ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸಕ ಜಮೀರ್ ಅಹ್ಮದ್ ಬೆಂಬಲಕ್ಕೆ ಬಂದ ಸಿದ್ದರಾಮಯ್ಯ!

|
Google Oneindia Kannada News

ಬೆಂಗಳೂರು, ಸೆ. 11: ಡ್ರಗ್ ಮಾಫಿಯಾದಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮೇಲೆ ಆರೋಪ ಬರುತ್ತಿದ್ದಂತೆಯೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಹಾಯಕ್ಕೆ ಧಾವಿಸಿದ್ದಾರೆ. ತಮ್ಮ ಮೇಲೆ ಬಂದಿರುವ ಆರೋಪ ಹಾಗೂ ಪ್ರಶಾಂತ್ ಸಂಬರಗಿ ಮೇಲೆ ದೂರು ದಾಖಲಿಸಿರುವ ಕುರಿತು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಶಾಸಕ ಜಮೀರ್ ಅಹ್ಮದ್ ಅವರು ಇಂದು ಮಾಹಿತಿ ಕೊಟ್ಟಿದ್ದರು. ರಾಜಕೀಯ ದುರುದ್ದೇಶದಿಂದ ತಮ್ಮ ಮೇಲೆ ವಿನಾಕಾರಣ ಆರೋಪ ಮಾಡಲಾಗುತ್ತಿದೆ ಎಂದು ಜಮೀರ್ ಅಹ್ಮದ್ ಖಾನ್ ಅವರು ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದರು.

ಶಾಸಕ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಮಾತನಾಡಿದ ಬಳಿದ ಮಾಧ್ಯಮ ಪ್ರಕಟಣೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯ ಬಿಜೆಪಿ ಸರ್ಕಾರ ಪ್ರತಿಬಾರಿಯೂ ತನ್ನ ಆಡಳಿತದ ವೈಫಲ್ಯವನ್ನು ಮುಚ್ಚಿ ಹಾಕಲು ವಿರೋಧ ಪಕ್ಷಗಳ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುವ ಕುತಂತ್ರ ಮಾಡುತ್ತಾ ಬಂದಿದೆ. ಈಗ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿಯೂ ಸರ್ಕಾರ ಅದನ್ನೇ ಮಾಡುತ್ತಿದೆ. ಸತ್ಯವನ್ನು ಮುಚ್ಚಿಡಬಹುದು, ನಾಶ ಮಾಡಲು ಆಗುವುದಿಲ್ಲ, ನೆನಪಿರಲಿ ಎಂದು ಎಚ್ಚರಿಸಿದ್ದಾರೆ.

ಬಿಜೆಪಿ ಕೆಟ್ಟ ಚಾಳಿ

ಬಿಜೆಪಿ ಕೆಟ್ಟ ಚಾಳಿ

ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊಗಳನ್ನು ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ. ಈ ಮೊಬೈಲ್ ಯುಗದಲ್ಲಿ ಯಾರು, ಎಲ್ಲಿ ಯಾರ ಜೊತೆಯಲ್ಲಿ ಫೋಟೋ ತೆಗೆಸಿಕೊಳ್ಳುತ್ತಾರೋ ಗೊತ್ತಾಗುವುದಿಲ್ಲ. ಆ ಕ್ಷಣದಲ್ಲಿ ಅವರೆಲ್ಲರ ಜಾತಕ ನೋಡಿ ಫೋಟೋ ತೆಗೆಸಿಕೊಳ್ಳಲು ಆಗುವುದಿಲ್ಲ. ಆದರೆ ಅದನ್ನೇ ಆಧಾರವಾಗಿಟ್ಟುಕೊಂಡು ಹಗರಣಗಳ ಜೊತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ವ್ಯಕ್ತಿಗಳ ಹೆಸರು ಜೋಡಿಸುವುದು ಅಕ್ಷಮ್ಯ ಎನ್ನುವ ಮೂಲಕ ಆಪ್ತ ಜಮೀರ್ ಅಹ್ಮದ್ ಅವರ ಮೇಲೆ ಬಿಜೆಪಿ ನಾಯಕರು ಮಾಡುತ್ತಿರುವ ಆರೋಪವನ್ನು ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಖಂಡಿಸಿದ್ದಾರೆ.

ತಮ್ಮವರ ರಕ್ಷಣೆ

ತಮ್ಮವರ ರಕ್ಷಣೆ

ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿದ್ದಾರೆನ್ನಲಾದ ತಮ್ಮ(ಬಿಜೆಪಿ)ವರನ್ನು ರಕ್ಷಿಸುವ ಮತ್ತು ಡ್ರಗ್ಸ್ ಹಗರಣವನ್ನು ಬಳಸಿಕೊಂಡು ವಿರೋಧ ಪಕ್ಷದ ನಾಯಕರ ಚಾರಿತ್ರ್ಯಹರಣ ಮಾಡುವ ಪ್ರಯತ್ನವನ್ನೂ ರಾಜ್ಯ ಸರ್ಕಾರ ಮಾಡುತ್ತಿದ್ದು ಇದನ್ನು ನಮ್ಮ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.


ಕಳೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿರುವ ನಟಿ ರಾಗಿಣಿ ದ್ವಿವೇದಿ ಅವರ ಹೆಸರನ್ನು ಪ್ರಸ್ತಾಪಿಸದೇ ಸಿದ್ದರಾಮಯ್ಯ ಅವರು ಆರೋಪ ಮಾಡಿದ್ದಾರೆ. ಬಿಜೆಪಿಯೊಂದಿಗೆ ಗುರುತಿಸಿಕೊಂಡವರು ನೇರವಾಗಿ ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿ ಬಂಧನಕ್ಕೆ ಒಳಗಾಗಿರುವುದನ್ನು ಪರೋಕ್ಷವಾಗಿ ಹೇಳಿದ್ದಾರೆ.

ವೈಫಲ್ಯ ಮುಚ್ಚಿಡಲು

ವೈಫಲ್ಯ ಮುಚ್ಚಿಡಲು

ಮಾರಣಾಂತಿಕವಾದ ಮಾದಕವಸ್ತುಗಳ ಹಾವಳಿ ಬಗ್ಗೆ ರಾಜ್ಯ ಸರ್ಕಾರ ನಡೆಸುತ್ತಿರುವ ತನಿಖೆಯನ್ನು ಕಾಂಗ್ರೆಸ್ ಪಕ್ಷವು ಸ್ವಾಗತಿಸುತ್ತದೆ. ಆದರೆ ತನಿಖೆ ಸಾಗುತ್ತಿರುವ ಹಾದಿಯನ್ನು ನೋಡಿದರೆ ಸರ್ಕಾರಕ್ಕೆ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷಿಸುವ ಉದ್ದೇಶಕ್ಕಿಂತಲೂ ಕೊರೊನಾ ಹಾವಳಿ ಮತ್ತು ಅತಿವೃಷ್ಟಿ ಪರಿಹಾರದ ತನ್ನ ವೈಫಲ್ಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ದುರುದ್ದೇಶ ಮುಖ್ಯವಾಗಿರುವಂತೆ ಕಾಣುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಮಾದಕ ವಸ್ತುಗಳ ಹಾವಳಿಯನ್ನು ನಿರ್ಮೂಲನೆ ಮಾಡುವ ಪ್ರಾಮಾಣಿಕ ಉದ್ದೇಶ ನಿಮಗಿರುವುದಾದರೆ, ನಿಮ್ಮ ಸಂಪುಟದ ಸಚಿವರು ಮತ್ತು ನಿಮ್ಮ ಪಕ್ಷದ ನಾಯಕರು ಬೀದಿಯಲ್ಲಿ ನಿಂತು ಬಾಯಿಗೆ ಬಂದ ಹಾಗೆ ಮಾತನಾಡುತ್ತಿರುವುದನ್ನು ನಿಲ್ಲಿಸಿ. ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮುಕ್ತ ಹಸ್ತ ನೀಡಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Recommended Video

Zameer Ahmed ಗರಂ Sambargi ವಿರುದ್ಧ ಬಿತ್ತು ಸಿಕಾಪಟ್ಟೆ ಸೆಕ್ಷನ್ | Oneindia Kannada
ಬೊಮ್ಮಾಯಿ ಮೇಲೆ ಭರವಸೆ

ಬೊಮ್ಮಾಯಿ ಮೇಲೆ ಭರವಸೆ

ನಿಮ್ಮ ಮಾತಿಗೆ ತಲೆಯಾಡಿಸುವವರನ್ನು ಸೇರಿಸಿಕೊಂಡು ಡಿ.ಜೆ. ಹಳ್ಳಿ ಗಲಭೆ ಬಗ್ಗೆ ತನಿಖೆಯ ಪ್ರಹಸನ ಮಾಡಿ ವರದಿ ಬರೆಸಿಕೊಂಡು ಪೊಲೀಸ್ ತನಿಖೆಯ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಿದ್ದೀರಿ. ಈಗ ಡ್ರಗ್ಸ್ ಹಗರಣದ ತನಿಖೆಯ ಅನಧಿಕೃತ ವಿವರಗಳನ್ನು ಸರಣಿಯಾಗಿ ಸೋರಿಕೆ ಮಾಡಿ ಪೊಲೀಸ್ ತನಿಖೆಯ ಹಾದಿ ತಪ್ಪಿಸುತ್ತಿದ್ದೀರಿ. ನಿಮಗೆ ವಿಶ್ವಾಸ ಇಲ್ಲದಿರುವುದು ಪೊಲೀಸರ ಮೇಲೋ? ಗೃಹ ಸಚಿವರ ಮೇಲೋ? ಎಂದು ಸಿಎಂ ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

English summary
Opposition leader Siddaramaiah has rushed to help MLA Zamir Ahmad Khan. MLA Zamir Ahmad Khan met LOP Siddaramaiah today and informed him about the allegations leveled against him. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X