ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯಾ.ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರು : ಸಿದ್ದರಾಮಯ್ಯ

|
Google Oneindia Kannada News

Recommended Video

ಕರ್ನಾಟಕ ಲೋಕಾಯುಕ್ತ ನ್ಯಾ ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರು, ಸಿದ್ದು ಹೇಳಿಕೆ | Oneindia Kannada

ಬೆಂಗಳೂರು, ಮಾರ್ಚ್ 07 : 'ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನ್ಯಾ.ವಿಶ್ವನಾಥ್ ಶೆಟ್ಟಿ ಅವರಿಗೆ ಲೋಕಾಯುಕ್ತ ಕಚೇರಿಯಲ್ಲಿಯೇ ಚಾಕು ಇರಿಯಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮಧ್ಯಾಹ್ನ 2.30ಕ್ಕೆ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದರು. ಗೃಹ ಸಚಿವ ರಾಮಲಿಂಗಾ ರೆಡ್ಡಿ, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಲವರು ಜೊತೆಗಿದ್ದರು.

LIVE : ಚೂರಿ ಇರಿತ : ಲೋಕಾಯುಕ್ತ ವಿಶ್ವನಾಥ್ ಅವರಿಗೆ ಆಪರೇಷನ್LIVE : ಚೂರಿ ಇರಿತ : ಲೋಕಾಯುಕ್ತ ವಿಶ್ವನಾಥ್ ಅವರಿಗೆ ಆಪರೇಷನ್

ಮಲ್ಯ ಆಸ್ಪತ್ರೆಯಲ್ಲಿ ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವೈದ್ಯರ ಜೊತೆ ಮಾತುಕತೆ ನಡೆಸಿದರು.

Vishwanath Shetty

ಆಸ್ಪತ್ರೆಯಲ್ಲಿ ವೈದ್ಯರ ಜೊತೆ ಸಿದ್ದರಾಮಯ್ಯ ಸಭೆ ನಡೆಸಿದರು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಘಟನೆ ಬಗ್ಗೆ ತನಿಖೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾಧ್ಯಮಗಳ ಜೊತೆ ಮಾತು

* ಪ್ರಾಥಮಿಕವಾಗಿ ಪರೀಕ್ಷೆ ನಡೆಸಿದ ವೈದ್ಯರು ಪ್ರಾಣಕ್ಕೆ ಅಪಾಯವಿಲ್ಲ ಎಂದು ಹೇಳಿದ್ದಾರೆ. ತೇಜ್‌ ರಾಜ್ ಶರ್ಮಾ ಎಂಬುವವರು ಚಾಕು ಇರಿದಿದ್ದಾರೆ.

* ಲೋಕಾಯುಕ್ತರಿಗೆ ಗನ್ ಮ್ಯಾನ್ ಭದ್ರತೆ ಒದಗಿಸಲಾಗಿದೆ. ಅವರು ಛೇಂಬರ್ ಹೊರಗೆ ಇದ್ದರು. ಛೇಂಬರ್ ಒಳ ಹೋಗಿದ್ದ ತೇಜ್ ರಾಜ್ ಚಾಕು ಇರದಿದ್ದಾರೆ.

* ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ, ಆದೇಶ ನೀಡಿದ್ದೇನೆ

* ಭದ್ರತಾ ಲೋಪವಿದ್ದರೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ

ಎಂದು ಸಿದ್ದರಾಮಯ್ಯ ವಿವರಣೆ ನೀಡಿದರು.

English summary
Karnataka Chief Minister Siddaramaiah visited Mallya hospital Bengaluru. Lokayukta Vishwanath Shetty admitted to hospital. Vishwanath Shetty was stabbed in his office on Wednesday afternoon. Vishwanath Shetty out of danger said Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X