40% ಭ್ರಷ್ಟಾಚಾರದ ಸಾಕ್ಷಿ ಸಿಕ್ಕರೂ ತಾಕತ್ತು,ಧಮ್ಮು ಯಾವ ಬಿಲದಲ್ಲಿ ಅಡಗಿ ಕುಳಿತಿವೆ? ಬಿ.ಕೆ ಹರಿಪ್ರಸಾದ್ ಪ್ರಶ್ನೆ

ಕರ್ನಾಟಕದಲ್ಲಿ ಬಿಜೆಪಿಯ ಭ್ರಷ್ಟಾಚಾರವು ಲುಂಗಿ ಡಾನ್ಸ್ ಮಾಡ್ತಿದ್ದರೂ ಕೇಂದ್ರ ನಾಯಕರು ತುಟಿ ಬಿಚ್ಚುವುದಿಲ್ಲವೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಬೆಂಗಳೂರು,ಮಾರ್ಚ್ 4: ಬಿಜೆಪಿಗೆ ಸುಳ್ಳು ಮನೆ ದೇವರಾದರೆ, ಭ್ರಷ್ಟಾಚಾರ ಪಕ್ಷದ ಅಧಿಕೃತ ಕಾರ್ಯಕ್ರಮ. ದಾಖಲೆ ಸಮೇತ ಕಂತು ಕಂತಿನ ನೋಟುಗಳು ಮಂಚದ ಮೇಲೆ ಸಿಕ್ಕ ಮೇಲೂ ಬಿಜೆಪಿ ಶಾಸಕರ ಮೇಲೆ ಕ್ರಮ ಯಾಕಿಲ್ಲ ಬಸವರಾಜ ಬೊಮ್ಮಾಯಿ ಅವರೇ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿ ಪ್ರಸಾದ್ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾ ಖಾನೇ ದೂಂಗಾವಾಲ ಪ್ರಧಾನಿ ನರೇಂದ್ರ ಮೋದಿ ಅವರೇ ,ಶಾಸಕರ ಕಮಿಷನ್ ವ್ಯವಹಾರದಲ್ಲಿ ನಿಮ್ಮಮ ಮೌನದ ಪಾಲೆಷ್ಟು? 40% ಭ್ರಷ್ಟಾಚಾರದ ಸಾಕ್ಷಿ ಸಿಕ್ಕರೂ ತಾಕತ್ತು,ಧಮ್ಮು,ಹಮ್ಮು,ಬಿಮ್ಮುಗಳು ಯಾವ ಬಿಲದಲ್ಲಿ ಅಡಗಿ ಕುಳಿತಿವೆ? ಎಂದು ವಾಗ್ದಾಳಿ ನಡೆಸಿದ್ದಾರೆ.

Lokayukta Raid On Prashant Madal House BK Hariprasad Reaction

ರಾಜ್ಯವನ್ನ ಗುಡಿಸಿ ಗುಂಡಾಂತರ ಮಾಡಿರುವ ಭ್ರಷ್ಟ ಬಿಜೆಪಿ ಸರ್ಕಾರ,ದೇಶದ ಎದುರು ರಾಜ್ಯದ ಮಾನ ಹರಾಜಿಗಿಟ್ಟಿದೆ. ವಾರಕ್ಕೆ ಎರಡು ಬಾರಿ ಚುನಾವಣಾ ಪ್ರವಾಸಿಗರಾದ ಮೋದಿ ಮತ್ತು ಶಾ ಜೋಡಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ವಸೂಲಾಗಿರುವ ಪೇ ಸಿಎಂ ಹಣದ ಪಾಲಿಗಾಗಿಯೇ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ರಾಜ್ಯದ ತೆರಿಗೆಯ ಬೊಕ್ಕಸವನ್ನು ಲೂಟಿ ಮಾಡಿ, ದೆಹಲಿ ಬಿಜೆಪಿಯ ಖಜಾನೆ ಭರ್ತಿ ಮಾಡಿದ ಪಾಪದ ಕೊಡ ತುಂಬಿದೆ. ನಾಚಿಕೆ,ಮಾನ,ಮಾರ್ಯಾದೆ ಸ್ವಾಭಿಮಾನ ಎನ್ನುವ ಪದಗಳಿಗೆ ಕಿಂಚಿತ್ತಾದರೂ ಗೌರವ ಇದ್ದರೆ, ರಾಜ್ಯದ ಜನರಿಗೆ ಕ್ಷಮೆ ಕೇಳಿ,ಪಾಪದ ಪ್ರಾಯಶ್ಚಿತ್ತಕ್ಕೆ ರಾಜೀನಾಮೆ ಕೊಟ್ಟು ತೊಲಗಿ. ಘನತೆಯುತ ರಾಜ್ಯಕ್ಕೆ ಕಮಿಷನ್ ರಾಜ್ಯದ ಮಸಿ ಬಳಿದ ಬಿಜೆಪಿಗೆ ಜನರು ತಕ್ಕ ಪಾಠ ಕಲಿಸುವುದು ನಿಶ್ಚಿತವಾಗಿದೆ ಎಂದು ಕಿಡಿಕಾರಿದ್ದಾರೆ.

Lokayukta Raid On Prashant Madal House BK Hariprasad Reaction

ಇತ್ತ ಕಾಂಗ್ರೆಸ್ ಸಹ ಟ್ವೀಟ್‌ ಮೂಲಕ ಸರ್ಕಾರ ವಿರುದ್ದ ಕಿಡಿಕಾರಿದೆ. ಅಪ್ಪನ ಪರವಾಗಿ ಮಗ ಲಂಚ ಪಡೆದಿದ್ದಕ್ಕೆ ಅಪ್ಪ ರಾಜೀನಾಮೆ ಕೊಟ್ಟಿದ್ದಾರೆ, ಹೀಗಿರುವಾಗ ಶಾಸಕರ ಭ್ರಷ್ಟಾಚಾರಕ್ಕೆ ಸಿಎಂ ರಾಜೀನಾಮೆ ಕೊಡಬೇಕಲ್ಲವೇ? ಇನ್ನೂ ಬವಸರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದರೆ "ಜಗತ್ತಿನ ಅತಿ ಬಂಡತನದ ಸಿಎಂ" ಎನಿಸಿಕೊಳ್ಳುತ್ತೀರಿ. ಈ ಲಂಚ ಮಂಚದ ಸರ್ಕಾರ ಮುಂದುವರೆಯುವುದರಲ್ಲಿ ಯಾವ ಅರ್ಥವೂ ಇಲ್ಲ ಎಂದು ಕಾಂಗ್ರೆಸ್ ಕಿಡಿಕಾರಿದೆ.

ರಾಜ್ಯದಲ್ಲಿನ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ, ನಡೆಯಲು ಬಿಟ್ಟಿರುವುದಕ್ಕೆ, ಭ್ರಷ್ಟಾಚಾರವನ್ನು ಸಮರ್ಥಿಸಿದ್ದಕ್ಕೆ, ಈಗ ಭ್ರಷ್ಟಾಚಾರ ಸಾಬೀತಾಗಿರುವುದಕ್ಕೆ ಬಸವರಾಜ ಬೊಮ್ಮಾಯಿ ಅವರು ನೈತಿಕ ಹೊಣೆ ಹೊರುವುದಿಲ್ಲವೇ? ಹೊತ್ತು ರಾಜೀನಾಮೆ ನೀಡುವುದಿಲ್ಲವೇ? ಅಥವಾ ಮುಖ್ಯಮಂತ್ರಿಗೆ ನೈತಿಕತೆಯೇ ಇಲ್ಲವೇ? ಎಂದು ಪ್ರಶ್ನಿಸಿದೆ.

ಕರ್ನಾಟಕದಲ್ಲಿ ಬಿಜೆಪಿಯ ಭ್ರಷ್ಟಾಚಾರವು ಲುಂಗಿ ಡಾನ್ಸ್ ಮಾಡ್ತಿದ್ದರೂ ಕೇಂದ್ರ ನಾಯಕರು ತುಟಿ ಬಿಚ್ಚುವುದಿಲ್ಲವೇಕೆ? ಪ್ರಧಾನಿಗೆ ಪತ್ರಗಳ ಮೇಲೆ ಪತ್ರ ಬರೆದರೂ ಸಣ್ಣ ಸ್ಪಂದನೆಯೂ ಇಲ್ಲವೇಕೆ? ಬಿಜೆಪಿ ಹೈಕಮಾಂಡಿಗೆ ಕರ್ನಾಟಕ ಸಮೃದ್ಧವಾದ ಎಟಿಎಂ ಆಗಿದೆಯೇ? ಅಮಿತ್ ಶಾ ಬಂದಿರುವುದು ಎಲಕ್ಷನ್ನಿಗಾ? 40% ಕಲೆಕ್ಷನ್ನಿಗಾ? ಎಂದು ಕಾಂಗ್ರೆಸ್ ಪ್ರಶ್ನೆ ಹಾಕಿದೆ.

ಲೋಕಾಯುಕ್ತ ಸ್ವತಂತ್ರ ಸಂಸ್ಥೆ ಈ ಪ್ರಕರಣವನ್ನು ಲೋಕಾಯುಕ್ತ ನೋಡಿಕೊಳ್ಳುತ್ತದೆ ಎಂದಿರುವ ಬಸವರಾಜ ಬೊಮ್ಮಾಯಿ ಅವರೇ, ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ನಿಮ್ಮ ಕೊಡುಗೆ, ಬದ್ಧತೆ ಏನು? ಈ ಹಿಂದೆಯೇ ಕಮಿಷನ್ ವಿಚಾರವನ್ನು ತನಿಖೆಗೆ ವಹಿಸದೆ ಬಂಡ ಸಮರ್ಥನೆಗೆ ಇಳಿದಿದ್ದೇಕೆ? ಆರೋಪ ಮಾಡಿದವರ ಮೇಲೆಯೇ ಮುಗಿಬಿದ್ದಿದೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+