ಮೈಸೂರು, ಬೀದರ್, ಕಲಬುರಗಿಯಲ್ಲಿ ಲೋಕಾ ದಾಳಿ
ಬೆಂಗಳೂರು, ಫೆ. 26 : ಗುರುವಾರ ಬೆಳಗ್ಗೆ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ.
ಮೈಸೂರು, ಬೀದರ್ ಮತ್ತು ಕಲಬುರಗಿಯ ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. [ಭ್ರಷ್ಟರಿಗೆ ಶಿಕ್ಷೆ ನೀಡುವ ಅಧಿಕಾರ ಲೋಕಾಯುಕ್ತರಿಗೆ ಬೇಕು]

ಮೈಸೂರು : ಮೈಸೂರು ನಗರದಲ್ಲಿ ಮೈಸೂರು ಮಹಾನಗರ ಪಾಲಿಕೆ ಸೂಪರಿಟೆಂಡೆಂಟ್ ಪಾರ್ತತಮ್ಮ ಅವರ ಎರಡು ನಿವಾಸಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಯುತ್ತಿದೆ. [ಸಚಿವ ದೇಶಪಾಂಡೆ ವಿರುದ್ಧ ಲೋಕಾಯುಕ್ತ ತನಿಖೆ]
ಬೀದರ್ : ಬೀದರ್ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಯೋಜನಾ ನಿರ್ದೇಶಕರಾದ ಟಿ.ಬಿ.ಲಿಂಗಣ್ಣ ಅವರ ಮನೆ, ಕಚೇರಿ ಮತ್ತು ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಲಾಗಿದೆ.
ಕಲಬುರಗಿ : ಕಲಬುರಗಿ ನಗರದ ಗುಂಪಾ ಬಡಾವಣೆಯಲ್ಲಿರುವ ಅರಣ್ಯಾಧಿಕಾರಿ ಮೊಹಮದ್ ಹಾಜಿ ಅವರ ನಿವಾಸ, ಕಚೇರಿ ಮತ್ತು ಅವರ ಆಪ್ತರ ಮನೆಯ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.












Click it and Unblock the Notifications