Get Updates
Get notified of breaking news, exclusive insights, and must-see stories!

Lokayukta Raid: ಕರ್ನಾಟಕದ 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ- ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಅಧಿಕಾರಿಗಳು

ಬೆಂಗಳೂರು ಜನವರಿ 8: ಇಂದು ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಒಟ್ಟು ಎಂಟು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಸಾರಿಗೆ, ಬೆಸ್ಕಾಂ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದ ಬೆನ್ನಲ್ಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಭ್ರಷ್ಟರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ಗದಗ, ಬಳ್ಳಾರಿ ಸೇರಿದಂತೆ ಒಟ್ಟು ಎಂಟು ಜಿಲ್ಲೆಗಳಲ್ಲಿ ಪರೀಶಿಲನೆ ನಡೆದಿದೆ.

ಬೆಂಗಳೂರು, ಬೆಳಗಾವಿ, ಗದಗ, ಬಳ್ಳಾರಿ, ಚಿಕ್ಕಮಗಳೂರು, ಬೀದರ್, ರಾಯಚೂರಿನಲ್ಲಿ ದಾಳಿ ಮಾಡಲಾಗಿದೆ. ಗದಗ ಬೆಟಗೇರಿ ನಗರಸಭೆಯ ಇಂಜಿನಿಯರ್‌ಗೆ ಸೇರಿದ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಖಾನಾಪುರ ತಹಶೀಲ್ದಾರ್, ಬೆಂಗಳೂರು ಟ್ರಾನ್ಸ್ ಪೋರ್ಟ್ ಡಿಪಾರ್ಟ್ಮೆಂಟ್ ಜಂಟಿ ನಿರ್ದೇಶಕರಾದ ಶೋಭಾ ಸೇರಿದಂತೆ ಎಂಟು ಜಿಲ್ಲೆಯ ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

lokayukta raids in eight places in karnataka

ಚಿಕ್ಕಮಗಳೂರು ಜಿಲ್ಲೆ ಕಡೂರಿನ ಕುಟುಂಬ ಕಲ್ಯಾಣ ಇಲಾಖೆಯ ಡಾ. ಎಸ್‌ ಎನ್ ಉಮೇಶ್, ಬೀದರ್‌ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇನ್ಸ್‌ಪೆಕ್ಟರ್ ರವೀಂದ್ರ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಹಶಿಲ್ದಾರ ಪ್ರಕಾಶ್ ಶ್ರೀಧರ್ ಗಾಯಕವಾಡ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೂ. ಇಂಜಿನಿಯರ್ ಹುಲಿರಾಜ್, ತುಮಕೂರು ಜಿಲ್ಲೆಯ ನಿವೃತ್ತ ಆರ್ ಟಿಓ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.

ಇನ್ನೂ ಬಳ್ಳಾರಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಆರ್‌ ಹೆಚ್ ಲೋಕೇಶ್ ನಿವಾಸದ ಮೇಲೆ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ರಾಮಾಂಜನೇಯ ನಗರದ ನಿವಾಸ, ಕಚೇರಿ ಹಾಗೂ ಸ್ನೇಹಿತರ ನಿವಾರದ ಮೇಲೂ ರೇಡ್ ಮಾಡಲಾಗಿದೆ. ಅಲ್ಲದೆ ಗದಗ ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್‌ಗೆ ಸೇರಿದ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇವರ ಮೇಲೆ ಅಕ್ರಮ ಆಸ್ತಿ ಗಳಿಸಿದ ಆರೋಪವಿದೆ.

ಹುಚ್ಚೇಶ್ ಬಂಡಿವಡ್ಡರ್ ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿದೆ. ಜೊತೆಗೆ ಇದೇ ಆರೋಪದಲ್ಲಿ ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಬಾ ಅವರ ಮನೆ ಮತ್ತು ಕಚೇರಿ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಎಸ್‌ಪಿ ಹನುಮಂತರಾಯ್, ಡಿವೈಎಸ್‌ಪಿ ವಿಜಯ್ ಬಿರಾದಾರ್, ಪಿಎಸ್‌ಐ ಎಸ್‌ ಎಸ್‌ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದು, ದಾಖಲೆ ಪರಿಶೀಲನೆ ಮುಂದುವರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+