ಅಶ್ವಿನ್ ರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು, ಆಗಸ್ಟ್ 17 : ಎರಡು ಪ್ರಕರಣಗಳಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಪ್ರಕರಣದಲ್ಲಿ ಉಳಿದ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು.

ಆ.11ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ವಿ.ಬೋಪಯ್ಯ ಅವರು ಅಶ್ವಿನ್ ರಾವ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನಡೆಸಿ, ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟಗೊಂಡಿದ್ದು ಜಾಮೀನು ಅರ್ಜಿ ತಿರಸ್ಕೃರಿಸಲಾಗಿದೆ. [ನಾಲ್ವರ ಜಾಮೀನು ಅರ್ಜಿ ವಜಾ]

lokayukta

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಎಂಜಿನಿಯರ್‌ ಕೃಷ್ಣಮೂರ್ತಿ ಮತ್ತು ಹಾವೇರಿಯ ಲೋಕೋಪಯೋಗಿ ಇಂಜಿನಿಯರ್ ಚನ್ನಬಸಪ್ಪ ಅವರು ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆ ಎಸ್‌ಐಟಿ ಅಶ್ವಿನ್ ರಾವ್ ಅವರನ್ನು ಬಂಧಿಸಿದೆ. ಎರಡೂ ಪ್ರಕರಣಗಳಲ್ಲೂ ಅವರು ಜಾಮೀನಿಗಾಗಿ ಮನವಿ ಮಾಡಿದ್ದರು. [ಲೋಕಾಯುಕ್ತದಲ್ಲಿ ಇದೇನಿದು ಹಗರಣ?]

ಎಸ್‌ಐಟಿ ಆಕ್ಷೇಪಣೆ ಸಲ್ಲಿಸಿತ್ತು : ಎಸ್‌ಐಟಿ ಪರವಾಗಿ ವಾದ ಮಂಡನೆ ಮಾಡಿದ್ದ ಎಸ್‌ಪಿಸಿ ಜನಾರ್ಧನ್ ಅವರು, ಅಶ್ವಿನ್ ರಾವ್ ಅವರ ವಿರುದ್ಧದ ಆರೋಪಕ್ಕೆ ಸೂಕ್ತ ಸಾಕ್ಷಿಗಳು ಲಭ್ಯವಾಗಿವೆ. ಅಶ್ವಿನ್ ರಾವ್ ಅವರು ಪ್ರಭಾವಿ ವ್ಯಕ್ತಿಗಳ ಪುತ್ರರಾಗಿರುವುದರಿಂದ ಸಾಕ್ಷಿಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಜಾಮೀನು ನೀಡಬಾರದು ಎಂದು ಕೋರ್ಟ್‌ಗೆ ಮನವಿ ಮಾಡಿದ್ದರು.

ಆ.14ರ ಶುಕ್ರವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಸೈಯದ್ ರಿಯಾಜ್, ಅಶೋಕ್ ಕುಮಾರ್, ಶ್ರೀನಿವಾಸ ಗೌಡ, ಶಂಕರೇಗೌಡ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+