• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದಲ್ಲಿ ವಿದ್ಯುತ್ ಕೊರತೆ : ಶಾಶ್ವತ ಪರಿಹಾರಗಳು

By ಭಾಸ್ಕರ್ ಭಟ್
|

ಬೆಂಗಳೂರು, ಸೆ.14 : ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ಮಳೆಯ ಕೊರತೆಯಿಂದಾಗಿ ಜಲಾಶಯಗಳು ಭರ್ತಿ ಆಗಿಲ್ಲ. ಇದರಿಂದ ವಿದ್ಯುತ್ ಕೊರತೆ ಉಂಟಾಗಿ ಲೋಡ್ ಶೆಡ್ಡಿಂಗ್ ಜಾರಿಯಲ್ಲಿದೆ.

ಇಂಧನ ಇಲಾಖೆ ವಿದ್ಯುತ್ ಕೊರತೆಯನ್ನು ನಿವಾರಿಸಲು ತಾತ್ಕಾಲಿಕ ಕ್ರಮಗಳನ್ನು ಕೈಗೊಂಡಿದೆ. 900 ಮೆಗಾವಾಟ್ ವಿದ್ಯುತ್ ಅನ್ನು ವಿವಿಧ ಮೂಲಗಳಿಂದ ಖರೀದಿ ಮಾಡಲಿದೆ. ವಿದ್ಯುತ್ ಕೊರತೆ ಇನ್ನೂ ಹೆಚ್ಚಳವಾದರೆ ಅಗತ್ಯಕ್ಕೆ ಅನುಗುಣವಾಗಿ ಖರೀದಿ ಮಾಡಲು ಸಿದ್ಧವಾಗಿದೆ. [ವಿದ್ಯುತ್ ಸಮಸ್ಯೆಗೆ ತಾತ್ಕಾಲಿಕ ಕ್ರಮಗಳು]

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಕೊರತೆಯನ್ನು ನಿವಾರಿಸಲು ಇಂಧನ ಇಲಾಖೆ ಶಾಶ್ವತ ಕ್ರಮಗಳನ್ನು ಕೈಗೊಂಡಿದೆ. ಹಲವಾರು ಯೋಜನೆಗಳು ಪ್ರಗತಿಯಲ್ಲಿದ್ದು ವಿದ್ಯುತ್ ಉತ್ಪಾದನೆ ಆರಂಭಿಸಲಿವೆ. ಪಾವಗಡದಲ್ಲಿ ಸೋಲಾರ್ ಪಾರ್ಕ್‌ಅನ್ನು ನಿರ್ಮಾಣ ಮಾಡಲಾಗುತ್ತಿದೆ.[ಬೆಂಗಳೂರಲ್ಲಿ 4 ಗಂಟೆ ಲೋಡ್ ಶೆಡ್ಡಿಂಗ್]

ಶಾಶ್ವತ ಕ್ರಮಗಳು : ತುಮಕೂರು ಜಿಲ್ಲೆಯ ಪಾವಗಡದಲ್ಲಿ ಏಷ್ಯಾದ ಅತೀ ದೊಡ್ಡ ಸೋಲಾರ್ ಪಾರ್ಕ್ ನಿರ್ಮಾಣವಾಗುತ್ತಿದೆ. ಈ ಘಟಕ 2000 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲಿದೆ. ಸೋಲಾರ್ ಪಾರ್ಕ್ ನಿರ್ಮಾಣಕ್ಕಾಗಿ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಈ ಘಟಕದ ಕಾಮಗಾರಿ ಆರಂಭಗೊಂಡರೆ 30 ತಿಂಗಳಿನಲ್ಲಿ ಪೂರ್ಣಗೊಳಿಸಲಾಗುತ್ತದೆ.

ವಿವಿಧ ಉಷ್ಣ ವಿದ್ಯುತ್ ಸ್ಥಾವರಗಳ ನಿರ್ಮಾಣ ಕಾರ್ಯವನ್ನು ಸರ್ಕಾರ ಆರಂಭಿಸಿದೆ. ಬಳ್ಳಾರಿಯಲ್ಲಿ 700 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣವಾಗುತ್ತಿದ್ದು, 2015ರ ನವೆಂಬರ್‌ನಿಂದ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ.

ಬಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕೂಡಗಿ ಬಳಿ ಉಷ್ಣ ವಿದ್ಯುತ್ ಸ್ಥಾವರ ನಿರ್ಮಾಣಗೊಳ್ಳಲಿದೆ. ಘಟಕ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಮತ್ತು ನೀರಿನ ವ್ಯವಸ್ಥೆಯನ್ನು ಈಗಾಗಲೇ ಒದಗಿಸಲಾಗಿದೆ. 2016ರ ಮೇ ವೇಳೆಗೆ ಮೊದಲನೇ ಘಟಕದಿಂದ 800 ಮೆಗಾವಾಟ್ ವಿದ್ಯುತ್ ದೊರೆಯಲಿದೆ. [ಮಾಹಿತಿ : Karnataka Government - Updates]

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka has witnessed worst drought situation. Hydroelectric plants water conserved for drinking purposes so power generation has come down. Energy department has taken long term steps to solve power crisis in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more