ಲೋಕಾಯುಕ್ತ ದಾಳಿ: ತಪ್ಪು ಮುಚ್ಚಿಹಾಕುವುದು ಕಾಂಗ್ರೆಸ್‌ನ ನೈತಿಕತೆ: CM

ಕರ್ನಾಟಕ ಲೋಕಾಯುಕ್ತಕ್ಕೆ ಮುಕ್ತ ಅಧಿಕಾರ ನೀಡಿ ಯಾರೇ ತಪ್ಪು ಮಾಡಿದರೂ ಕೂಡ ನಾವು ಕ್ರಮ ತೆಗೆದುಕೊಳ್ಳಲು ಸಿದ್ಧ ಎನ್ನುವುದು ಬಿಜೆಪಿ ನೈತಿಕತೆ ಎಂದು ತಿಳಿಸಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

ಚಿಕ್ಕಮಗಳೂರು, ಮಾರ್ಚ್ 05: ಕರ್ನಾಟಕ ರಾಜ್ಯ ಲೋಕಾಯುಕ್ತಕ್ಕೆ ಮುಕ್ತ ಅಧಿಕಾರ ನೀಡಿ ಯಾರೇ ತಪ್ಪು ಮಾಡಿದರೂ ಕೂಡ ನಾವು ಕ್ರಮ ತೆಗೆದುಕೊಳ್ಳಲು ಸಿದ್ದ ಎನ್ನುವುದು ಬಿಜೆಪಿ ನೈತಿಕತೆ. ತಪ್ಪುಗಳನ್ನು ಮುಚ್ಚಿಡಿವುದು ಕಾಂಗ್ರೆಸ್ ಪಕ್ಷದ ನೈತಿಕತೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಕಾರ್ಯಕ್ರಮವೊಂದರ ಬಳಿಕ ಸುದ್ದಿಗಾರರಿಗೆ ಪ್ರಕ್ರಿಯಿಸಿದರು. ಲೋಕಾಯುಕ್ತ ದಾಳಿ ಬಗ್ಗೆ ಕಾಂಗ್ರೆಸ್‌ ಪಕ್ಷದ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ರಾಜೀನಾಮೆ ಕೇಳಿತ್ತಾರೆ. ಹೀಗೆಂದು ಕೇಳಿದ ಪ್ರಶ್ನೆಗೆ ಬೊಮ್ಮಾಯಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಚಿವರ ಕಚೇರಿಯಲ್ಲಿ 25 ಲಕ್ಷ ರೂ. ಲಂಚ ಪಡೆಯುತ್ತಿರುವಾಗ ಸಿಕ್ಕಿ ಬಿದ್ದಿದ್ದರು. ಅಂದು ಅವರು ರಾಜಿನಾಮೆ ನೀಡಲಿಲ್ಲ. ಲೋಕಾಯುಕ್ತ ಇದ್ದಿದ್ದರೆ ಅವರ ಮೇಲೆ ಪ್ರಕರಣ ದಾಖಲಾಗುತ್ತಿತ್ತು. ಅವರು ಭ್ರಷ್ಟಾಚಾರ ಮುಚ್ಚಿಹಾಕಲು ಪ್ರಯತ್ನ ಮಾಡಿದರು ಎಂದು ಹೇಳಿದರು.

Lokayukta Raid: Concealing mistakes is Congress morality, Says CM Bommai

ರಾಜ್ಯದಲ್ಲಿ ಎಲ್ಲೆಡೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಯಾರು, ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ, ತಪ್ಪು ಗಳನ್ನು ಮುಚ್ಚಿ ಹಾಕಿಕೊಳ್ಳಲು ಮತ್ತೆ ಅಧಿಕಾರಕ್ಕೆ ಬರಬೇಕೆಂದು ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಕಾಂಗ್ರೆಸ್ ಮಾಡಿದ ಕರ್ಮಕಾಂಡ ಯಾರೂ ಮರೆತಿಲ್ಲ. ಕೊಲೆ, ಸುಲಿಗೆ, ಭ್ರಷ್ಟಾಚಾರ, ಲೂಟಿ ಮಾಡಿದ್ದಾರೆ. ಅವರ ಕಾಲದ 59 ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವಹಿಸಿದ್ದು ಸತ್ಯ ಹೊರಗೆ ಬರಲಿದೆ ಎಂದು ಅವರು ಗುಡಗಿದರು.

ಸ್ವಾತಂತ್ರವಾಗಿ, ನಿರ್ಭಿಡೆಯಿಂದ ತನಿಖೆ ಆಗಲಿದೆ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ರಾಜೀನಾಮೆ ಪಡೆಯುವ ಬಗ್ಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಪಕ್ಷದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿಲ್ಲ. ಲೋಕಾಯುಕ್ತಕ್ಕೆ ಸರ್ವ ಸ್ವಾತಂತ್ರ್ಯ ನೀಡಿದ್ದು ನಿರ್ಭಿಡೆ, ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದ್ದಾರೆ. ಅದು ಮುಂದುವರಿಯಲಿದೆ ಎಂದರು.

Lokayukta Raid: Concealing mistakes is Congress morality, Says CM Bommai

ರಾಯಗಡದಲ್ಲಿ ಶಿವಾಜಿ ಪ್ರತಿಮೆ ಬಗ್ಗೆ ಕಾಂಗ್ರೆಸ್ ನವರು ಉದ್ಘಾಟಿಸಿರುವುದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ ಇದು ನಿಜಕ್ಕೂ ಹಾಸ್ಯಾಸ್ಪದ. ಸರ್ಕಾರ ನಿರ್ಮಿಸಿರುವ ಪ್ರತಿಮೆ ಅದಾಗಿದೆ. ಅಧಿಕೃತ ಉದ್ಘಾಟನೆಯಾದ ಮೇಲೆ ಭೇಟಿ ಕೊಡಬಹುದು. ಆದರೆ ಉದ್ಘಾಟನೆಯಾದ ನಂತರ ಪುನಃ ಉದ್ಘಾಟಿಸಿಸುವುದನ್ನು ನಾವು ಕೇಳಿಯೇ ಇಲ್ಲ. ಅಧಿಕಾರದ ಹೊರಗಿದ್ದರೂ, ಅಧಿಕಾರದ ಲಾಲಸೆ ಹಾಗೂ ಹತಾಶ ಭಾವ ಎಷ್ಟಿದೆ ಎಂದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಕಾಂಗ್ರೆಸ್‌ ನಾಯಕ ಕಾಲೆಳೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+