ದೇಶಪಾಂಡೆ ಪುತ್ರನಿಗೆ ಟಿಕೆಟ್‌ ಭಾಗ್ಯ!

ಬೆಂಗಳೂರು, ಮಾ. 19 : ಕರ್ನಾಟಕ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಸರತ್ತು ಅಂತಿಮ ಹಂತ ತಲುಪಿದ್ದು ಮಂಗಳವಾರ ರಾತ್ರಿ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ ಸಚಿವ ಆರ್‌.ವಿ.ದೇಶಪಾಂಡೆ ಪುತ್ರ ಪ್ರಶಾಂತ್‌ ದೇಶಪಾಂಡೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನೂ ಎರಡು ಕ್ಷೇತ್ರಗಳನ್ನು ಮಾತ್ರ ಪಕ್ಷ ಬಾಕಿ ಉಳಿಸಿಕೊಂಡಿದೆ.

ಮಂಗಳವಾರ ಎಐಸಿಸಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಕರ್ನಾಟಕದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಆಂತರಿಕ ಚುನಾವಣೆಯಲ್ಲಿ ಜಯಗಳಿಸಿದ್ದ ಸಿ.ನಾರಾಯಣಸ್ವಾಮಿ ಅವರನ್ನು ಅಧಿಕೃತವಾಗಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ. [ಕಾಂಗ್ರೆಸ್ 2ನೇ ಪಟ್ಟಿ]

Karnataka Congress

ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಕನ್ನಡ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಪುತ್ರ ಪ್ರಶಾಂತ್ ದೇಶಪಾಂಡೆ ಟಿಕೆಟ್ ಪಡೆದಿದ್ದಾರೆ. ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವ ಪುತ್ರ ನಿವೇದಿತ ಆಳ್ವ ಹಾಗೂ ರಾಜ್ಯಸಭೆ ಸದಸ್ಯ ಬಿ.ಕೆ.ಹರಿಪ್ರಸಾದ್‌ ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹರಿಪ್ರಸಾದ್‌ ಸ್ಪರ್ಧಿಸಲು ನಿರಾಸಕ್ತಿ ತೋರಿದ ಹಿನ್ನಲೆಯಲ್ಲಿ ಪ್ರಶಾಂತ್‌ ದೇಶಪಾಂಡೆ ಅವರನ್ನು ಅಭ್ಯರ್ಥಿಯಾಗಿ ಘೋಷಿಸಲಾಗಿದೆ. [ಮೊದಲ ಪಟ್ಟಿ]

ಧಾರವಾಡ, ಹಾವೇರಿಗೆ ಯಾರು : ಸದ್ಯ ಕಾಂಗ್ರೆಸ್ 26 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಹಾವೇರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ತವರು ಜಿಲ್ಲೆ ಧಾರವಾಡ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಾಕಿ ಉಳಿಸಿಕೊಂಡಿದೆ. ಈ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್ ಗಾಗಿ ಭಾರೀ ಪೈಪೋಟಿ ಏರ್ಪಟ್ಟಿರುವ ಕಾರಣ ಇನ್ನೂ ಅಭ್ಯರ್ಥಿಗಳನ್ನು ಪ್ರಕಟಿಸಿಲ್ಲ. [ಬಿರುಸಿನ ಮತಯಾಚನೆ ಚಿತ್ರಗಳು]

ಹಾವೇರಿ ಕ್ಷೇತ್ರದಲ್ಲಿ ಸಲೀಂ ಅಹಮದ್‌ ಹಾಗೂ ಸಚಿವ ಎಚ್‌.ಕೆ.ಪಾಟೀಲ್‌ ಸಹೋದರ ಡಿ.ಆರ್‌.ಪಾಟೀಲ್‌ ನಡುವೆ ಟಿಕೆಟ್ ಗಾಗಿ ಪೈಪೋಟಿ ನಡೆಯುತ್ತಿದೆ. ಧಾರವಾಡ ಕ್ಷೇತ್ರದಲ್ಲಿಯೂ ಲಿಂಗಾಯತ ಮತ್ತು ಮುಸ್ಲಿಂ ಆಕಾಂಕ್ಷಿಗಳ ನಡುವೆ ಟಿಕೆಟ್‌ ಗಾಗಿ ದೆಹಲಿ ಮಟ್ಟದಲ್ಲಿ ಲಾಬಿ ನಡೆಯುತ್ತಿದೆ. ಆದ್ದರಿಂದ ಇನ್ನೆರಡು ದಿನದಲ್ಲಿ ಮತ್ತೊಮ್ಮೆ ಸಭೆ ನಡೆಸಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪಕ್ಷ ತೀರ್ಮಾನಿಸಿದೆ.

3ನೇ ಪಟ್ಟಿಯಲ್ಲಿನ ಅಭ್ಯರ್ಥಿಗಳು

ಬೆಂಗಳೂರು ಉತ್ತರ - ಸಿ.ನಾರಾಯಣ ಸ್ವಾಮಿ
ಉತ್ತರ ಕನ್ನಡ -ಪ್ರಶಾಂತ್ ದೇಶಪಾಂಡೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+