Get Updates
Get notified of breaking news, exclusive insights, and must-see stories!

ಮಾಜಿ ಸಿಎಂ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ಬೆಂಗಳೂರು, ಸೆಪ್ಟೆಂಬರ್ 24: ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನೀಡಲಾದ ಅತ್ಯುತ್ತಮ ಶಾಸಕ ಪ್ರಸ್ತಿಯನ್ನು ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಿ ಸನ್ಮಾನಿಸಲಾಯಿತು.

ವಿಧಾನಸಭೆಯಲ್ಲಿ ಶುಕ್ರವಾರ ನಡೆದ ಜಂಟಿ ಅಧಿವೇಶನದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಜಂಟಿ ಅಧೀವೇಶನ ಆರಂಭವಾಗುತ್ತಿದ್ದಂತೆ ಮಾತನಾಡಿದ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, "ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಮೊದಲಿಗೆ ಆಯ್ಕೆ ಮಾಡಬೇಕು ಎಂದು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ" ಎಂದು ಹೇಳಿದರು.

Lok Sabha Speaker Om Birla presents Best MLA award to BS Yediyurappa

ಯಡಿಯೂರಪ್ಪ ಅವರು ಶಾಸಕರಾಗಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಸುದೀರ್ಘವಾಗಿ ಜನಪರವಾದಂತಹ ಕಾರ್ಯಗಳನ್ನು ಮಾಡಿದ್ದಾರೆ. ಅಲ್ಲದೆ, ಎಷ್ಟೇ ಕೆಲಸ ಕಾರ್ಯಗಳು ಇದ್ದರೂ ಶಾಸನ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಾರೆ. ಎಲ್ಲರ ಅಭಿಪ್ರಾಯಗಳನ್ನು ಆಲಿಸಿ ಸ್ಪಷ್ಟ ನಿಲುವುಗಳನ್ನು ತೆಗೆದುಕೊಳ್ಳುತ್ತಾರೆ. ಹೀಗಾಗಿ ಅವರ ಸೇವೆಯನ್ನು ಗಮನಿಸಿ ಮೊದಲ ಪ್ರಶಸ್ತಿಗೆ ಅವರನ್ನು ಸಮಿತಿಯು ಆಯ್ಕೆ ಮಾಡಿದೆ ಎಂದರು.

Lok Sabha Speaker Om Birla presents Best MLA award to BS Yediyurappa

ಲೋಕಸಭೆಯಲ್ಲಿ ಈಗಾಗಲೇ ಅತ್ಯುತ್ತಮ ಸಂಸದ ಎಂಬ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅಲ್ಲದೆ, ಉತ್ತರ ಪ್ರದೇಶ, ಅಸ್ಸಾಂ, ಜಾರ್ಖಂಡ್ ಮುಂತಾದ ರಾಜ್ಯಗಳಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗುತ್ತಿದೆ. ಇದೇ ಪದ್ಧತಿಯನ್ನು ಈಗ ರಾಜ್ಯ ವಿಧಾನಸಭೆಯಲ್ಲಿಯೂ ಪ್ರಾರಂಭಿಸಲಾಗಿದ್ದು, ಇನ್ನು ಮುಂದೆ ಪ್ರತಿ ವರ್ಷವೂ ಒಬ್ಬ ಉತ್ತಮ ಸಂಸದೀಯ ಪಟು ಶಾಸಕರೊಬ್ಬರನ್ನು ಆಯ್ಕೆ ಮಾಡಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.

Recommended Video

      CSK ತಂಡಕ್ಕೆ ಟೀಕೆ ಮಾಡಿದ ವೀರೇಂದ್ರ ಸೆಹ್ವಾಗ್! | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+