ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಭಾಸ್ಕರರಾವ್‌ಗೆ ಸಮನ್ಸ್

|
Google Oneindia Kannada News

ಬೆಂಗಳೂರು, ಆಗಸ್ಟ್ 28 : ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ನ್ಯಾ.ಭಾಸ್ಕರರಾವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಪ್ರಕರಣದಲ್ಲಿ ಭಾಸ್ಕರರಾವ್ ಅವರು 7ನೇ ಆರೋಪಿಯಾಗಿದ್ದಾರೆ.

ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಭಾಸ್ಕರರಾವ್ ಅವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಲೋಕಾಯುಕ್ತ ವಿಶೇಷ ನ್ಯಾಯಾಲಯ, ಆ.30ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ.[ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ಭಾಸ್ಕರರಾವ್ 7ನೇ ಆರೋಪಿ]

Y.Bhaskar Rao

ಸರ್ಕಾರಿ ಅಧಿಕಾರಿಗಳಿಗೆ ಹಣದ ಬೇಡಿಕೆ ಇಡಲು ಭಾಸ್ಕರರಾವ್ ಪುತ್ರ ಅಶ್ವಿನ್ ರಾವ್ ಅವರು ಲೋಕಾಯುಕ್ತ ಕಚೇರಿ ಮತ್ತು ಭಾಸ್ಕರರಾವ್ ಅವರ ಸರ್ಕಾರಿ ನಿವಾಸವನ್ನು ಬಳಸಿಕೊಂಡಿದ್ದರು. ಈ ಬಗ್ಗೆ ತಿಳಿದಿದ್ದರೂ ಭಾಸ್ಕರರಾವ್ ಪುತ್ರನನ್ನು ರಕ್ಷಿಸಲು ಮತ್ತು ಸಾಕ್ಷಿಗಳನ್ನು ನಾಶಮಾಡಲು ಯತ್ನಿಸಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.[ಲೋಕಾಯುಕ್ತದಲ್ಲಿ ಏನಿದು ಹಗರಣ?]

ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ನ್ಯಾ. ಭಾಸ್ಕರರಾವ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರು ಜುಲೈ ತಿಂಗಳಿನಲ್ಲಿ ಒಪ್ಪಿಗೆ ನೀಡಿದ್ದರು. ನಂತರ ಎಸ್‌ಐಟಿ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು.[ಭಾಸ್ಕರರಾವ್ ರಾಜೀನಾಮೆ]

ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಸ್ಕರರಾವ್ ಅವರು 7ನೇ ಆರೋಪಿಯಾಗಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಐಎಎಸ್ ಅಧಿಕಾರಿ ಎಂ.ಲಕ್ಷ್ಮೀನಾರಾಯಣ ಮತ್ತು ನಿವೃತ್ತ ನೋಂದಣಿ ಮಹಾನಿರ್ದೇಶಕ (ಐಜಿಆರ್‌) ಜಿ.ಸಿ.ಪ್ರಕಾಶ್ ಅವರ ಹೇಳಿಕೆಗಳನ್ನು ಉಲ್ಲೇಖಿಸಿದೆ.

English summary
SIT which probing extortion and corruption cases in Karnataka Lokayukta, filed the charge-sheet against former Lokayukta Justice Y.Bhaskar Rao. The Special Lokayukta Court issued summons to Bhaskar Rao to appear before it August 30, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X