ಬೆಂಗಳೂರು, ಗ್ರಾಮಾಂತರ ಜಿಲ್ಲೆಗಳ ಸಬ್‌ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು, ನ.3: ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸಹಿತ ರಾಜ್ಯದ ವಿವಿಧೆಡೆ ಉಪನೋಂದಣಾಧಿಕಾರಿಗಳ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಬೆಂಗಳೂರಿನ 14 ಸಬ್ ರಿಜಿಸ್ಟ್ರಾರ್‌ಗಳ ಕಚೇರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 5 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ರಾತ್ರಿವರೆಗೂ ಕೆಲವೆಡೆ ದಾಳಿ ಮುಂದುವರಿದಿತ್ತು.
ಹಿರಿಯ ಉಪನೋಂದಣಾಧಿಕಾರಿಗಳು ಮತ್ತು ವಿವಾಹ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ನಡೆಯುತ್ತಿರುವ ಅಕ್ರಮಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಬಂದಂತಹ ದೂರುಗಳನ್ನು ಆಧರಿಸಿ ಈ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಕಚೇರಿಯ ಡಿವೈಎಸ್‌ಪಿ, ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

ದೇವನಹಳ್ಳಿ, ಬನ್ನೇರುಘಟ್ಟ, ಕಾಚರಕನಹಳ್ಳಿ, ಯಲಹಂಕ, ಬಾಣಸವಾಡಿ, ಮಹದೇವಪುರ, ವರ್ತೂರು, ದೊಮ್ಮಲೂರು, ಬೊಮ್ಮನಹಳ್ಳಿ, ಬೇಗೂರು, ಜೆ.ಪಿ. ನಗರ, ಬನಶಂಕರಿ, ನಾಗರಭಾವಿ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಲೋಕಾಯುಕ್ತರ ದಾಳಿ ವೇಳೆ ಕೆಲವು ಕಚೇರಿಗಳಲ್ಲಿ ಹಣ ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಕೆಲವು ಸಬ್‌ರಿಜಿಸ್ಟ್ರಾರ್‌ಗಳು ಮತ್ತು ಮಧ್ಯವರ್ತಿಗಳ ಮೇಲೆ ಎಫ್‌ಐಆರ್ ಸಹ ದಾಖಲಾಗಿದೆ.












Click it and Unblock the Notifications