ ಹೆಚ್ಚು ಆಸನ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರಿಗಾಗಿಯೇ ಸಂಪೂರ್ಣ ಕಾರ್ಯಕ್ರಮ ಮೀಸಲು ಇಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಲ್ಲಿ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಮುಂದಾಗಿದೆ.
ಅಲ್ಲದೇ ಹಳೇ ಮೈಸೂರು ಭಾಗದ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ ನಾಯಕರು ಈ ಬಾರಿ ಲೋಕಸಮರದಲ್ಲಿ ಅತೀ ಹೆಚ್ಚು ಸ್ಥಾನಗಳನ್ನ ಪಡೆಯಲು ಪಣತೊಟ್ಟಿದ್ದು, ಹಳೇ ಮೈಸೂರು ಜಿಲ್ಲೆಗಳಾದ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ ಜಿಲ್ಲೆಗಳ ಸಾವಿರಾರು ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು ಎಲ್ಲರನ್ನೂ ಕರೆತರಲು ಸುಮಾರು 2 ಸಾವಿರ ಬಸ್ ಗಳ ವ್ಯವಸ್ಥೆ ಮಾಡಲಾಗುತ್ತಿದೆ.












Click it and Unblock the Notifications