Lokayukta Raids: ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಭಷ್ಟಾಧಿಕಾರಿಗಳಿಗೆ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು
Lokayukta Raid: ಸಾಮಾನ್ಯವಾಗಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡುತ್ತಲಿರುತ್ತಾರೆ. ಹಾಗೆಯೇ ಇಂದು (ಮೇ 15) ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ 'ಲೋಕಾ' ದಾಳಿ ನಡೆದಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದ ಹಲವೆಡೆ 7 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ 12 ಕಡೆ, ಬೆಂಗಳೂರು ಗ್ರಾಮಾಂತರ 8, ತುಮಕೂರು 7, ಯಾದಗಿರಿ 5, ಮಂಗಳೂರು 4 ಹಾಗೂ ವಿಜಯಪುರದಲ್ಲಿ 4 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ತುಮಕೂರಿನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಸರ್ವೇ ಮೇಲ್ವಿಚಾರಕ ಮಂಜುನಾಥ್, ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ, ಬೆಂಗಳೂರು ನಗರದ ನಗರ ಮತ್ತು ಗ್ರಾಮೀಣ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿ.ವಿ., ಕಾನೂನು ಮಾಪನಶಾಸ್ತ್ರದ ಇನ್‌ಸ್ಪೆಕ್ಟರ್ ಎಚ್.ಆರ್.ನಟರಾಜ್, ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕು ಕಚೇರಿಯ ಎಸ್.ಡಿ.ಎ. ಅನಂತ್ ಕುಮಾರ್ ಹಾಗೂ ಯಾದಗಿರಿಯ ಶಹಾಪುರ ತಾಲೂಕಿನ ಉಮಾಕಾಂತ ಎಂಬವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
* ಯಾದಗಿರಿ ಜಿಲ್ಲೆಯ ಶಹಪೂರ ತಾಲೂಕಿಮ ತಹಸೀಲ್ದಾರ್ ಉಮಾಕಾಂತ ಹಳ್ಳೆ ಅವರ ಮನೆ, ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಶಹಾಪೂರ ತಹಸಿಲ್ದಾರ ಮನೆ, ಶಹಾಪೂರದಲ್ಲಿರುವ ತಹಸಿಲ್ದಾರ್ ಕಛೇರಿ ಮೇಲೂ ದಾಳಿ ಮಾಡಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್.ಇನಾಂದಾರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಇನ್ಸ್‌ಪೆಕ್ಟರ್ ಗಳಾದ ಸಿದ್ದರಾಯ, ಸಂಗಮೇಶ, ಅರ್ಜುನಪ್ಪ, ಅಕ್ಕಮಹಾದೇವಿ, ಬಾಬಾ ಸಾಹೇಬ ಪಾಟೀಲ್ ಕೂಡ ಇದ್ದಾರೆ.
* ತುಮಕೂರಿನ ನಿರ್ಮಿತಿ ಕೇಂದ್ರ ವ್ಯವಸ್ಥಾಪಕ ನಿರ್ದೇಶಕ ರಾಜಶೇಖರ ಅವರ ಮನೆ ಹಾಗೂ ಕಚೇರಿಗಳ ಮೇಲೆ, ತುಮಕೂರು ಅಶೋಕ ನಗರ ಎಸ್.ಐ.ಟಿಯ 4ನೇ ಕ್ರಾಸ್‌ನಲ್ಲಿರುವ ರಾಜಶೇಖರ ಸಹೋದರನ ಮನೆ ಮಾಡಲಾಗಿದೆ.
* ಮಂಗಳೂರು ಜಿಲ್ಲೆಯ ಸರ್ವೆ ಮೇಲ್ವಿಚಾರಕ ಮಂಜುನಾಥ್ ಅವರು ಆದಾಯಕ್ಕಿಂತ ಅಧಿಕ ಅಪಾರ ಆಸ್ತಿ ಗಳಿಕೆಯ ಆರೋಪ ಹಿನ್ನೆಲೆ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಲಾಗಿದೆ. ಲೋಕಾಯುಕ್ತ ಎಸ್.ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
* ವಿಜಯಪುರ ಅಂಬೇಡ್ಕರ್ ನಿಗಮದ ವ್ಯವಸ್ಥಾಪಕಿ ಆಗಿದ್ದ ರೇಣುಕಾ ಸಾತರ್ಲೆ ಅವರ ಮೇಲಿದ್ದ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಅವರ ನಿವಾಸಗಳು, ಸೊಲ್ಲಾಪುರ ಅಪಾರ್ಟಮೆಂಟ್ ಹಾಗೂ ವಿಜಯಪುರ ನಗರದ ರಿಂಗ್ ರೋಡ್ ಬಳಿಯ ಮನೆಯ ಮೇಲೆ ದಾಳಿ ನಡೆಸಲಾಗಿದೆ. ವ್ಯವಸ್ಥಾಪಕಿಯಾಗಿದ್ದರು.












Click it and Unblock the Notifications