Prashanth Madal : ಪ್ರಶಾಂತ್ ಮಾಡಾಳ್ ವಶಕ್ಕೆ ಕೊಡಿ, ಕೋರ್ಟ್‌ಗೆ ಮೊರೆ ಹೋದ ಪೊಲೀಸ್

ಸೋಮವಾರ ಲೋಕಾಯುಕ್ತ ಪೊಲೀಸರು ಪ್ರಶಾಂತ್ ಮಾಡಾಳ್ ಮತ್ತು ಇತರ ಆರೋಪಿಗಳನ್ನು 7 ದಿನಗಳ ಕಾಲ ವಶಕ್ಕೆ ನೀಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು, ಮಾರ್ಚ್ 06; ಲೋಕಾಯುಕ್ತ ಪೊಲೀಸರು ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ವಶಕ್ಕೆ ನೀಡುವಂತೆ ಕೋರ್ಟ್‌ ಮೊರೆ ಹೋಗಿದ್ದಾರೆ. ಕಳೆದ ಗುರುವಾರ 40 ಲಕ್ಷ ರೂ. ಲಂಚ ಪಡೆಯುವಾಗ ಪ್ರಶಾಂತ್ ಮಾಡಾಳ್ ಬಂಧಿಸಲಾಗಿತ್ತು. ಬಳಿಕ ಅವರ ನಿವಾಸದ ಮೇಲೆ ದಾಳಿ ಮಾಡಿದಾಗ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ದಾಖಲೆ ಇಲ್ಲದ 6 ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದರು. ಪ್ರಶಾಂತ್ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ.

ಸದ್ಯ ಪ್ರಶಾಂತ್ ಮಾಡಾಳ್ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೋಮವಾರ ಲೋಕಾಯುಕ್ತ ಪೊಲೀಸರು ಪ್ರಶಾಂತ್ ಮಾಡಾಳ್ ಮತ್ತು ಇತರ ಆರೋಪಿಗಳನ್ನು 7 ದಿನಗಳ ಕಾಲ ವಶಕ್ಕೆ ನೀಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್‌ ಮಾರ್ಚ್ 7ರ ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ. ಪ್ರಶಾಂತ್ ಮಾಡಾಳ್ ಪರ ವಕೀಲರು ಜಾಮೀನು ಅರ್ಜಿ ಸಹ ಸಲ್ಲಿಕೆ ಮಾಡಿದ್ದಾರೆ.

Lokayukta Police Moved Court Seeks Prashanth Maadal Into Custody

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್‌ಗೆ ಪ್ರಶಾಂತ್ ಮಾಡಾಳ್ 80 ಲಕ್ಷ ರೂ. ಲಂಚ ಕೇಳಿದ್ದರು. ಗುರುವಾರ ಸಂಜೆ 40 ಲಕ್ಷ ರೂ. ಲಂಚ ಸ್ವೀಕಾರ ಮಾಡುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಪೊಲೀಸರು ಹಣ ನೀಡಲು ಬಂದಿದ್ದ ನಿಕಲೋಸ್, ಗಂಗಾಧರ್, ಸಿದ್ದೇಶ್, ಅಕೌಟೆಂಟ್ ಸುರೇಂದ್ರರನ್ನು ಸಹ ಪ್ರಶಾಂತ್ ಮಾಡಾಳ್ ಜೊತೆಗೆ ಬಂಧಿಸಿದ್ದರು.

ಶುಕ್ರವಾರ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಆಗ ಲೋಕಾಯುಕ್ತ ವಿಶೇಷ ನ್ಯಾಯಾಲಯ ಎಲ್ಲಾ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈಗ ಲೋಕಾಯುಕ್ತ ತನಿಖಾಧಿಕಾರಿಗಳು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹ ಮಾಡಿದ್ದಾರೆ. ಇದರ ಆಧಾರದ ಮೇಲೆ ಆರೋಪಿಗಳ ವಿಚಾರಣೆ ನಡೆಸಬೇಕಿದೆ. ಆದ್ದರಿಂದ ಎಲ್ಲಾ ಆರೋಪಿಗಳನ್ನು 7 ದಿನ ವಶಕ್ಕೆ ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಖಾಸಗಿ ಕಚೇರಿಯಲ್ಲಿ 40 ಲಕ್ಷ ಹಣದೊಂದಿಗೆ ಪ್ರಶಾಂತ್ ಮಾಡಾಳ್ ಸಿಕ್ಕಿಬಿದಿದ್ದರು. ಬಳಿಕ ಲೋಕಾಯುಕ್ತ ಪೊಲೀಸರು ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆ ಮೇಲೆ ದಾಳಿ ಮಾಡಿದ್ದರು. ಈ ಸಂದರ್ಭದಲ್ಲಿ ದಾಖಲೆ ಇಲ್ಲದ 6 ಕೋಟಿ ರೂ. ಹಣವನ್ನು ವಶಕ್ಕೆ ಪಡೆಯಲಾಗಿತ್ತು. ಸುಮಾರು 19 ಗಂಟೆ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 8 ಕೋಟಿ ಹಣ ಪತ್ತೆಯಾಗಿತ್ತು.

police

ಈ ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿ ಎಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಆದರೆ, ಲಂಚ ಪ್ರಕರಣ ಬೆಳಕಿಗೆ ಬಂದ ಬಳಿಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ. ಸೋಮವಾರ ವಿಚಾರಣೆಗೆ ಬನ್ನಿ ಎಂದು ಪೊಲೀಸರು ನೋಟಿಸ್ ನೀಡಿದರೂ ಅವರು ಹಾಜರಾಗಿಲ್ಲ. ಅವರ ಪರ ವಕೀಲರು ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ಮಾರ್ಚ್ 7ರಂದು ನಡೆಯಲಿದೆ.

ಲಂಚ ಪ್ರಕರಣ ಬೆಳಕಿಗೆ ಬಂದ ಕೂಡಲೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ. ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ರಾಜ್ಯ ಲೆಕ್ಕಪತ್ರ ಇಲಾಖೆ ಜಂಟಿ ನಿಯಂತ್ರಕರು, ಬೆಂಗಳೂರು ಜಲಮಂಡಳಿ ಮುಖ್ಯ ಲೆಕ್ಕಾಧಿಕಾರಿಯೂ ಆಗಿದ್ದಾರೆ. ಆದರೆ ಅವರು ಅಧಿಕಾರ ದುರುಪಯೋಗ ಮಾಡಿಕೊಂಡು ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ರಾಸಾಯನಿಕ ಸರಬರಾಜು ಮಾಡಲು ನೀಡಿದ್ದ ಟೆಂಡರ್ ವರ್ಕ್ ಆರ್ಡರ್ ನೀಡಲು 80 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಲೋಕಾಯುಕ್ತಕ್ಕೆ ದೂರು ದಾಖಲು ಮಾಡಲಾಗಿತ್ತು. 40 ಲಕ್ಷ ರೂ. ಲಂಚ ಸ್ವೀಕಾರ ಮಾಡುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+