ಲೋಕಾಯುಕ್ತ ಪ್ರಕರಣ: ಕೈ ತೊಳೆದುಕೊಂಡ ಸಿದ್ದು
ಬೆಂಗಳೂರು, ಜೂ. 28: ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ತನಿಖೆಯನ್ನು ಸ್ವತಂತ್ರ ಸಂಸ್ಥೆಯೊಂದಕ್ಕೆ ವಹಿಸಬೇಕು ಎಂದು ಸ್ವತಃ ಲೋಕಾಯುಕ್ತ ನ್ಯಾ. ವೈ.ಭಾಸ್ಕರ್‌ರಾವ್ ಸರ್ಕಾರಕ್ಕೆ ಪ್ರಸ್ತಾವನೆಯೊಂದನ್ನು ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಮೊದಲೇ ಹೇಳಿದಂತೆ ತನಿಖೆಯಲ್ಲಿ ನಾನು ತಪ್ಪಿತಸ್ಥ ಎಂದು ಕಂಡುಬಂದರೆ ಕೂಡಲೇ ರಾಜೀನಾಮೆ ನೀಡುತ್ತೇನೆ. ನನ್ನ ಪುತ್ರ ಅಶ್ವಿನ್‌ರಾವ್ ಯಾವ ಭ್ರಷ್ಟಾಚಾರ ನಡೆಸಿಲ್ಲ ಎಂದು ಆರೋಪಗಳನ್ನು ತಳ್ಳಿಹಾಕಿದರು. ಇಲ್ಲಿ ಹಣದ ಬೇಡಿಕೆ ಇಟ್ಟವರು ಯಾರು ಎಂಬುದೇ ನನಗೆ ಗೊತ್ತಿಲ್ಲ. ಹಣ ಕೇಳಿದ ಅಧಿಕಾರಿಗಳ ಹೆಸರೇ ಲೋಕಾಯುಕ್ತದಲ್ಲಿಲ್ಲ ಎಂದು ಹೇಳಿದರು.[ಲೋಕಾಯುಕ್ತದಲ್ಲೇ ಭ್ರಷ್ಟಾಚಾರ, ಮುಂದೇನು?]

ಆದರೆ ಇದಕ್ಕೆ ಉತ್ತರಿಸಿರುವ ಸಿದ್ದರಾಮಯ್ಯ, ಎಲ್ಲ ಪ್ರಕರಣಗಳನ್ನು ಸಿಬಿಐ ಗೆ ಒಪ್ಪಿಸಲು ಸಾಧ್ಯವಿಲ್ಲ. ಸರ್ಕಾರಕ್ಕೂ ಇದ್ಕಕ್ಕೂ ಸಂಬಂಧವೇ ಇಲ್ಲ. ಲೋಕಾಯುಕ್ತದಲ್ಲಿ ಹಗರಣ ನಡೆದರೆ ಸರ್ಕಾರ ಏನು ಮಾಡಲು ಸಾಧ್ಯ ಎಂದು ಪ್ರಶ್ನೆ ಮಾಡಿ ಕೈ ತೊಳೆದುಕೊಂಡಿದ್ದಾರೆ.
ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಘಟನೆ ಬಗ್ಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದು ನಂಬಿಕೆಯಿಲ್ಲದ ಲೋಕಾಯುಕ್ತ ಸಂಸ್ಥೆ ಮುಚ್ಚುವುದು ಒಳಿತು ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎವ್. ಡಿ. ದೇವೇಗೌಡ ಆರೋಪ ಬಂದ ಮೇಲೆ ಸ್ಥಾನದಲ್ಲಿರುವುದಕ್ಕಿಂತ ಭಾಸ್ಕರ್ ರಾವ್ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಹೇಳಿದ್ದಾರೆ.[ಲೋಕಾಯುಕ್ತದಲ್ಲಿ ಕೋಟಿ ಡೀಲ್, ಸಿಸಿಬಿ ತನಿಖೆ]
ಯಾಕೆ ಸಿಸಿಬಿ ಬೇಡ?
ಸದ್ಯ ತನಿಖೆಯ ನೇತೃತ್ವ ವಹಿಸಿರುವ ಕೆಲ ಅಧಿಕಾರಿಗಳ ಮೇಲೆ ಹಿಂದೆ ಲೋಕಾಯುಕ್ತ ರೈಡ್ ಮಾಡಲಾಗಿತ್ತು. ಅಲ್ಲದೇ ಅವರ ಮೇಲೆ ಆರೋಪಗಳಿವೆ. ಹಾಗಾಗಿ ತನಿಖೆ ದಿಕ್ಕು ತಪ್ಪಬಹುದು. ಈ ಕಾರಣಕ್ಕೆ ಸ್ವತಂತ್ರ ಸಂಸ್ಥೆಗೆ ವಹಿಸುವುದು ಸೂಕ್ತ ಎಂಬುದು ಭಾಸ್ಕರ್‌ರಾವ್ ಒತ್ತಾಯ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications