Lokayukta Raids in Karnataka: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಎಲ್ಲೆಲ್ಲಿ?, ಇಲ್ಲಿದೆ ವಿವರ

ಕರ್ನಾಟಕ, ಮೇ, 31: ಬುಧವಾರ (ಮೇ 31) ಬೆಳಂಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಎನ್‌ಐಎ ದಾಳಿ ಮಾಡಿದೆ. ಹಾಗೆಯೇ ಮತ್ತೊಂದೆಡೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಿದೆ. ಹಾಗಾದರೆ ಇಂದು ಯಾವ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ ಅನ್ನುವ ವುವರವನ್ನು ಇಲ್ಲಿ ತಿಳಿಯಿರಿ.

ಬೆಂಗಳೂರು, ತುಮಕೂರು, ಮೈಸೂರು ಹಾವೇರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಟಿ.ವಿ.9 ಕನ್ನಡ ವರದಿ ಮಾಡಿದೆ. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಕುರಿತು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ ಎನ್ನಲಾಗಿದೆ.

Lokayukta raids in many districts of Karnataka state, know details

ಎಲ್ಲೆಲ್ಲಿ ಲೋಕಾಯುಕ್ತ ದಾಳಿ?

1. ಬೆಂಗಳೂರು
2. ಮೈಸೂರು
3. ಹಾವೇರಿ
4. ತುಮಕೂರು

ಇನ್ನು ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್‌ಪಿಗಳಾದ ಮಂಜುನಾಥ್ ಹಾಗೂ ಹರೀಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ವೇಳೆ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹಾಗೆಯೆ ಹಾವೇರಿ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿ ನಡೆಸಿದೆ. ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೇಟ್ಟರ್ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಅಲ್ಲದೆ ರಾಣೆಬೆನ್ನೂರು ನಗರದ ನಿವಾಸ, ಹಾವೇರಿಯ ದೇವಗರಿಯ ಡಿಸಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಸಿಲಿಕಾನ್‌ ಟಿಸಿ ಬೆಂಗಳೂರಿನ ಎರಡು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ದಾರೆ. ನಗರದ ಬಸವೇಶ್ವರನಗರದಲ್ಲಿ ಇರುವ ಬೆಸ್ಕಾಂ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿ ಆಗಿದೆ. ಇನ್ನು ಇಂಡಸ್ಟ್ರೀಸ್ ಆಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನಲ್ಲಿ ಲೋಕಾಯುಕ್ತ ದಾಳಿ

ಮೈಸೂರಿನ ನಿವೇದಿತಾ ನಗರದ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸದ ಮೇಲೆ ದಾಳಿ ಆಗಿದೆ. ತೋಟದ ಮನೆ ಸೇರಿ ಹಲವು ಕಡೆ ಒಟ್ಟು 13 ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಕಾರ್ಯಾಚರಣೆ ಮಾಡಿದೆ.

ಬೀದರ್‌ನಲ್ಲಿ ಲೋಕಾಯುಕ್ತ ದಾಳಿ

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೀದರ್‌, ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಡಿವೈಎಸ್‌ಪಿ ಓಲೆಕಾರ ನೇತೃತ್ವದಲ್ಲಿ ದಾಳಿ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+