ತರೀಕೆರೆ: ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು, ಸಾವಿನಲ್ಲಿ ಒಂದಾದ್ರು
ತರೀಕೆರೆಯ ಲಾಡ್ಜೊಂದರಲ್ಲಿ ಯುವ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿ ಸಾವನ್ನಪ್ಪಿರುವ ಘಟನೆ ಸೋಮವಾರದಂದು ನಡೆದಿದೆ. ಇಬ್ಬರು ಬೇರೆ ಬೇರೆ ಜಾತಿಗೆ ಸೇರಿದವರಾಗಿದ್ದು, ಮದುವೆಗೆ ಮನೆಯಲ್ಲಿ ಒಪ್ಪಿರಲಿಲ್ಲ ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು, ಮಾರ್ಚ್ 06: ಜಿಲ್ಲೆಯ ತರೀಕೆರೆಯ ಲಾಡ್ಜೊಂದರಲ್ಲಿ ಯುವ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿ ಸಾವನ್ನಪ್ಪಿರುವ ಘಟನೆ ಸೋಮವಾರದಂದು ನಡೆದಿದೆ. ಇಬ್ಬರು ಬೇರೆ ಬೇರೆ ಜಾತಿಗೆ ಸೇರಿದವರಾಗಿದ್ದು, ಮದುವೆಗೆ ಮನೆಯಲ್ಲಿ ಒಪ್ಪಿರಲಿಲ್ಲ ಎಂದು ತಿಳಿದು ಬಂದಿದೆ.
ತರೀಕೆರೆ ಪಟ್ಟಣದಲ್ಲಿರುವ ಸೂರ್ಯ ಲಾಡ್ಜ್ ನಲ್ಲಿ ಇಬ್ಬರ ಶವ ಪತ್ತೆಯಾಗಿದೆ. ಯುವಕ ನೇಣು ಬಿಗಿದ ಸ್ಥಿತಿಯಲ್ಲಿದ್ದರೆ, ಯುವತಿ ಹಾಸಿಗೆ ಮೇಲೆ ಮಲಗಿರುವ ಸ್ಥಿತಿಯಲ್ಲಿದ್ದಾರೆ. ನಿದ್ರೆ ಮಾತ್ರೆ ಸೇವಿಸಿ ಯುವತಿ ಮೃತಪಟ್ಟಿದ್ದಾಳೆ.

ಇಬ್ಬರು ತರೀಕೆರೆ ತಾಲೂಕಿನ ಕೆಂಚಾಪುರದ ನಿವಾಸಿಗಳು ಎಂದು ಗುರುತಿಸಲಾಗಿದ್ದು,ಮೃತ ಯುವಕನ ಹೆಸರು ನವೀನ್ (26) ಹಾಗೂ ಯುವತಿ ಕಾವ್ಯ ಎಂದು ತಿಳಿದು ಬಂದಿದೆ.
ಇಬ್ಬರ ಬೇರೆ ಬೇರೆ ಜಾತಿಗೆ ಸೇರಿದವರಾಗಿದ್ದು, ಮದುವೆಗೆ ಮನೆಯಲ್ಲಿ ಒಪ್ಪಿಗೆ ನೀಡಿರಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ತರೀಕೆರೆ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.











Click it and Unblock the Notifications