ಭ್ರಷ್ಟಾಚಾರ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಜ್ಜು!
ಬೆಂಗಳೂರು, ಆ. 23: ಭ್ರಷ್ಟರ ವಿರುದ್ಧ ಸಮರ ಸಾರಲು ಕರ್ನಾಟಕ ಲೋಕಾಯುಕ್ತ ಸಕಲ ಸಿದ್ಧತೆ ಮಾಡಿಕೊಂಡಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ನೀಡುವ ದೂರುಗಳನ್ನು ಸ್ವೀಕರಿಸಿ ಕ್ರಮ ಜರುಗಿಸಲು ತಯಾರಿ ನಡೆಸಿದೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಹಾಲಿ ಲೋಕಾಯುಕ್ತ ನ್ಯಾ| ಬಿ.ಎಸ್. ಪಾಟೀಲ್ ಅವರ ನಿರ್ದೇಶನದ ಮೇರೆಗೆ ಲೋಕಾಯುಕ್ತ ಸಂಸ್ಥೆಯ ಪೊಲೀಸ್ ಘಟಕ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಎಫ್ಐಆರ್ ದಾಖಲಿಸಿ ಕ್ರಮ ಜರುಗಿಸಲು ಪೂರ್ವ ತಯಾರಿ ನಡೆಸಿದೆ.
ಹೈಕೋರ್ಟ್ ತೀರ್ಪಿನ ಬಗ್ಗೆ ಲೋಕಾಯುಕ್ತರು ಕಾನೂನು ಪಂಡಿತರ ಜತೆ ನಿರಂತರ ಸಮಾಲೋಚನೆ ನಡೆಸಿದ್ದಾರೆ. ಆ ಬಳಿಕ ಲೋಕಾಯುಕ್ತ ಸಂಸ್ಥೆಯ ನ್ಯಾಯಿಕ ವಿಭಾಗ, ಪೊಲೀಸ್ ಘಟಕದ ಜತೆ ನಿರಂತರ ಸಭೆ ನಡೆಸಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಕೇಸು ದಾಖಲಿಸಲು ಲೋಕಾಯುಕ್ತರು ಪೊಲೀಸ್ ಘಟಕಕ್ಕೆ ಸೂಚನೆ ನೀಡಿದ್ದಾರೆ. ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ ಸಂಬಂಧ ಸಾರ್ವಜನಿಕ ನೌಕರ ಅಥವಾ ಜನ ಪ್ರತಿನಿಧಿಗಳ ವಿರುದ್ಧ ದೂರು ಬಂದರೆ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಲು ಪೊಲೀಸ್ ವಿಭಾಗದ ಅಧಿಕಾರಿಗಳಿಗೆ ಲೋಕಾಯುಕ್ತರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕೃತ ಕಾರ್ಯಾರಂಭ ಶುರು ಮಾಡಿದಂತಾಗಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1998 ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುವ ಅಧಿಕಾರ ಲೋಕಾಯುಕ್ತ ಘಟಕದ ಪೊಲೀಸ್ ಇನ್‌ಸ್ಪೆಕ್ಟರ್ ಗಳಿಗೆ 1991 ರಲ್ಲಿಯೇ ನೀಡಲಾಗಿತ್ತು. ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಗಳ ಕಚೇರಿಯನ್ನು ಲೋಕಾಯುಕ್ತ ಪೊಲೀಸ್ ಠಾಣೆ ಎಂದು ಘೋಷಿಸಿ ಅಧಿಸೂಚನೆ ಸಹ ಹೊರಡಿಸಲಾಗಿತ್ತು. ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಬಳಕೆ ಸಂಬಂಧ ನಿಡಿದ್ದ ಅಧಿಕಾರ ವಾಪಸು ಪಡೆದು ಸಿದ್ದರಾಮಯ್ಯ ಸರ್ಕಾರ 2016 ರಲ್ಲಿ ಎಸಿಬಿ ರಚನೆ ಮಾಡಿತ್ತು. ಸರ್ಕಾರದ ಅಧಿಸೂಚನೆ ರದ್ದು ಪಡಿಸಿ ಹೈಕೋರ್ಟ್ ತೀರ್ಪು ನೀಡಿರುವ ಕಾರಣ ಲೋಕಾಯುಕ್ತ ಪೊಲೀಸ್ ಘಟಕಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಬಳಕೆಗೆ ಬೇಕಿದ್ದ ಎಲ್ಲಾ ಅಧಿಕಾರ ಸಿಕ್ಕಿದಂತಾಗಿದೆ. ಹೀಗಾಗಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಕೇಸು ದಾಖಲಿಸಲು ಯಾವುದೇ ಕಾನೂನು ತೊಡಕು ಇಲ್ಲ. ಲಂಚ ಸ್ವೀಕಾರ, ಅಕ್ರಮ ಆಸ್ತಿ ಗಳಿಕೆ, ಅಧಿಕಾರ ದುರ್ಬಳಕೆಗೆ ಸಂಬಂಧಪಟ್ಟಂತೆ ಬರುವ ದೂರುಗಳ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಕ್ರಮ ಜರುಗಿಸಲು ಲೋಕಾಯುಕ್ತ ಪೊಲೀಸ್ ಘಟಕಕ್ಕೆ ಅಧಿಕಾರವಿದ್ದು, ಕ್ರಮ ಜರುಗಿಸಲು ಲೋಕಾಯುಕ್ತರೇ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ವಾರದಲ್ಲಿ ಎಸಿಬಿ ಪ್ರಕರಣಗಳ ಹಸ್ತಾಂತರ: ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಎಸಿಬಿ ಯಲ್ಲಿ ಈವರೆಗೂ ದಾಖಲಾಗಿರುವ 2 ಸಾವಿರಕ್ಕೂ ಅಧಿಕ ಪ್ರಕರಣ ಲೋಕಾಯುಕ್ತಕ್ಕೆ ಹಸ್ತಾಂತರಿಸುವ ಬೆಳವಣಿಗೆ ನಡೆದಿದೆ. ಲಂಚ ಸ್ವೀಕಾರ, ಅಕ್ರಮ ಆಸ್ತಿ ಗಳಿಕೆ, ಅಧಿಕಾರ ದುರ್ಬಳಕೆ ಸಂಬಂಧ ಸರ್ಕಾರಿ ನೌಕರರ ವಿರುದ್ಧ ದಾಖಲಾಗಿದ್ದ ಅಷ್ಟೂ ಪ್ರಕರಣಗಳ ತನಿಖೆ ಸ್ಥಗಿತಗೊಳಿಸರುವ ಎಸಿಬಿ ಪ್ರಕರಣಗಳನ್ನು ಹಸ್ತಾಂತರಿಸಲು ಸಿದ್ಧತೆ ಮಾಡಿಕೊಂಡಿದೆ. ತನಿಖಾ ಹಂತದಲ್ಲಿರುವ ಪ್ರಕರಣಗಳ ವಿವರ, ಸಂಕ್ಷಿಪ್ತ ವರದಿ, ದಾಖಲೆಗಳನ್ನು ಕೇಸುವಾರು ಸಂಗ್ರಹಿಸಡಾಗುತ್ತಿದೆ. ವಿಚಾರಣೆ ಹಂತದಲ್ಲಿರುವ ದೂರುಗಳಿಗೆ ಸಂಬಂಧಿಸಿದಂತೆ ದಾಖೆಲಗಳನ್ನು ಸಹ ಸಿದ್ಧಪಡಿಸಲಾಗುತ್ತಿದೆ.

ಎಸಿಬಿಗೆ ಖಡಕ್ ಪೊಲೀಸ್ ಟೀಮ್ ಅಗತ್ಯ:
ಎಸಿಬಿ ರಚನೆಯಾದ ಬಳಿಕ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಪೊಲೀಸ್ ಘಟಕವಿದ್ದರೂ ಕೇವಲ ದೂರುಗಳ ವಿಚಾರಣೆ ನಡೆಸಿ ವರದಿ ನೀಡಲು ಸೀಮಿತವಾಗಿತ್ತು. ಹೀಗಾಗಿ ಸಿಕ್ಕ ಸಿಕ್ಕ ಪೊಲೀಸ್ ಅಧಿಕಾರಿಗಳನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾವಣೆ ಮಾಡಲಾಗಿತ್ತು. ಭ್ರಷ್ಟಾಚಾರ ಅರೋಪ ಇರುವ ಪೊಲೀಸ್ ಅಧಿಕಾರಿಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದಾರೆ. ಇದೀಗ ಲೋಕಾಯುಕ್ತ ಪೊಲೀಸ್ ಘಟಕ ಸಮರ್ಥವಾಗಿ ಕೆಲಸ ಮಾಡಲು ಖಡಕ್ ಪೊಲೀಸ್ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಅನಿವಾರ್ಯತೆ ಲೋಕಾಯುಕ್ತಕ್ಕೆ ಎದುರಾಗಿದೆ. ಈ ನಿಟ್ಟಿನಲ್ಲಿ ಲೋಕಾಯುಕ್ತರು ಕಾರ್ಯ ಪ್ರವೃತ್ತರಾಗಬೇಕಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಖಡಕ್ ಪೊಲೀಸ್ ಅಧಿಕಾರಿಗಳನ್ನು ವಾಪಸು ಕರಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.
-
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications