ಲೋಕಸಭಾ ಚುನಾವಣೆ: ನಾಲ್ಕು ಕ್ಷೇತ್ರದಿಂದ ಜೆಡಿಎಸ್‌ ಸ್ಪರ್ಧೆ? ಆ ಕ್ಷೇತ್ರಗಳು ಯಾವುವು?

ಬೆಂಗಳೂರು, ಫೆಬ್ರವರಿ 05: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ರಣತಂತ್ರವನ್ನು ರೂಪಿಸಿದೆ. ಶತಾಯಗತಾಯ ರಾಜ್ಯದಲ್ಲಿ ಈಗಿರುವ ಸ್ಥಾನಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆಯನ್ನು ಶುರು ಮಾಡಿದೆ.

ಹೌದು, ಕಳೆದ ಸೆಪ್ಟೆಂಬರ್‌ನಲ್ಲಿ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಮೈತ್ರಿಯನ್ನು ಘೋಷಿಸಿದ್ದ ಭಾರತೀಯ ಜನತಾ ಪಕ್ಷ ಮತ್ತು ಜನತಾ ದಳ (ಜಾತ್ಯತೀತ) ಸೀಟು ಹಂಚಿಕೆಯನ್ನು ಅಂತಿಮಗೊಳಿಸುವ ಹಂತದಲ್ಲಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಬಿಜೆಪಿ 28 ಸ್ಥಾನಗಳ ಪೈಕಿ 24ರಲ್ಲಿ ಸ್ಪರ್ಧಿಸಲಿದ್ದು, ಜೆಡಿಎಸ್ 4 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

Lok Sabha Polls: JDS may contest 4 Lok Sabha seats

ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್‌ ಕಾರ್ಯಕರ್ತರನ್ನ ನಡುವೆ ಹೊಂದಾಣಿಕೆಯನ್ನ ರೂಪಿಸುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನ ಹಿರಿಯ ನಾಯಕರು ಸಭೆಯನ್ನ ನಡೆಸಿದ್ದಾರೆ. ಚುನಾವಣೆಗಳನ್ನು ಔಪಚಾರಿಕವಾಗಿ ಘೋಷಿಸಿದ ನಂತರ ಕ್ಷೇತ್ರ ಹಂಚಿಕೆ ಕುರಿತು ಅಧಿಕೃತಗೊಳಿಸುವ ಯೋಜನೆಯನ್ನ ಬಿಜೆಪಿ ಹೈಕಮಾಂಡ್‌ ಹಾಕಿಕೊಂಡಿದೆ ಎನ್ನಲಾಗಿದೆ. 28 ಕ್ಷೇತ್ರಗಳ ಪೈಕಿ ಮಂಡ್ಯ, ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಜೆಡಿಎಸ್‌ಗೆ ಈ ಕ್ಷೇತ್ರಗಳು ಹಂಚಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಹೈಕಮಾಂಡ್‌ ಜೊತೆಗೆ ಮಾತುಕತೆ ನಡೆಸಿದ್ದ ಜೆಡಿಎಸ್‌ ನಾಯಕರು ಆರಂಭದಲ್ಲಿ ಮಂಡ್ಯ, ಹಾಸನ ಮತ್ತು ಚಿಕ್ಕಬಳ್ಳಾಪುರ ಹೊರತುಪಡಿಸಿ ತುಮಕೂರು ಮತ್ತು ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಲು ಪಕ್ಷವು ಆಸಕ್ತಿ ತೋರಿಸಿದೆ ಎಂದು ಹೇಳಿದರು. ಆದರೆ, ಕೆಲವು ಸರ್ವೆಗಳ ಆಧಾರಿಸಿ ಇದೀಗ ಜೆಡಿಎಸ್‌ ಗೆ ಒಕ್ಕಲಿಗರ ಕೋಟೆಯಲ್ಲಿ ಹೆಚ್ಚು ಪ್ರಾಬಲ್ಯವಿದೆ ಎಂಬುದು ತಿಳಿದು ಬಂದಿದ್ದು, ಮಂಡ್ಯ, ಹಾಸನ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರವನ್ನ ಬಿಟ್ಟುಕೊಡಲು ನಿರ್ಧರಿಸಿದೆ ಎನ್ನಲಾಗಿದೆ.

ಕರ್ನಾಟಕದ ಜನಸಂಖ್ಯೆಯ ಸುಮಾರು 16% ರಷ್ಟಿರುವ ಒಕ್ಕಲಿಗ ಮತದ ಪ್ರಾಬಲ್ಯವನ್ನ ಪರಿಗಣಿಸಿ ರಾಜ್ಯದ ರಾಜಕೀಯ ವಿಶ್ಲೇಷಕರು ಈ ಮೈತ್ರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಮೂಲಗಳು ಹೇಳುವ ಪ್ರಕಾರ ಜೆಡಿಎಸ್ ಕೋಟಾದಲ್ಲಿ ಎಲ್ಲಾ ನಾಲ್ಕು ಸ್ಥಾನಗಳು ಒಕ್ಕಲಿಗ ಭದ್ರಕೋಟೆಗಳಾಗಿವೆ. ಹೀಗಾಗಿ ಈ ನಾಲ್ಕು ಕ್ಷೇತ್ರಗಳು ಜೆಡಿಎಸ್‌ ಗೆ ಸಿಗುವ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿ ಬಂದಿದೆ.

Lok Sabha Polls: JDS may contest 4 Lok Sabha seats

ಒಕ್ಕಲಿಗರ ಮೇಲೆ ಜೆಡಿಎಸ್‌ಗೆ ಹಿಡಿತವಿದ್ದರೆ, ಪಕ್ಷದ ಮುಖ್ಯಸ್ಥ ಎಚ್‌ಡಿ ಕುಮಾರಸ್ವಾಮಿ ಮತ್ತು ಅವರ ತಂದೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸಮುದಾಯಕ್ಕೆ ಸೇರಿದವರಾಗಿದ್ದರೆ, ಕಾಂಗ್ರೆಸ್‌ನಲ್ಲಿ ಡಿ ಕೆ ಶಿವಕುಮಾರ್ ಅವರಲ್ಲಿ ಪ್ರಬಲ ಒಕ್ಕಲಿಗ ನಾಯಕರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ, ಒಕ್ಕಲಿಗರು ತಮ್ಮ ಬೆಂಬಲವನ್ನು ವಿಭಜಿಸಿದರು, ಇದು ಜೆಡಿಎಸ್‌ನ ಕಾರ್ಯಕ್ಷಮತೆಯ ಮೇಲೆ ಪರಿಣಾಮ ಬೀರಿತು. ಈ ಕ್ಷೇತ್ರಗಳಲ್ಲಿನ ಸಂಸತ್ತಿನ ಚುನಾವಣೆಯು ಒಕ್ಕಲಿಗರು ಯಾವ ರೀತಿಯಲ್ಲಿ ಮತ ಚಲಾಯಿಸುತ್ತಾರೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ.

2019 ರ ಲೋಕಸಭೆ ಚುನಾವಣೆಯಲ್ಲಿ, ಕರ್ನಾಟಕದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಒಟ್ಟಿಗೆ ಸ್ಪರ್ಧಿಸಿದಾಗ, ಎರಡೂ ಪಕ್ಷಗಳು ನಿರಾಶೆಯನ್ನು ಎದುರಿಸಿದವು, ತಲಾ ಒಂದು ಸ್ಥಾನವನ್ನು ಮಾತ್ರ ಪಡೆದುಕೊಂಡವು. ಆದರೆ, ಇದೀಗ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿಯಾಗಿದೆ. ಇತ್ತ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್‌ ಡಿ ಕುಮಾರಸ್ವಾಮಿ ಅವರು, ಒಕ್ಕಲಿಗರ ಭದ್ರಕೋಟೆಗಳಾದ ಐದು ಲೋಕಸಭಾ ಕ್ಷೇತ್ರದಲ್ಲಿ ಸರ್ವೆ ನಡೆಸಿದ್ದು, ಬಿಜೆಪಿಗಿಂತ ಜೆಡಿಎಸ್‌ ಗೆ ಹೆಚ್ಚಿನ ಒಲವು ಕೇಳಿ ಬಂದಿದ್ದು, 28 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳು ಜೆಡಿಎಸ್‌ ತೆಕ್ಕೆಗೆ ಬರಲಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+