ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ; ಭೀಕರ ಅಪಘಾತ
ಚಿಕ್ಕಮಗಳೂರು, ಮಾರ್ಚ್ 01: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಶುಕ್ರವಾರ(ಫೆಬ್ರವರಿ 28) ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಅದೃಷ್ಟವಶಾತ್ವಿಜಯೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಸೇರಿದಂತೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಡ್ರೈವರ್ ವಿರುದ್ಧ ಕೇಸ್ ಮಾಡಿದ್ದಾರೆ.

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಪಕ್ಷದ ಕಡೆಯಿಂದ ನೀಡಲಾದ ಅಧಿಕೃತ ಕಾರು ಇದಾಗಿತ್ತು. ವಿಜಯೇಂದ್ರ ಅವರು ತಮ್ಮ ಪರ್ಸನಲ್ ಕಾರಿನಲ್ಲಿ ಇದ್ದರು. ಪಕ್ಷ ನೀಡಿದ್ದ ಕಾರಿನಲ್ಲಿ ವಿಜಯೇಂದ್ರ ಅವರ ಫೋಟೋಗ್ರಾಫರ್ ಮತ್ತು ಪಿಎ ಸಂಚರಿಸುತ್ತಿದ್ದರು. ಚಿಕ್ಕಮಗಳೂರಿನಿಂದ ಶಿಖಾರಿಪುರ ತೆರಳುವ ವೇಳೆ ಆ್ಯಕ್ಸಿಡೆಂಟ್ ಆಗಿದೆ.
ಬಿ ವೈ ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಅವರು ಅಪಘಾತದಿಂದ ಆಗಿದ್ದಾರೆ. ಅಲ್ಲದೇ ಅಪಘಾತಕ್ಕೀಡಾದ ಬಿಜೆಪಿ ರಾಜ್ಯಾಧ್ಯಕ್ಷರ ಬಿ ವೈ ವಿಜಯೇಂದ್ರಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊರ ಜಿಲ್ಲೆಗಳಿಗೆ ತೆರಳುವಾಗ ವಿಜಯೇಂದ್ರ ಅವರು ಇದೇ ಕಾರನ್ನು ಬಳಸುತ್ತಿದ್ದರು. ಆದರೆ, ಅದೃಷ್ಟವಶಾತ್ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಮತ್ತೊಂದು ಕಾರಿನಲ್ಲಿ ವಿಜಯೇಂದ್ರ ಅವರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಬಿ ವೈ ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪ್ರಕರಣದ ಕುರಿತು ಸದ್ಯ ಪೊಲೀಸರು ಅಪಘಾತ ಮಾಡಿದ ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆ ಲಾರಿಯೂ ಮರದ ಪೀಸ್ ತುಂಬಿಕೊಂಡು ಚಿಕ್ಕಮಗಳೂರು ನಗರದಿಂದ ಮುಂಬಯಿಗೆ ತೆರಳುತ್ತಿತ್ತು. ಸದ್ಯ ಪೊಲೀಸರು ಕಾರು ಸೇರಿದಂತೆ ಲಾರಿಯನ್ನು ಸಹ ಗ್ರಾಮಾಂತರ ಠಾಣೆಗೆ ತೆಗೆದುಕೊಂಡು ಹೋಗಿದ್ದು, ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications