Lokayukta Raids: ರಾಜ್ಯದ ಹಲವೆಡೆ ಭಷ್ಟಾಧಿಕಾರಿಗಳಿಗೆ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು

Lokayukta Raid: ಸಾಮಾನ್ಯವಾಗಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇರೆಗೆ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುತ್ತಾರೆ. ಹಾಗೆಯೇ ಇಂದು (ಜುಲೈ 23) ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬೆಳ್ಳಂಬೆಳಗ್ಗೆ ಭ್ರಷ್ಟಾಧಿಕಾರಿಗಳಿ ಬಿಗ್ ಶಾಕ್ ಎದುರಾಗಿದ್ದು, ಕೊಪ್ಪಳ, ಮೈಸೂರು, ಬಳ್ಳಾರಿ, ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Lokayukta Raids in Many Places of state on July 23 early morning

ಮೈಸೂರಿನಲ್ಲಿ ಪಾಲಿಕೆ ಉಪವಿಭಾಗಾಧಿಕಾರಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಮೈಸೂರಿನ ಸಿದ್ಧಾರ್ಥ್ ಬಡಾವಣೆಯಲ್ಲಿ ಇರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸಾತಗಳ್ಳಿಯ ಜೆಪಿ ನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಸ್ವಾಮಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಬೆಂಗಳೂರಿನಲ್ಲಿ ಐಎಎಸ್​ ಸೇರಿ ಮೂವರು ಅಧಿಕಾರಿ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ಆರ್.ಟಿ. ನಗರದಲ್ಲಿ ಇರುವ ಹಿರಿಯ ಐಎಎಸ್‌ ಅಧಿಕಾರಿ ವಾಸಂತಿ ಅಮರ್​ ಮನೆ ಮೇಲೆ ದಾಳಿ ನಡೆಸಲಾಗಿದೆ. ಸರ್ಕಾರಿ ಜಮೀನು ಅಕ್ರಮವಾಗಿ ಬೇರೆಯವರ ಹೆಸರಿಗೆ ವರ್ಗಾವಣೆ ಆರೋಪ ಕೇಳಿಬಂದಿದ್ದು, ವಾಸಂತಿ ಅಮರ್ ಬೆಂಗಳೂರು ನಗರ ವಿಶೇಷ ಡಿಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ ಇವರ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ 'ಲೋಕಾ' ದಾಳಿ: ಮೈಸೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿರುವ ಪಾಲಿಕೆ ಉಪ ವಿಭಾಗಧಿಕಾರಿ ವೆಂಕಟರಾಮ್​​ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೆ, ಆದಾಯಕ್ಕೂ ಮೀರಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆ ಮೈಸೂರಿನ ಸಾತಗಳ್ಳಿಯ ಜೆಪಿನಗರದಲ್ಲಿರುವ ಕೌಶಲ್ಯಾಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ ಮನೆ ಮೇಲೂ ದಾಳಿ ನಡೆಸಲಾಗಿದೆ.

ಬಳ್ಳಾರಿಯಲ್ಲಿ ಎಷ್ಟು ಕಡೆ ದಾಳಿ?: ರಾಜ್ಯದ ಹಲವೆಡೆ ಆಸ್ತಿ ಮಾಡಿರುವ ಆರೋಪ ಕೇಳಿಬಂದ ಹಿನ್ನೆಲೆ ಬೆಂಗಳೂರು ನಿವಾಸಿ ಆಗಿರುವ ಅಧಿಕಾರಿ ಮಾರುತಿ ಬಗಲಿ ವಿರುದ್ಧ ಲೋಕಾಯುಕ್ತ ಸಮರ ಸಾರಿದೆ. ಬಳ್ಳಾರಿಯಲ್ಲಿ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ಮಾಡಿದ್ದು, ಬೆಂಗಳೂರು ಟೌನ್ ಮತ್ತು ರೂರಲ್ ಪ್ಲ್ಯಾನಿಂಗ್ ಆಫೀಸರ್ ಮಾರುತಿ ಬಗಲಿಗೆ ಸೇರಿದ 3 ಸ್ಥಳಗಳ ಮೇಲೆ ದಾಳಿ ನಡೆಸಿದ ಬೆಂಗಳೂರು ಲೋಕಾಯುಕ್ತ ತಂಡ ಪರಿಶೀಲನೆ ನಡೆಸಿದೆ.

ಕೊಪ್ಪಳದಲ್ಲಿ ಲೋಕಾಯುಕ್ತ ರೇಡ್: ಕೊಪ್ಪಳ ನಗರದಲ್ಲೂ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ಮಲಗಿದ್ದ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಉಪ ನಿದೇರ್ಶಕ ಶೆಕು ಚವ್ಹಾಣ್​ಗೆ ಶಾಕ್ ನೀಡಿದ್ದಾರೆ. ​

ಲೋಕಾಯುಕ್ತ ಇನ್ಸ್‌ಪೆಕ್ಟರ್ ಸುನೀಲ ಮೇಗಳಮನಿ ನೇತೃತ್ವದಲ್ಲಿ ಅಭಿಷೇಕ ಬಡಾವಣೆ ಹಾಗೂ ಕೀರ್ತಿ ಕಾಲೋನಿಯಲ್ಲಿರುವ ಶೇಕು ಚವ್ಹಾಣ್​ಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಹುಬ್ಬಳ್ಳಿಯಲ್ಲೂ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಹೀಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಷ್ಟಾಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸಮರ ಸಾರಿ ಬೆಳ್ಳಂಬೆಳಗ್ಗೆ ಚಳಿ ಬಿಡಿಸುವ ಕೆಲಸ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+