ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಾಯುಕ್ತರ ಪದಚ್ಯುತಿ, ಕಾನೂನು ಇಲಾಖೆ ಹೇಳುವುದೇನು?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಜುಲೈ 07 : ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ನ್ಯಾ.ಭಾಸ್ಕರರಾವ್ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಮತ್ತು ವಿವಿಧ ಸಂಘಟನೆಗಳು ಪಟ್ಟು ಹಿಡಿದಿವೆ. ಎಸ್‌ಐಟಿ ವರದಿ ಬರುವ ತನಕ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದು ಲೋಕಾಯುಕ್ತರು ಸ್ಪಷ್ಟಪಡಿಸಿದ್ದಾರೆ.

ಕಾನೂನು ಇಲಾಖೆಯ ಅಧಿಕಾರಿಗಳು ಒನ್ ಇಂಡಿಯಾಕ್ಕೆ ನೀಡಿರುವ ಮಾಹಿತಿಯಂತೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ನ್ಯಾಯಮೂರ್ತಿಗಳ (ವಿಚಾರಣಾ) ಕಾಯ್ದೆ 1968ರ ಪ್ರಕಾರ ಅದನ್ನು ಪರಿಶೀಲನೆ ನಡೆಸಬೇಕಾಗುತ್ತದೆ. [ರಜೆ ಮೇಲೆ ತೆರಳಿದ ಲೋಕಾಯುಕ್ತರು]

lokayukta

ಲೋಕಾಯುಕ್ತದಲ್ಲಿನ ಹಗರಣದ ತನಿಖೆ ನಡೆಸಲು ಕರ್ನಾಟಕ ಸರ್ಕಾರ ವಿಶೇಷ ತನಿಖಾ ದಳವನ್ನು ರಚನೆ ಮಾಡಿದೆ. ಈ ಎಸ್‌ಐಟಿ ವರದಿ ಬಂದ ಬಳಿಕ ತಮ್ಮ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇನೆ ಎಂದು ಲೋಕಾಯುಕ್ತ ನ್ಯಾ.ಭಾಸ್ಕರರಾವ್ ಹೇಳಿದ್ದಾರೆ. [ಲೋಕಾಯುಕ್ತದಲ್ಲಿ ಇದೇನಿದು ಹಗರಣ?]

ಕಾನೂನು ಪ್ರಕ್ರಿಯೆಗಳು : ಲೋಕಾಯುಕ್ತ ಹಗರಣದ ತನಿಖೆಗೆ ವಿಶೇಷ ತನಿಖಾ ದಳ ರಚನೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಪ್ರತಿಪಕ್ಷಗಳು ಲೋಕಾಯುಕ್ತರನ್ನು ಪದಚ್ಯುತಿಗೊಳಿಸಬೇಕು ಎಂದು ಒತ್ತಾಯಿಸುತ್ತಿವೆ. ಈ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯಪಡೆಯಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ.

ನ್ಯಾಯಮೂರ್ತಿಗಳ (ವಿಚಾರಣಾ) ಕಾಯ್ದೆ ಅನ್ವಯ ಕ್ರಮ ಕೈಗೊಂಡು ಲೋಕಾಯುಕ್ತರನ್ನು ಪದಚ್ಯುತಿ ಗೊಳಿಸಬಹುದಾಗಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಗೆ ಈ ಕಾಯ್ದೆ ಅನ್ವಯವಾಗುತ್ತದೆ. ಲೋಕಾಯುಕ್ತರು ನಿವೃತ್ತ ನ್ಯಾಯಮೂರ್ತಿಗಳಾಗಿರುವುದರಿಂದ ಈ ಕಾಯ್ದೆ ವ್ಯಾಪ್ತಿಗೆ ಒಳಪಡಲಿದ್ದಾರೆ.

ಲೋಕಾಯುಕ್ತರನ್ನು ಪದಚ್ಯುತಿಗೊಳಿಸಬೇಕು ಎಂದು ಒತ್ತಾಯಿಸುತ್ತಿರುವ ಪ್ರತಿಪಕ್ಷಗಳು ಪದಚ್ಯುತಿ ನಿರ್ಣಯವನ್ನು ಮಂಡಿಸಲು ಶಾಸಕರ ಬಲವನ್ನು ಹೊಂದಿರಬೇಕು. ವಿಧಾನಸಭೆಯ 100 ಮತ್ತು ವಿಧಾನಪರಿಷತ್ತಿನಲ್ಲಿ 100ಕ್ಕಿಂತ ಕಡಿಮೆ ಸಂಖ್ಯೆಯ ಸದಸ್ಯರು ಇದಕ್ಕೆ ಒಪ್ಪಿಗೆ ನೀಡಿರಬೇಕು.

ವಿಧಾನಸಭೆಯ ಸ್ಪೀಕರ್ ಅವರಿಗೆ ಶಾಸಕರ ಸಂಖ್ಯೆ ಸಾಕಾಗುವಷ್ಟಿದೆ ಎಂದು ಅನ್ನಿಸಿದರೆ ಆರೋಪಗಳ ಕುರಿತು ವಿಚಾರಣೆ ನಡೆಸಲು ಸಮಿತಿಯನ್ನು ರಚನೆ ಮಾಡುತ್ತಾರೆ. ಈ ಸಮಿತಿ ವರದಿ ನೀಡಿದ ಬಳಿಕ ಮುಂದಿನ ಪ್ರಕ್ರಿಯೆಗಳು ಆರಂಭವಾಗುತ್ತವೆ.

ಕರ್ನಾಟಕ ಲೋಕಾಯುಕ್ತದಲ್ಲಿನ ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿಬಿಐ ತನಿಖೆ ಆಗತ್ಯವಿಲ್ಲ, ಎಸ್‌ಐಟಿ ತನಿಖೆ ಸಾಕು ಎಂದು ಹೇಳಿದ್ದಾರೆ.

English summary
Amidst all the hue and cry to remove Justice Bhaskar Rao from the post of Karnataka Lokayukta. Karnataka legal department has said that unless and until a procedure is followed no action can be taken.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X