Lokayukta Raid: ಭ್ರಷ್ಟರ ಮನೆ ಬಾಗಿಲು ತಟ್ಟಿದ ಲೋಕಾಯುಕ್ತ ಅಧಿಕಾರಿಗಳು: ರಾಜ್ಯದ ಹಲವೆಡೆ ದಾಳಿ
ಬೆಂಗಳೂರು ಮಾರ್ಚ್ 6: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಮನೆ ಬಾಗಿಲು ತಟ್ಟಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು, ಕೋಲಾರ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ಕಲಬುರಗಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹೌದು... ಇಂದು ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ತಂಡ ಭ್ರಷ್ಟರಿಗೆ ಶಾಕ್ ಕೊಟ್ಟಿದೆ. ಅಧಿಕಾರಿಗಳು ಬೆಂಗಳೂರಿನ ವಿವಿದೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬಿಬಿಎಂಪಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಹೆಚ್.ಪಿ ಕಲ್ಲೇಶಪ್ಪ ಹಾಗೂ ಬೆಂಗಳೂರಿನ ಜಿಆರ್ಪಿಎ ಚೀಫ್ ಎಂಜಿನಿಯರ್ ನಂಜುಂಡಪ್ಪ ಅವರ ಮನೆಗಳ ಮೇಲೆ ಇಂದು ಲೋಕಾಯುಕ್ತರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಭಾರೀ ಮೌಲ್ಯದ ಚಿನ್ನಾಭರಣ, ಕೋಟ್ಯಾಂತರ ರೂಪಾಯಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇನ್ನೂ ಲೋಕೋಪಯೋಗಿ ಚೀಫ್ ಇಂಜಿನಿಯರ್ ಮನೆ ಮೇಲೆ ದಾಳಿ ಮಾಡಲಾಗಿದ್ದು, ಕಲಬುರಗಿಯಲ್ಲಿರುವ ಅವರ ಮನೆ ಸೇರಿದಂತೆ ಅವರಿಗೆ ಸಂಬಂಧಿಸಿದ ವಿವಿದೆಡೆ ದಾಳಿ ಮಾಡಲಾಗಿದೆ. ಜೊತೆಗೆ ಲೋಕೋಪಯೋಗಿ ಇಲಾಖೆ ಎಫ್ಡಿಸಿ ಮಲ್ಲೇಶ್ ಅವರ ಬಾಗಲಕೋಟೆಯ ಬೀಳಗಿಯಲ್ಲಿರುವ ಮನೆ ಹಾಗೂ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಲ್ಲದೆ ತುಮಕೂರಿನ ಸರ್ಕಾರಿ ಆಸ್ಪತ್ರೆ ವೈದ್ಯ ಡಾ. ಜಗದೀಶ್ ಮನೆ ಮೇಲೂ ದಾಳಿ ಮಾಡಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ದಾವಣಗೆರೆಯ ಫುಡ್ ಸೇಪ್ಠಿ ಮತ್ತು ಕ್ವಾಲಿಟಿ ಯುನಿಟ್ ಹೆಲ್ತ್ ಡಿಪಾರ್ಟ್ಮೆಂಟ್ನ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗುತ್ತಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications