ಬೆಂಗಳೂರು ಉತ್ತರ ಕ್ಷೇತ್ರಕ್ಕಾಗಿ ಫೈಟ್: ಶೋಭಾ, ಸಿ ಟಿ ರವಿ ಸ್ಪರ್ಧೆಗೆ ಬ್ರೇಕ್‌ ಹಾಕಲು ಮಾಜಿ ಸಿಎಂ ದಾಳ

ಬೆಂಗಳೂರು, ಜನವರಿ 03: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಿವಿ ಸದಾನಂದ ಗೌಡರ ಕ್ಷೇತ್ರದಲ್ಲಿ ಈ ಬಾರೀ ಸ್ಪರ್ಧೆಗೆ ಬಿಜೆಪಿ ಹಲವು ನಾಯಕರು ತಯಾರಿ ನಡೆಸಿದ್ದಾರೆ.

ಹೌದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಒಕ್ಕಲಿಗರ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಸುಲಭವಾಗಿ ಗೆಲುವು ಸಾಧಿಸಬಹುದು ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಸಚಿವ ಸಿ ಟಿ ರವಿ ಸ್ಪರ್ಧೆ ರೆಡಿಯಾಗುತ್ತಿದ್ದಾರೆ. ಆದರೆ, ಇವರಿಬ್ಬರ ಸ್ಪರ್ಧಯನ್ನ ತಡೆಯಲು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಡಿ ವಿ ಸದಾನಂದಗೌಡರು ಹೊಸ ದಾಳವನ್ನ ಪ್ರಯೋಗಿಸುತ್ತಿದ್ದಾರೆ.

Lok Sabha polls: Race for Bengaluru North Lok Sabha Ticket Heats Up in BJP

ಈಗಾಗಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವ ಡಿ ವಿ ಸದಾನಂದಗೌಡರ ಪುನಃ ಸ್ಪರ್ಧೆಗೆ ಆಸಕ್ತಿ ತೋರಿಸಿರುವುದು ಬಿಜೆಪಿಯಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇತ್ತ ಬಿಜೆಪಿ ಹೈಕಮಾಂಡ್‌ ನಾಯಕರ ಮೇಲೆ ಅಸಮಾಧಾನ ಹೊರ ಹಾಕಿದ್ದ ಡಿ ವಿ ಸದಾನಂದಗೌಡರು, ಕೆಲ ದಿನಗಳ ಹಿಂದೆ ನಡೆದ ಪದಾಧಿಕಾರಿಗಳ ಆಯ್ಕೆಯಲ್ಲ ಅಸಮಾಧಾನವನ್ನ ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ಶಾಸಕ ಡಾ ಅಶ್ವಥ್ ನಾರಾಯಣ್ ಅವರು ಸದಾನಂದ ಗೌಡರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿಇ ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಮರು ಸ್ಪರ್ಧಿಸುವಂತೆ ಒತ್ತಾಯಗಳು ಕೇಳಿ ಬಂದಿದೆ ಎನ್ನಲಾಗಿದೆ. ಮತ್ತೆ ಚುನಾವಣೆಯಲ್ಲಿ ಸದಾನಂದಗೌಡರು ಸ್ಪರ್ಧಿಸುವ ಕುರಿತು ಮನಸ್ಸು ಬದಲಾಯಿಸಿದ್ದಾರೆ ಎಂದು ಹೇಳಲಾಗಿದೆ.

Lok Sabha polls: Race for Bengaluru North Lok Sabha Ticket Heats Up in BJP

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಲಿ 13 ಸಂಸದರ ಪೈಕಿ ಡಿ ವಿ ಸದಾನಂದಗೌಡರಿಗೆ ಟಿಕೆಟ್‌ ನೀಡುವುದಿಲ್ಲ ಎಂಬ ಕಾರಣಕ್ಕೆ ಬಿಜೆಪಿಯಲ್ಲಿ ಸುಲಭವಾಗಿ ಗೆಲ್ಲಬಹುದಾದ ಬೆಂಗಳೂರು ಉತ್ತರ ಕ್ಷೇತ್ರದ ಮೇಲೆ ಮಾಜಿ ಶಾಸಕ ಸಿ.ಟಿ.ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ ಹಲವರು ಆಕಾಂಕ್ಷಿಗಳು ಕಣ್ಣೀಟ್ಟಿದ್ದಾರೆ. ಶೋಭಾ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ಸಿ.ಟಿ.ರವಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ಶೋಭಾ ಸ್ವಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಉತ್ತರ ಕ್ಷೇತ್ರದಿಂದ ಮಾಜಿ ಸಚಿವ ಸಿ ಟಿ ರವಿ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ ಎಂದು ಮೂಲಗಳು ಹೇಳಿವೆ.

ಇತ್ತ ಈ ಇಬ್ಬರು ನಾಯಕರ ಸ್ಪರ್ಧೆಯನ್ನ ತಡೆಯಲು ಬಿಜೆಪಿ ಪಕ್ಷದಲ್ಲೇ ಒಂದು ಬಣ ಬಾರೀ ಪ್ರಯತ್ನವನ್ನ ನಡೆಸಿದೆ ಎನ್ನಲಾಗಿದೆ. ಇನ್ನೂ ಪಕ್ಷದ ವಿರುದ್ಧ ಅಸಮಾಧಾನ ಹೊರ ಹಾಕಿರುವ ಡಿ ವಿ ಸದಾನಂದಗೌಡರು ಬೆಂಗಳೂರು ಉತ್ತರ ಕ್ಷೇತ್ರಕ್ಕಾಗಿ ಆಸೆ ತೋರಿಸಲಾಗಿದೆ. ಹೀಗಾಗಿ ಉತ್ತರ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸುವ ಬಗ್ಗೆ ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ಬಿಜೆಪಿ ಹೈಕಮಾಂಡ್‌ ಈ ಬಾರೀ ಟಿಕೆಟ್‌ ನೀಡದಿದ್ದರೇ ಕಾಂಗ್ರೆಸ್‌ ನವರನ್ನ ಬುಟ್ಟಿಗೆ ಹಾಕಿಕೊಳ್ಳಬಹುದು ಎಂಬ ಆತಂಕ ಬಿಜೆಪಿ ನಾಯಕರಿಗಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+